AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಮೊದಲ ಸಾಂಗ್ ಹೇಗಿದೆ ಕೇಳಿ..

Horaata Lyrical Song: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾನ ಅದ್ದೂರಿಯಾಗಿ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಇದರ ಭಾಗವಾಗಿ ಸಾಂಗ್ ರಿಲೀಸ್ ಮಾಡಲಾಗಿದೆ. ‘ಹೋರಾಟ..’ ಹೆಸರಿನ ಹಾಡು ಬಿಡುಗಡೆ ಆಗಿದೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಮೊದಲ ಸಾಂಗ್ ಹೇಗಿದೆ ಕೇಳಿ..
ರಕ್ಷಿತ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on:Jul 20, 2023 | 10:58 AM

Share

ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ‘777 ಚಾರ್ಲಿ’ (777 Charlie Movie) ಬಳಿಕ ರಿಲೀಸ್ ಆಗುತ್ತಿರುವ ರಕ್ಷಿತ್ ನಟನೆಯ ಸಿನಿಮಾ ಇದು ಎಂಬ ಕಾರಣದಿಂದಲೂ ನಿರೀಕ್ಷೆ ಸೃಷ್ಟಿ ಆಗಿದೆ. ಈ ಚಿತ್ರದ ಪ್ರಮೋಷನ್ ಆರಂಭ ಆಗಿದೆ. ಈ ಸಿನಿಮಾದ ಮೊದಲ ಸಾಂಗ್ ಇಂದು (ಜುಲೈ 20) ರಿಲೀಸ್ ಆಗಿದೆ. ಈ ಹಾಡು ಕೇಳುಗರಿಗೆ ಇಷ್ಟ ಆಗಿದೆ.

ಹೇಮಂತ್ ರಾವ್ ಹಾಗೂ ರಕ್ಷಿತ್ ಶೆಟ್ಟಿ ಕಾಂಬಿನೇಷನ್​ನಲ್ಲಿ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾ ಮೂಡಿ ಬಂದಿತ್ತು. ಈ ಚಿತ್ರ ಶೀರ್ಷಿಕೆಯ ಮೂಲಕವೇ ಗಮನ ಸೆಳೆದಿತ್ತು. ಈ ಸಿನಿಮಾ ವಿಮರ್ಶಕರಿಂದ ಮೆಚ್ಚುಗೆಯನ್ನೂ ಪಡೆಯಿತು. ಈಗ ಮತ್ತೊಂದು ಭಿನ್ನವಾದ ಟೈಟಲ್ ಜೊತೆ ಈ ಜೋಡಿ ಪ್ರೇಕ್ಷಕರ ಎದುರು ಬರುತ್ತಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾನ ಅದ್ದೂರಿಯಾಗಿ ರಿಲೀಸ್ ಮಾಡಲು ಪ್ಲ್ಯಾನ್ ನಡೆದಿದೆ. ಇದರ ಭಾಗವಾಗಿ ಸಾಂಗ್ ರಿಲೀಸ್ ಮಾಡಲಾಗಿದೆ. ‘ಹೋರಾಟ..’ ಹೆಸರಿನ ಹಾಡು ಬಿಡುಗಡೆ ಆಗಿದೆ.

ಚರಣ್ ರಾಜ್ ಅವರ ಕೆಲಸದ ಬಗ್ಗೆ ಪ್ರೇಕ್ಷಕರಿಗೆ ಭರವಸೆ ಇದೆ. ಅವರು ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಹೋರಾಟ..’ ಹಾಡು ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಎಷ್ಟು ಹಾಡುಗಳು ಇರಲಿವೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಇದನ್ನೂ ಓದಿ: ರಕ್ಷಿತ್ ಶೆಟ್ಟಿ ಹಾಗೂ ರಿಷಬ್ ಶೆಟ್ಟಿ ಮಧ್ಯೆ ಫ್ರೆಂಡ್​ಶಿಪ್ ಬೆಳೆದಿದ್ದು ಹೇಗೆ? ಇಲ್ಲಿದೆ ಇವರ ಗೆಳೆತನದ ಕಥೆ

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಎರಡು ಭಾಗದಲ್ಲಿ ರಿಲೀಸ್ ಆಗುತ್ತಿದೆ. ಮೊದಲ ಭಾಗಕ್ಕೆ ‘ಸೈಡ್​ ಎ’ ಎಂದು ಹೆಸರು ಇಡಲಾಗಿದೆ. ಎರಡನೇ ಪಾರ್ಟ್​ಗೆ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಎಂದು ಕರೆಯಲಾಗಿದೆ. ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಜೊತೆ ರುಕ್ಮಿಣಿ ವಸಂತ್, ಚೈತ್ರಾ ಆಚಾರ್, ಶರತ್ ಲೋಹಿತಾಶ್ವ, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಗೋಪಾಲ್ ಕೃಷ್ಣ ದೇಶಪಾಂಡೆ ಮೊದಲಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Thu, 20 July 23

ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ