ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಟ್ರೇಲರ್ ರಿಲೀಸ್ ಡೇಟ್​ ಅನೌನ್ಸ್​; ಇಲ್ಲಿದೆ ಮಾಹಿತಿ

ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಟ್ರೇಲರ್ ರಿಲೀಸ್ ಡೇಟ್​ ಅನೌನ್ಸ್​; ಇಲ್ಲಿದೆ ಮಾಹಿತಿ
ರಕ್ಷಿತ್

ರಕ್ಷಿತ್ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘777 ಚಾರ್ಲಿ’ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸಿನಿಮಾದ ಝಲಕ್ ತೋರಿಸಲು ಟ್ರೇಲರ್ ಬಿಡುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

TV9kannada Web Team

| Edited By: Rajesh Duggumane

May 10, 2022 | 1:15 PM

ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘777 ಚಾರ್ಲಿ’ ಸಿನಿಮಾ (777 Charlie) ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಒಟ್ಟೂ ಐದು ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ ಅನ್ನೋದು ವಿಶೇಷ. ಈ ಸಿನಿಮಾ ಕುರಿತು ಚಿತ್ರತಂಡ ಹೊಸಹೊಸ ಅಪ್​ಡೇಟ್ ನೀಡುತ್ತಿದೆ. ಸಿನಿಮಾ ಬಿಡುಗಡೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಚಿತ್ರದ ಟ್ರೇಲರ್ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ರಕ್ಷಿತ್ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘777 ಚಾರ್ಲಿ’ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಸಿನಿಮಾದ ಝಲಕ್ ತೋರಿಸಲು ಟ್ರೇಲರ್ ಬಿಡುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಮೇ 16ರಂದು ಟ್ರೇಲರ್ ಅನಾವರಣಗೊಳ್ಳಲಿದೆ. ಈ ಬಗ್ಗೆ ಬರೆದುಕೊಂಡಿರುವ ರಕ್ಷಿತ್ ಶೆಟ್ಟಿ, ‘ನಮ್ಮ 777ಚಾರ್ಲಿ ಚಿತ್ರದ ಟ್ರೇಲರ್ ಮೇ 16ರ ಮಧ್ಯಾಹ್ನ 12:12ಕ್ಕೆ ಬಿಡುಗಡೆಯಾಗಲಿದೆ. ನಿಮ್ಮೆಲ್ಲರ ಪ್ರೀತಿಯಿರಲಿ’ ಎಂದು ಕೋರಿದ್ದಾರೆ.

ರಕ್ಷಿತ್ ಶೆಟ್ಟಿ ಸದಾ ಹೊಸಹೊಸ ಪ್ರಯತ್ನದ ಮೂಲಕ ಗಮನ ಸೆಳೆಯುತ್ತಾರೆ. ಅವರು ವೃತ್ತಿ ಬದುಕಿನ ಪ್ರತಿ ಹಂತದಲ್ಲೂ ಹೊಸಹೊಸ ಸಿನಿಮಾಗಳನ್ನು ನೀಡುತ್ತಲೇ ಬಂದವರು. ಈಗ ‘777 ಚಾರ್ಲಿ’ ಸಿನಿಮಾ ಮೂಲಕ ಹೊಸ ರೀತಿಯ ಕಥೆ ಹೇಳಲು ಬರುತ್ತಿದ್ದಾರೆ. ಈ ಸಿನಿಮಾದಲ್ಲಿ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಕನ್ನಡದ ಜತೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ. ಟ್ರೇಲರ್ ಕೂಡ ಐದೂ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ.

ರಕ್ಷಿತ್ ಜತೆಗೆ ರಾಜ್‌ ಬಿ. ಶೆಟ್ಟಿ, ದಾನಿಶ್‌ ಸೇಠ್‌, ಸಂಗೀತಾ ಶೃಂಗೇರಿ, ತಮಿಳಿನ ಬಾಬಿ ಸಿಂಹ ಸೇರಿ ಇನ್ನೂ ಅನೇಕರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಿರಣ್‌ ರಾಜ್‌ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ರಕ್ಷಿತ್‌ ಶೆಟ್ಟಿ ತಮ್ಮ ಹೋಮ್‌ ಬ್ಯಾನರ್‌ ‘ಪರಂವಃ ಸ್ಟುಡಿಯೋಸ್’ ಅಡಿಯಲ್ಲಿ ಸಿನಿಮಾವನ್ನು ನಿರ್ಮಿಸಿದ್ದಾರೆ. ನೋಬಿನ್‌ ಪೌಲ್‌ ಸಂಗೀತ ಮತ್ತು ಹಿನ್ನೆಲೆ ಸಂಗೀತ, ಅರವಿಂದ್‌ ಕಶ್ಯಪ್‌ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಸಂಕಲನ, ಪ್ರಗತಿ ರಿಷಬ್‌ ಶೆಟ್ಟಿ ಅವರ ವಸ್ತ್ರ ವಿನ್ಯಾಸ, ವಿಕ್ರಮ್‌ ಮೋರ್‌ ಅವರ ಸಾಹಸ ಈ ಚಿತ್ರಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on

Related Stories

Most Read Stories

Click on your DTH Provider to Add TV9 Kannada