AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ 2’ ಸಿನಿಮಾದಲ್ಲಿ ನಟಿಸೊಲ್ಲ: ಕಾರಣ ತಿಳಿಸಿದ ರಕ್ಷಿತ್ ಶೆಟ್ಟಿ

Rakshit Shetty: ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿಗೆ ದೊಡ್ಡ ಗೆಲುವು ತಂದುಕೊಟ್ಟ, ನಟನಾಗಿ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಪರಿಚಯ ತಂದುಕೊಟ್ಟ ಸಿನಿಮಾ '777 ಚಾರ್ಲಿ' ಆದರೆ ಆ ಸಿನಿಮಾದ ಎರಡನೇ ಭಾಗದಲ್ಲಿ ನಾನು ನಟಿಸಲ್ಲ ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ. ಅದಕ್ಕೆ ಕಾರಣವನ್ನೂ ನೀಡಿದ್ದಾರೆ.

'777 ಚಾರ್ಲಿ 2' ಸಿನಿಮಾದಲ್ಲಿ ನಟಿಸೊಲ್ಲ: ಕಾರಣ ತಿಳಿಸಿದ ರಕ್ಷಿತ್ ಶೆಟ್ಟಿ
ಚಾರ್ಲಿ
Follow us
ಮಂಜುನಾಥ ಸಿ.
|

Updated on: Oct 13, 2023 | 4:39 PM

ಕೆಜಿಎಫ್ 2‘ (KGF 2) ಸಿನಿಮಾ ಬಳಿಕ ಪ್ಯಾನ್ ಇಂಡಿಯಾ (Pan India) ಲೆವೆಲ್​ನಲ್ಲಿ ಬಿಡುಗಡೆ ಆಗಿ, ‘ಕೆಜಿಎಫ್​’ಗೆ ಮಾತ್ರವಲ್ಲ ಶ್ರಮವಹಿಸಿ ಕೆಲಸ ಮಾಡಿದರೆ, ಕತೆಯಲ್ಲಿ ಗುಣಮಟ್ಟ ಇದ್ದರೆ ಎಲ್ಲ ಸಿನಿಮಾಗಳನ್ನು ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಗೆಲ್ಲುವಂತೆ ಮಾಡಬಹುದು ಎಂದು ತೋರಿಸಿಕೊಟ್ಟ ಸಿನಿಮಾ ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’. ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡಿದ ಜೊತೆಗೆ ರಾಷ್ಟ್ರಪ್ರಶಸ್ತಿಯನ್ನು ಸಹ ಪಡೆದುಕೊಂಡಿತು ಈ ಸಿನಿಮಾ. ಇದೀಗ ಇನ್ನೋವೇಟಿವ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟ್​ನಲ್ಲಿಯೂ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಆದರೆ ರಕ್ಷಿತ್ ಶೆಟ್ಟಿ ಮಾತ್ರ ‘777 ಚಾರ್ಲಿ 2’ ಸಿನಿಮಾದಲ್ಲಿ ತಾವು ನಟಿಸುವುದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇನ್ನೋವೇಟಿವ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟ್​ನಲ್ಲಿ ಭಾಗವಹಿಸಿ ‘777 ಚಾರ್ಲಿ’ ಸಿನಿಮಾದ ನಟನೆಗೆ ಪ್ರಶಸ್ತಿ ಪಡೆದು ಮಾತನಾಡಿದ ರಕ್ಷಿತ್ ಶೆಟ್ಟಿ, ”777 ಚಾರ್ಲಿ’ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣದ ಸಮಯದಲ್ಲಿ ನಿರ್ದೇಶಕ ಕಿರಣ್ ರಾಜ್ ಬಂದು, ‘777 ಚಾರ್ಲಿ 2′ ಸಿನಿಮಾಕ್ಕೆ ನನಗೆ ಒಳ್ಳೆ ಐಡಿಯಾ ಬಂದಿದೆ ಮಾಡೋಣ’ ಎಂದರು. ನಾನು ಕೈ ಮುಗಿದು ದಯವಿಟ್ಟು ಬೇಡಪ್ಪ, ಚಾರ್ಲಿ ಒಬ್ಬಳನ್ನೇ ಇಟ್ಟುಕೊಂಡು ಸಿನಿಮಾ ಮಾಡು ಆದರೆ ನಾನು ಮಾತ್ರ ನಟಿಸಲ್ಲ ಅಂದುಬಿಟ್ಟೆ” ಎಂದು ನೆನಪು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಜೊತೆ ಸಂಪರ್ಕದಲ್ಲಿದ್ದೇನೆ, ಆಕೆ ಬಗ್ಗೆ ಹೆಮ್ಮೆ ಇದೆ: ರಕ್ಷಿತ್ ಶೆಟ್ಟಿ

”ನಾಯಿ ಚಾರ್ಲಿ ಜೊತೆ ನಟಿಸುವುದು ಬಹಳ ಕಷ್ಟವಾದ ಕೆಲಸ. ಪ್ರತಿ ಸೀನ್​ಗೂ 30-40 ಟೇಕ್​ಗಳನ್ನು ಕೊಡಬೇಕಿತ್ತು. ಅಲ್ಲದೆ ನಾನು ಪ್ರತಿ ಟೇಕ್​ನಲ್ಲಿಯೂ ನನ್ನ ಬೆಸ್ಟ್ ಫರ್ಪಾಮೆನ್ಸ್ ಅನ್ನೇ ನೀಡಬೇಕಿತ್ತು, ಏಕೆಂದರೆ ಚಾರ್ಲಿ ಯಾವ ಟೇಕ್​ನಲ್ಲಿ ಸರಿಯಾಗಿ ನಟಿಸುತ್ತಿದ್ದಳು ಗೊತ್ತಾಗುತ್ತಿರಲಿಲ್ಲ. ಸುಮಾರು 150 ದಿನಗಳ ಕಾಲ ಚಿತ್ರೀಕರಣ ಮಾಡಿದೆವು. ನನಗೆ ಬಹಳ ಕಷ್ಟ ಎನಿಸಿತ್ತು. ಹಾಗಾಗಿ ಮತ್ತೊಮ್ಮೆ ಆ ಸಾಹಸ ಮಾಡುವುದು ಬೇಡ ಎಂದು ನಿರ್ಧಾರ ಮಾಡಿದೆ” ಎಂದು ನಗುತ್ತಲೇ ಹೇಳಿದರು ರಕ್ಷಿತ್ ಶೆಟ್ಟಿ.

”ಸಿನಿಮಾದ ಚಿತ್ರೀಕರಣ ಸಮಯದಲ್ಲಿ ಬಹಳ ಕಷ್ಟಪಟ್ಟೆವು, ಆದರೆ ಆ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ, ಸಿಗುತ್ತಿರುವ ಪ್ರಶಸ್ತಿಗಳು ನಮ್ಮ ಶ್ರಮವನ್ನೆಲ್ಲ ಮರೆಸಿವೆ. ನನ್ನ ಪಾಲಿಗೆ, ನಮ್ಮ ಪರಂವಃ ಸ್ಟುಡಿಯೋ ಪಾಲಿಗೆ ‘777 ಚಾರ್ಲಿ’ ಬಹಳ ಪ್ರಮುಖವಾದ ಸಿನಿಮಾ. ನಮ್ಮ ಸ್ಟುಡಿಯೋದ ಮೊದಲ ಪ್ಯಾನ್ ಇಂಡಿಯಾ ಹಾಗೂ ಅದ್ಧೂರಿ ಯಶಸ್ಸು ಗಳಿಸಿದ ಸಿನಿಮಾ. ‘777 ಚಾರ್ಲಿ’ ನನ್ನ ಪಾಲಿಗೆ ಯಾವಾಗಲೂ ವಿಶೇಷವಾದ ಸಿನಿಮಾ ಆಗಿರುತ್ತದೆ” ಎಂದಿದ್ದಾರೆ ರಕ್ಷಿತ್ ಶೆಟ್ಟಿ.

ಇದನ್ನೂ ಓದಿ:ಯಶ್ ಬಗ್ಗೆ ರಕ್ಷಿತ್ ಶೆಟ್ಟಿಗೆ ಯಾವ ರೀತಿಯ ಅಭಿಪ್ರಾಯ ಇದೆ? ‘SSE’ ಸ್ಟಾರ್ ವಿವರಿಸಿದ್ದು ಹೀಗೆ

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. ಸಿನಿಮಾದ ಎರಡನೇ ಭಾಗ ಶೀಘ್ರದಲ್ಲಿಯೇ ಬಿಡುಗಡೆ ಆಗಲಿದೆ. ಇದರ ನಡುವೆ ‘ರಿಚರ್ಡ್ ಆಂಟೊನಿ’ ಸಿನಿಮಾ ನಿರ್ದೇಶಿಸಲು ರಕ್ಷಿತ್ ಶೆಟ್ಟಿ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ರಕ್ಷಿತ್ ಅವರೇ ನಿರ್ದೇಶಿಸುತ್ತಿದ್ದು, ಹೊಂಬಾಳೆ ಫಿಲಮ್ಸ್ ಬಂಡವಾಳ ಹೂಡುತ್ತಿದೆ. ಅದರ ಬಳಿಕ ‘ಪುಣ್ಯಕೋಟಿ’ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಇನ್ನು ಮುಂದೆ ಬೇರೆಯವರ ಸಿನಿಮಾದಲ್ಲಿ ಕಡಿಮೆ ನಟಿಸಿ, ನನ್ನ ಕತೆಗಳನ್ನು ಸಿನಿಮಾ ಮಾಡುವ ಬಗ್ಗೆ ಗಮನ ಹರಿಸಲಿದ್ದೇನೆ ಎಂದು ಈ ಹಿಂದೆ ರಕ್ಷಿತ್ ಹೇಳಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ