ಬದಲಾಯ್ತು ರಕ್ಷಿತ್​ ಶೆಟ್ಟಿ ಗೆಟಪ್​: ‘ನಿಮ್ಮ ಮನು 10 ವರ್ಷಗಳ ನಂತರ’ ಎಂದ ಸಿಂಪಲ್​ ಸ್ಟಾರ್​

Rakshit Shetty | Saptha Sagaradache Ello: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಹೊಸ ಪೋಸ್ಟರ್​ ಬಿಡುಗಡೆ ಆಗಿದೆ. ಇದರಲ್ಲಿ ರಕ್ಷಿತ್​ ಶೆಟ್ಟಿ ಅವರ ಗೆಟಪ್​ ಗಮನ ಸೆಳೆಯುತ್ತಿದೆ.

ಬದಲಾಯ್ತು ರಕ್ಷಿತ್​ ಶೆಟ್ಟಿ ಗೆಟಪ್​: ‘ನಿಮ್ಮ ಮನು 10 ವರ್ಷಗಳ ನಂತರ’ ಎಂದ ಸಿಂಪಲ್​ ಸ್ಟಾರ್​
ರಕ್ಷಿತ್ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on:May 23, 2022 | 12:48 PM

‘ಸಿಂಪಲ್​ ಸ್ಟಾರ್’ ರಕ್ಷಿತ್​ ಶೆಟ್ಟಿ (Rakshit Shetty) ಅವರು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಪ್ರತಿ ಸಿನಿಮಾದಲ್ಲಿಯೂ ಅವರು ಬೇರೆ ಬೇರೆ ರೀತಿಯ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಇನ್ನೇನು ಕೆಲವೇ ದಿನಗಳಲ್ಲಿ ಅವರ ‘777 ಚಾರ್ಲಿ’ ಸಿನಿಮಾ ರಿಲೀಸ್​ ಆಗಲಿದೆ. ಅದರ ಜೊತೆಗೆ ರಕ್ಷಿತ್​ ಶೆಟ್ಟಿ ನಟನೆಯ ಮುಂಬರುವ ಸಿನಿಮಾಗಳ ಬಗ್ಗೆಯೂ ಕೌತುಕ ಮೂಡಿದೆ. ನಿರ್ದೇಶಕ ಹೇಮಂತ್​ ಎಂ. ರಾವ್​ (Hemanth M Rao) ಆ್ಯಕ್ಷನ್​-ಕಟ್​ ಹೇಳುತ್ತಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ರಕ್ಷಿತ್​ ಶೆಟ್ಟಿ ಅವರು ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈಗ ಹೊಸ ಪೋಸ್ಟರ್​ ರಿಲೀಸ್​ ಮಾಡಲಾಗಿದೆ. ಈ ಪೋಸ್ಟರ್​ನಲ್ಲಿ ಅವರು ತುಂಬ ರಗಡ್​ ಆಗಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ‘ಸಪ್ತ ಸಾಗರದಾಚೆ ಎಲ್ಲೋ’ (Saptha Sagaradache Ello) ಸಿನಿಮಾ ಮೇಲೆ ಕೌತುಕ ಮೂಡುವಂತಾಗಿದೆ. ಈ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್​ ಅವರ ನಟಿಸುತ್ತಿದ್ದಾರೆ. ಇಬ್ಬರ ಕಾಂಬಿನೇಷನ್​ ಬಗ್ಗೆ ಅಭಿಮಾನಿಗಳಿಗೆ ತುಂಬ ನಿರೀಕ್ಷೆ ಇದೆ. ಈಗ ರಕ್ಷಿತ್​ ಶೆಟ್ಟಿ ಅವರ ಈ ಹೊಸ ಪೋಸ್ಟರ್​ ವೈರಲ್​ ಆಗುತ್ತಿದೆ. ಇದನ್ನು ನೋಡಿ ಅನೇಕ ಸೆಲೆಬ್ರಿಟಿಗಳು ಕೂಡ ಫಿದಾ ಆಗಿದ್ದಾರೆ.

ರಕ್ಷಿತ್​ ಶೆಟ್ಟಿ ಅವರು ಇತ್ತೀಚೆಗೆ ದೇಹದ ತೂಕ ಹೆಚ್ಚಿಸಿಕೊಂಡಿದ್ದರು. ‘777 ಚಾರ್ಲಿ’ ಸಿನಿಮಾದ ಟ್ರೇಲರ್​ ಲಾಂಚ್​ ಸಂದರ್ಭದಲ್ಲಿ ಮಾಧ್ಯಮಗಳ ಎದುರು ರಕ್ಷಿತ್​ ಕಾಣಿಸಿಕೊಂಡಾಗ ಅವರು ಕೊಂಚ ದಪ್ಪ ಆಗಿದ್ದಾರೆ ಎಂಬುದು ಎಲ್ಲರ ಗಮನಕ್ಕೂ ಬಂತು. ಅಷ್ಟಕ್ಕೂ ಅವರು ದೇಹದ ತೂಕ ಹೆಚ್ಚಿಸಿಕೊಂಡಿದ್ದು ಯಾಕೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ರಕ್ಷಿತ್​ ಶೆಟ್ಟಿ ಅವರು ಬೇರೆ ಬೇರೆ ಗೆಟಪ್​ ಧರಿಸಲಿದ್ದಾರೆ. ಈ ಮೊದಲು ಬಿಡುಗಡೆ ಆಗಿದ್ದ ಪೋಸ್ಟರ್​ಗಳಲ್ಲಿ ಅವರು ಲವರ್ ಬಾಯ್​ ರೀತಿ ಕಾಣಿಸಿಕೊಂಡಿದ್ದರು. ಚಿತ್ರದ ದ್ವಿತೀಯಾರ್ಧದಲ್ಲಿ ರಕ್ಷಿತ್​ ಶೆಟ್ಟಿ ಲುಕ್​ ಹೇಗಿರಲಿದೆ ಎಂಬುದಕ್ಕೆ ಈಗ ಹೊಸ ಪೋಸ್ಟರ್​ ಮೂಲಕ ಉತ್ತರ ಸಿಕ್ಕಿದೆ.

ಇದನ್ನೂ ಓದಿ
Image
‘ಬೇರೆ ಭಾಷೆಯಲ್ಲಿ ನಟಿಸೋ ಆಸೆ ಇಲ್ಲ, ಕನ್ನಡದಲ್ಲಿ ಒಳ್ಳೆಯ ಚಿತ್ರ ಮಾಡಿದ್ರೆ ದೇಶಾದ್ಯಂತ ರೀಚ್​ ಆಗತ್ತೆ’: ರಕ್ಷಿತ್​ ಶೆಟ್ಟಿ
Image
ರಶ್ಮಿಕಾ ಮಂದಣ್ಣಗೆ ಖಂಡಿತಾ ಇಷ್ಟ ಆಗಲಿದೆ ರಕ್ಷಿತ್​ ಶೆಟ್ಟಿಯ ‘777 ಚಾರ್ಲಿ’ ಸಿನಿಮಾ; ಕಾರಣ ಏನು?
Image
‘ಸಕುಟುಂಬ ಸಮೇತ’ ಮದುವೆ ಕಹಾನಿಯ ಡೀಲ್​ ಖುದುರಿದ ಬಳಿಕ ಬದಲಾಯ್ತು ರಕ್ಷಿತ್​ ಶೆಟ್ಟಿ ತೀರ್ಮಾನ
Image
ರಕ್ಷಿತ್​ ಶೆಟ್ಟಿಗೆ ರುಕ್ಮಿಣಿ ಜೊತೆ ಇದೇ ಮೊದಲ ಬಾರಿಗೆ ಸೀರಿಯಸ್​ ಆಗಿ ಲವ್​ ಆಗ್ತಿದೆ! ಏನ್​ ಸಮಾಚಾರ?

ಇದನ್ನೂ ಓದಿ: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ

ಪಾತ್ರಕ್ಕಾಗಿ ರಕ್ಷಿತ್​ ಶೆಟ್ಟಿ ಅವರು ಸಖತ್​ ತಯಾರಿ ಮಾಡಿಕೊಂಡು ನಟಿಸಿದ್ದಾರೆ. ಅವರ ಬದ್ಧತೆ ಕಂಡು ನಿರ್ದೇಶಕ ಹೇಮಂತ್ ಎಂ.​ ರಾವ್​ ಮತ್ತು ಅವರ ತಂಡಕ್ಕೆ ಖುಷಿ ಆಗಿದೆ. ಈ ಸಿನಿಮಾ ರಕ್ಷಿತ್​ ಶೆಟ್ಟಿ ಅವರ ‘ಪರಂವಾ ಪಿಕ್ಚರ್ಸ್​​’ ಬ್ಯಾನರ್​ ಮೂಲಕ ಮೂಡಿಬರುತ್ತಿದೆ. ಹೊಸ ಪೋಸ್ಟರ್​ ಅನ್ನು ರಕ್ಷಿತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ನಿಮ್ಮ ಮನು ಹತ್ತು ವರ್ಷಗಳ ನಂತರ’ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ. ಅವರ ಮುಖದ ಮೇಲೆ ಹಳೇ ಗಾಯದ ಗುರುತುಗಳು ಕಾಣಿಸಿಕೊಂಡಿವೆ. ಅಂದರೆ ಕಥೆಯಲ್ಲಿ ಸಾಕಷ್ಟು ಘಟನೆಗಳು ನಡೆದ ಬಳಿಕ ಹೀರೋ ಈ ರೀತಿಯಾಗಿ ಬದಲಾಗುತ್ತಾನೆ ಎಂಬ ಸುಳಿವು ನೀಡಲಾಗಿದೆ. ಈ ಗೆಟಪ್​ಗಾಗಿ ರಕ್ಷಿತ್​ ಶೆಟ್ಟಿ ಅವರು ಅಂದಾಜು 20 ಕೆಜಿ ತೂಕ ಹೆಚ್ಚಿಸಿಕೊಂಡಿದ್ದಾರೆ. ಸಾಲ್ಟ್​ ಆ್ಯಂಡ್​ ಪೆಪ್ಪರ್​ ಗಡ್ಡದಲ್ಲಿ ಪೋಸ್​ ನೀಡಿದ್ದಾರೆ. ಒಟ್ಟಾರೆಯಾಗಿ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕುವಲ್ಲಿ ಯಶಸ್ವಿ ಆಗಿದೆ.

ಸದ್ಯ ರಕ್ಷಿತ್ ಶೆಟ್ಟಿ ಅವರು ‘777 ಚಾರ್ಲಿ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಜೂನ್​ ಅಂತ್ಯದಲ್ಲಿ ಅವರು ಮತ್ತೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ. ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಬಳಿಕ ನಿರ್ದೇಶಕ ಹೇಮಂತ್​ ಎಂ. ರಾವ್​ ಮತ್ತು ರಕ್ಷಿತ್​ ಶೆಟ್ಟಿ ಎರಡನೇ ಬಾರಿಗೆ ಒಂದಾಗಿರುವುದರಿಂದಲೂ ಈ ಚಿತ್ರ ಹೈಪ್​ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:48 pm, Mon, 23 May 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ