Twitter Review: ಸದಾ ಕಾಲ ನೆನಪಿನಲ್ಲಿ ಉಳಿಯುವ ಸಿನಿಮಾ’: ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಟ್ವಿಟರ್​ ವಿಮರ್ಶೆ

Sapta Sagaradaache Ello Side B: ಡಿಫರೆಂಟ್​ ಆದ ಒಂದು ಪ್ರೇಮಕಥೆಯನ್ನು ನಿರ್ದೇಶಕ ಹೇಮಂತ್​ ಎಂ. ರಾವ್​ ಅವರು ತೆರೆಗೆ ತಂದಿರುವ ರೀತಿ ಎಲ್ಲರಿಗೂ ಇಷ್ಟ ಆಗುತ್ತಿದೆ. ವಿಶೇಷವಾಗಿ ಕ್ಲಾಸ್​ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಳ್ಳುತ್ತಿದೆ. ಪ್ರೀಮಿಯರ್​ ಶೋ ಮತ್ತು ಫಸ್ಟ್​ ಡೇ ಫಸ್ಟ್​ ಶೋ ನೋಡಿದ ಪ್ರೇಕ್ಷಕರು ಟ್ವಿಟರ್​ ಮೂಲಕ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

Twitter Review: ಸದಾ ಕಾಲ ನೆನಪಿನಲ್ಲಿ ಉಳಿಯುವ ಸಿನಿಮಾ’: ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಟ್ವಿಟರ್​ ವಿಮರ್ಶೆ
ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ
Follow us
|

Updated on: Nov 17, 2023 | 1:21 PM

ಒಂದು ಕಥೆಯನ್ನು ಎರಡು ಪಾರ್ಟ್​ನಲ್ಲಿ ಹೇಳುವ ಟ್ರೆಂಡ್​ ಚಾಲ್ತಿಯಲ್ಲಿದೆ. ಅದೇ ರೀತಿ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradaache Ello) ಸಿನಿಮಾ ಕೂಡ ಎರಡು ಪಾರ್ಟ್​ನಲ್ಲಿ ಮೂಡಿಬಂದಿದೆ. ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಎ’ ಸಿನಿಮಾಗೆ ಜನರಿಂದ ಮೆಚ್ಚುಗೆ ಸಿಕ್ಕಿತ್ತು. ಅದರ ಮುಂದುವರಿದ ಕಥೆಯನ್ನು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾದಲ್ಲಿ ಹೇಳಲಾಗಿದೆ. ರಕ್ಷಿತ್​ ಶೆಟ್ಟಿ (Rakshit Shetty), ರುಕ್ಮಿಣಿ ವಸಂತ್​ ಅವರ ಜೊತೆ ಈ ಬಾರಿ ಚೈತ್ರಾ ಆಚಾರ್​ ಕೂಡ ಸೇರಿಕೊಂಡಿದ್ದಾರೆ. ಇಂದು (ನವೆಂಬರ್​ 17) ಈ ಸಿನಿಮಾ ಬಿಡುಗಡೆ ಆಗಿದೆ. ಗುರುವಾರ (ನವೆಂಬರ್​ 16) ರಾತ್ರಿಯೇ ಅನೇಕ ಕಡೆಗಳಲ್ಲಿ ಪೇಯ್ಡ್​ ಪ್ರೀಮಿಯರ್​ ಮಾಡಲಾಗಿತ್ತು. ಸಿನಿಮಾ ನೋಡಿದ ಬಹುತೇಕ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ (SSE Side B) ಸಿನಿಮಾದ ಟ್ವಿಟರ್​ ವಿಮರ್ಶೆ ಇಲ್ಲಿದೆ..

ಡಿಫರೆಂಟ್​ ಆದ ಒಂದು ಪ್ರೇಮಕಥೆಯನ್ನು ನಿರ್ದೇಶಕ ಹೇಮಂತ್​ ಎಂ. ರಾವ್​ ಅವರು ತೆರೆಗೆ ತಂದಿರುವ ರೀತಿ ಎಲ್ಲರಿಗೂ ಇಷ್ಟ ಆಗುತ್ತಿದೆ. ವಿಶೇಷವಾಗಿ ಕ್ಲಾಸ್​ ಪ್ರೇಕ್ಷಕರನ್ನು ಈ ಸಿನಿಮಾ ಸೆಳೆದುಕೊಳ್ಳುತ್ತಿದೆ. ‘ಇದು ಈ ದಶಕದಲ್ಲಿ ಬಂದ ಬೆಸ್ಟ್​ ಲವ್​ ಸ್ಟೋರಿ. ಸದಾ ಕಾಲ ನೆನಪಿನಲ್ಲಿ ಉಳಿಯುವಂತಹ ಸಿನಿಮಾ ಇದಾಗಿದೆ’ ಎಂದು ಪ್ರೇಕ್ಷಕರೊಬ್ಬರು ಟ್ವೀಟ್​ ಮಾಡಿದ್ದಾರೆ. ಹೇಮಂತ್​ ಎಂ. ರಾವ್​ ಅವರ ಕಸುಬುದಾರಿಕೆಗೆ ಮೆಚ್ಚುಗೆ ಸಿಗುತ್ತಿದೆ.

ಕೆಲವರು ಈ ಸಿನಿಮಾವನ್ನು ಮಾಸ್ಟರ್​ಪೀಸ್​ ಎಂದು ಕರೆದಿದ್ದಾರೆ. ಭಾವನೆಗಳಿಗೆ ಹೆಚ್ಚು ಮಹತ್ವ ನೀಡಿರುವುದು ಬಹುತೇಕರಿಗೆ ಇಷ್ಟ ಆಗಿದೆ. ‘ಇದು ನಿಜವಾದ ಸೀಕ್ವೆಲ್​. ಎಲ್ಲರೂ ನೋಡಲೇಬೇಕಾದ ಸಿನಿಮಾ’ ಎಂಬ ಅಭಿಪ್ರಾಯ ಕೂಡ ಪ್ರೇಕ್ಷಕರಿಂದ ಬಂದಿದೆ. ರಕ್ಷಿತ್​ ಶೆಟ್ಟಿ, ಚೈತ್ರಾ ಆಚಾರ್​, ರುಕ್ಮಿಣಿ ವಸಂತ್​ ಮುಂತಾದವರ ನಟನೆಗೆ ಚಪ್ಪಾಳೆ ಸಿಗುತ್ತಿದೆ. ‘ಈ ಸಿನಿಮಾದ ಕೊನೆಯ 25 ನಿಮಿಷ ನಿಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಳ್ಳುತ್ತದೆ’ ಎಂದು ನೆಟ್ಟಿಗರೊಬ್ಬರು ಪೋಸ್ಟ್​ ಮಾಡಿದ್ದಾರೆ.

ಕನ್ನಡ ಮಾತ್ರವಲ್ಲದೇ ಪರಭಾಷೆಗೂ ಡಬ್​ ಆಗಿ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಚಿತ್ರ ಬಿಡುಗಡೆ ಆಗಿದೆ. ಈಗಾಗಲೇ ಸಮಂತಾ ರುತ್​ ಪ್ರಭು ಮುಂತಾದ ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ತಮ್ಮ ನಿರೀಕ್ಷೆ ಎಷ್ಟಿದೆ ಎಂಬುದನ್ನು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಈ ಸಿನಿಮಾ ಬಗ್ಗೆ ಜನರಲ್ಲಿ ಕ್ರೇಜ್​ ಸೃಷ್ಟಿಯಾಗಿದೆ ಎಂದು ಪ್ರೇಕ್ಷಕರು ಟ್ವೀಟ್​ ಮಾಡಿದ್ದಾರೆ. ‘ಇಂಥ ಗಾಡವಾದ ಲವ್​ ಸ್ಟೋರಿ ನೀಡಿದ್ದಕ್ಕೆ ಹೇಮಂತ್​ ರಾವ್​ ಅವರಿಗೆ ಧನ್ಯವಾದಗಳು’ ಎಂದು ತೆಲುಗು ಮಂದಿ ತಿಳಿಸಿದ್ದಾರೆ.

ಇದನ್ನೂ ಓದಿ: SSE Side B Review: ‘ಸೈಡ್​ ಎ’ ಬಳಿಕ ಮನು, ಪ್ರಿಯಾ ಬದುಕು ಬದಲಾದರೂ ‘ಸೈಡ್​ ಬಿ’ ಲಯ ಬದಲಾಗಿಲ್ಲ

‘ಎಲ್ಲರ ನಟನೆ ಚೆನ್ನಾಗಿದೆ. ಪ್ರತಿ ಫ್ರೇಮ್​ ಕೂಡ ಉತ್ತಮವಾಗಿ ಮೂಡಿಬಂದಿದೆ. ಕಥೆ ಮತ್ತು ಕ್ಲೈಮ್ಯಾಕ್ಸ್​ ಇಷ್ಟವಾಯ್ತು’ ಎಂದು ಪ್ರೇಕ್ಷಕರು ಮೆಚ್ಚುಗೆ ತಿಳಿಸಿದ್ದಾರೆ. ಕಥೆ ಅಪೂರ್ಣವಾಗಿದೆ ಎಂದು ಕೂಡ ಕೆಲವರು ಟೀಕೆ ಮಾಡಿದ್ದಾರೆ. ಸಿನಿಮಾದ ಕಥೆ ಕೊನೆಗೊಂಡ ರೀತಿ ಒಂದಷ್ಟು ಮಂದಿಗೆ ಇಷ್ಟ ಆಗಿಲ್ಲ. ಅದೇನೇ ಇದ್ದರೂ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್​ ಬಿ’ ಸಿನಿಮಾಗೆ ಉತ್ತಮ ಓಪನಿಂಗ್ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ