AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಚಿತ್ರದಿಂದ ಹೊಸ ಅಪ್​ಡೇಟ್​; ಇದು ಫ್ಯಾನ್ಸ್​ ಖುಷಿಪಡೋ ವಿಚಾರ

‘777 ಚಾರ್ಲಿ ಚಿತ್ರದ ಬಿಡುಗಡೆ ದಿನಾಂಕ ಏಪ್ರಿಲ್ 10ರ, ಬೆಳಗ್ಗೆ 11:04ಕ್ಕೆ ತಿಳಿಸಲಿದ್ದೇವೆ’ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ.

ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಚಿತ್ರದಿಂದ ಹೊಸ ಅಪ್​ಡೇಟ್​; ಇದು ಫ್ಯಾನ್ಸ್​ ಖುಷಿಪಡೋ ವಿಚಾರ
ರಕ್ಷಿತ್ ಶೆಟ್ಟಿ
TV9 Web
| Edited By: |

Updated on: Apr 08, 2022 | 1:30 PM

Share

ರಕ್ಷಿತ್​ ಶೆಟ್ಟಿ (Rakshit Shetty) ಸಿಂಪಲ್​ ಸ್ಟಾರ್ ಎಂದೇ ಫೇಮಸ್​. ಅವರ ಸಿನಿಮಾ ತೆರೆಗೆ ಬರುತ್ತಿದೆ ಎಂದರೆ ಒಂದಷ್ಟು ಹೊಸತನ ಹಾಗೂ ಒಂದಷ್ಟು ಕುತೂಹಲ ಎರಡೂ ಇರುತ್ತದೆ. ಅವರ ನಟನೆಯ ‘777 ಚಾರ್ಲಿ’ ಸಿನಿಮಾ (777 Charlie) ಕೂಡ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​, ಪೋಸ್ಟರ್, ಸಾಂಗ್​​​ಗಳಿಂದ ಅಭಿಮಾನಿಗಳಿಗೆ ಸಿನಿಮಾ ಬಗ್ಗೆ ಕೌತುಕ ಹೆಚ್ಚಿತ್ತು. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ವಿಳಂಬವಾದವು. ಈಗ ಸಿನಿಮಾ ಕೆಲಸಗಳು ಪೂರ್ಣಗೊಳ್ಳುವ ಹಂತ ತಲುಪಿದೆ. ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಸಿನಿಮಾ ತಂಡದಿಂದ ಹೊಸ ಅಪ್​ಡೇಟ್​ ಸಿಕ್ಕಿದೆ. ಚಿತ್ರದ ರಿಲೀಸ್ ದಿನಾಂಕವನ್ನು ಏಪ್ರಿಲ್​ 10ರಂದು ರಿವೀಲ್ ಮಾಡುವ ಬಗ್ಗೆ ಚಿತ್ರತಂಡ ಘೋಷಿಸಿದೆ.

‘777 ಚಾರ್ಲಿ ಚಿತ್ರದ ಬಿಡುಗಡೆ ದಿನಾಂಕ ಏಪ್ರಿಲ್ 10ರ, ಬೆಳಗ್ಗೆ 11:04ಕ್ಕೆ ತಿಳಿಸಲಿದ್ದೇವೆ’ ಎಂದು ರಕ್ಷಿತ್ ಬರೆದುಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ. ‘ಸಿನಿಮಾಗೆ ಚೆನ್ನಾಗಿ ಪ್ರಮೋಷನ್​ ನೀಡಿ. ಚಿತ್ರವನ್ನು ಬೇಗ ರಿಲೀಸ್ ಮಾಡಿ’ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ವರ್ಷದ ಅಂತ್ಯಕ್ಕೆ ‘777 ಚಾರ್ಲಿ’ ತೆರೆಗೆ ಬರಬೇಕಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ ಎಂಬುದನ್ನು ರಕ್ಷಿತ್ ಶೆಟ್ಟಿ ತಿಳಿಸಿದ್ದರು. ‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ. ಕೆಲವು ವಿಳಂಬಗಳು ಹೊಸದೊಂದು ಅಧ್ಯಾಯಕ್ಕೆ ನಾಂದಿಯಾಗುತ್ತದೆ. ಅತೀ ಶೀಘ್ರದಲ್ಲಿ ಹೊಸ ಪ್ರಕಟಣೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇವೆ. ಅಲ್ಲಿಯವರೆಗೂ, ಹರಸಿ.. ಹಾರೈಸಿ’ ಎಂದು ಅವರು ಈ ಮೊದಲು ಬರೆದುಕೊಂಡಿದ್ದರು. ಈಗ ಹೊಸ ಅಪ್​ಡೇಟ್​ನೊಂದಿಗೆ ರಕ್ಷಿತ್ ಶೆಟ್ಟಿ ಆಗಮಿಸಿದ್ದಾರೆ.

ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

ಇದನ್ನೂ ಓದಿ: ರಕ್ಷಿತ್​ ಶೆಟ್ಟಿ ‘777 ಚಾರ್ಲಿ’ಯಲ್ಲಿ ನಟಿಸಿದ ಶ್ವಾನ ಎಷ್ಟು ಬ್ರಿಲಿಯಂಟ್​ ಗೊತ್ತಾ? ಟ್ರೇನರ್​ ಬಿಚ್ಚಿಟ್ಟ ಅಚ್ಚರಿಯ ವಿಚಾರ

‘777 ಚಾರ್ಲಿ’ ಸಿನಿಮಾ ಶೂಟಿಂಗ್​ ಮುಕ್ತಾಯ; ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್​

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ