ಇನ್ನು ಮುಂದೆ ಕಡಿಮೆ ಸಿನಿಮಾಗಳಲ್ಲಿ ನಟಿಸುವೆ: ರಕ್ಷಿತ್ ಶೆಟ್ಟಿ ಗುರಿ ಬೇರೆಯೇ ಇದೆ

Rakshit Shetty: 'ಸಪ್ತ ಸಾಗರದಾಚೆ ಎಲ್ಲೊ' ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿರುವ ರಕ್ಷಿತ್ ಶೆಟ್ಟಿ, ತಾವಿನ್ನು ಹೆಚ್ಚು ಸಿನಿಮಾದಲ್ಲಿ ನಟಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಇನ್ನು ಮುಂದೆ ಕಡಿಮೆ ಸಿನಿಮಾಗಳಲ್ಲಿ ನಟಿಸುವೆ: ರಕ್ಷಿತ್ ಶೆಟ್ಟಿ ಗುರಿ ಬೇರೆಯೇ ಇದೆ
ರಕ್ಷಿತ್ ಶೆಟ್ಟಿ
Follow us
ಮಂಜುನಾಥ ಸಿ.
|

Updated on: Aug 17, 2023 | 8:59 PM

ನಟ ರಕ್ಷಿತ್ ಶೆಟ್ಟಿ (Rakshit Shetty) ಕನ್ನಡದ ಪ್ರತಿಭಾವಂತ ನಟರಲ್ಲಿ ಒಬ್ಬರು. ಸ್ಟಾರ್ ಆಗುವತ್ತ ದಾಪುಗಾಲು ಹಾಕಿರುವ ರಕ್ಷಿತ್ ಶೆಟ್ಟಿ, ತಮ್ಮ ಈ ಹಿಂದಿನ ‘777 ಚಾರ್ಲಿ‘ (777 Charlie) ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ನಟ ಎನಿಸಿಕೊಂಡಿದ್ದಾರೆ. ಸಾಕಷ್ಟು ಸಿನಿಮಾ ಅವಕಾಶ ಇದ್ದಾಗಿಯೂ ಗುಣಮಟ್ಟದ ಸಿನಿಮಾಗಳಲ್ಲಷ್ಟೆ ನಟಿಸಬೇಕೆಂಬ ಉದ್ದೇಶದಿಂದ ಸಿನಿಮಾದಿಂದ ಸಿನಿಮಾಕ್ಕೆ ದೊಡ್ಡ ಗ್ಯಾಪ್ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೊ‘ (Sapta Sagaradache ello) ಸಿನಿಮಾ ಬಿಡುಗಡೆಗೆ ತಯಾರಾಗಿ ನಿಂತಿರುವಾಗ, ತಾವಿನ್ನು ಹೆಚ್ಚು ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದು ರಕ್ಷಿತ್ ಘೋಷಿಸಿದ್ದಾರೆ.

‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಟ್ರೈಲರ್ ಲಾಂಚ್ ಇವೆಂಟ್​ನಲ್ಲಿ ಮಾತನಾಡಿದ ರಕ್ಷಿತ್ ಶೆಟ್ಟಿ, ”ನಾನಿನ್ನು ಹೆಚ್ಚು ಸಿನಿಮಾಗಳಲ್ಲಿ ನಟಿಸುವುದಿಲ್ಲ. ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡುತ್ತೇನೆ. ನನ್ನ ಸಿನಿಮಾಗಳಲ್ಲಿ ನಾನು ನಟಿಸುತ್ತೇನೆ, ಆದರೆ ನಟಿಸಬೇಕು ಎಂಬ ಕಾರಣಕ್ಕೆ ಸಿಕ್ಕ ಸಿನಿಮಾಗಳಲ್ಲೆಲ್ಲ ನಟಿಸುವುದಿಲ್ಲ, ಒಂದೊಮ್ಮೆ ನಿರ್ದೇಶಕ ಹೇಮಂತ್ ರಾವ್ ಯಾವುದೇ ಸಿನಿಮಾದ ಯಾವುದೇ ಪಾತ್ರಕ್ಕೆ ಕರೆದರೂ ಹೋಗಿ ನಟಿಸುತ್ತೇನೆ” ಎಂದಿದ್ದಾರೆ.

ರಕ್ಷಿತ್ ಶೆಟ್ಟಿಗೆ ನಟನೆಗಿಂತಲೂ ನಿರ್ದೇಶನದ ಕಡೆಗೆ ಹೆಚ್ಚು ಒಲವಿದೆ. ‘ಉಳಿದವರು ಕಂಡಂತೆ’ ಸಿನಿಮಾ ನಿರ್ದೇಶಿಸಿರುವ ರಕ್ಷಿತ್ ಶೆಟ್ಟಿ ಇದೀಗ ಅದರದ್ದೇ ಪ್ರೀಕ್ವೆಲ್ ಆಗಿರುವ ‘ರಿಚರ್ಡ್ ಆಂಟೊನಿ’ ಸಿನಿಮಾದ ನಿರ್ದೇಶನಕ್ಕೆ ತಯಾರಾಗಿದ್ದಾರೆ. ಸ್ವತಃ ಹಲವು ಬಾರಿ ರಕ್ಷಿತ್ ಶೆಟ್ಟಿ ತಮಗೆ ನಿರ್ದೇಶನದ ಮೇಲಿರುವ ಪ್ರೀತಿಯ ಬಗ್ಗೆ ಮಾತನಾಡಿದ್ದಾರೆ. ಹಿಂದೊಮ್ಮೆ ಸಂದರ್ಶನದಲ್ಲಿ ಒಂದು ಸಮಯದ ಬಳಿಕ ನಾನು ನಟನೆಯನ್ನೇ ನಿಲ್ಲಿಸಿಬಿಡುತ್ತೇನೆ, ಕೇವಲ ನಿರ್ದೇಶನಕ್ಕಷ್ಟೆ ಸೀಮಿತವಾಗುತ್ತೇನೆ ಎಂದಿದ್ದರು.

ಇದನ್ನೂ ಓದಿ:ಸಪ್ತ ಸಾಗರದಾಚೆ ಎಲ್ಲೊ ಟ್ರೈಲರ್ ಬಿಡುಗಡೆ: ಸಾಗರದಂಥಹಾ ಪ್ರೇಮದ ಕತೆ, ತಣ್ಣಗೆ ಹರಿವ ನದಿಯಂಥಹಾ ಸಿನಿಮಾ

ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಇನ್ನೂ ಹಲವು ವಿಷಯಗಳ ಬಗ್ಗೆ ಮಾತನಾಡಿದ ರಕ್ಷಿತ್ ಶೆಟ್ಟಿ, ”ಉಳಿದವರು ಕಂಡಂತೆ’ ಸಿನಿಮಾ ಮಾಡುವಾಗ, ಯಾವುದೇ ನಿರ್ದೇಶಕನಿಗಾದರೂ ಅವನ ಕಲ್ಪನೆಗೆ ತಕ್ಕಂತೆ ಸಿನಿಮಾ ಮಾಡುವ ಅವಕಾಶ ಸೃಷ್ಟಿಸಬೇಕು ಹಾಗೆ ಒಂದು ವೇದಿಕೆಯನ್ನು ತಯಾರು ಮಾಡಬೇಕು, ಯಾವ ನಿರ್ದೇಶಕನೂ ಬಜೆಟ್ ಕಾರಣಕ್ಕೆ ಯೋಚನೆಯನ್ನು ಸೀಮಿತಗೊಳಿಸಿಕೊಳ್ಳಬಾರದು, ಸ್ವತಃ ನನಗೂ ನಾನು ನನಗೆ ಅನ್ನಿಸಿದಂತೆ ಸಿನಿಮಾ ನಿರ್ದೇಶಿಸಲು ವೇದಿಕೆ ರೆಡಿ ಮಾಡಿಕೊಳ್ಳಬೇಕು ಎಂದುಕೊಂಡಿದ್ದೆ. ಪರಮವಃ ಮೂಲಕ ಅದನ್ನು ಸಾಧಿಸುವ ದಾರಿಯಲ್ಲಿದ್ದೇನೆ” ಎಂದಿದ್ದಾರೆ.

ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾವನ್ನು ಹೇಮಂತ್ ರಾವ್ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಮೊದಲ ಭಾಗ ಸೆಪ್ಟೆಂಬರ್ 1 ಕ್ಕೆ ಬಿಡುಗಡೆ ಆಗುತ್ತಿದೆ. ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಚೈತ್ರಾ ಆಚಾರ್ ನಾಯಕಿಯಾಗಿ ನಟಿಸಿದ್ದಾರೆ. ಜೊತೆಗೆ ಅಚ್ಯುತ್ ಕುಮಾರ್, ಅವಿನಾಶ್ ಇನ್ನಿತರೆ ನಟರುಗಳು ಇದ್ದಾರೆ. ಸಿನಿಮಾಕ್ಕೆ ಚರಣ್ ರಾಜ್ ಸಂಗೀತ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ