‘ರಿಚರ್ಡ್ ಆಂಟನಿ’ ಬಗ್ಗೆ ಸುಳಿವು ಕೊಟ್ಟ ರಕ್ಷಿತ್ ಶೆಟ್ಟಿ

Richard Anthony: ರಕ್ಷಿತ್ ಶೆಟ್ಟಿ ‘ರಿಚರ್ಡ್ ಆಂಟನಿ’ ಸಿನಿಮಾದ ಬಗ್ಗೆ ಸುಳಿವೊಂದನ್ನು ನೀಡಿದ್ದಾರೆ. ರಕ್ಷಿತ್ ನೀಡಿರುವ ಸುಳಿವಿನಂತೆ ಆದಷ್ಟು ಬೇಗ ಸಿನಿಮಾ ಪ್ರಾರಂಭವಾಗಲಿದೆ.

‘ರಿಚರ್ಡ್ ಆಂಟನಿ’ ಬಗ್ಗೆ ಸುಳಿವು ಕೊಟ್ಟ ರಕ್ಷಿತ್ ಶೆಟ್ಟಿ
Follow us
ಮಂಜುನಾಥ ಸಿ.
|

Updated on: Feb 04, 2024 | 3:25 PM

ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಸೈಡ್ ಬಿ ಇತ್ತೀಚೆಗಷ್ಟೆ ಒಟಿಟಿಯಲ್ಲಿ ಬಿಡುಗಡೆ ಆಗಿ ಭಾರಿ ಮೆಚ್ಚುಗೆ ಗಳಿಸುತ್ತಿದೆ. ಚಿತ್ರಮಂದಿರದಲ್ಲಿಯೂ ಸಹ ಈ ಸಿನಿಮಾ ಹಿಟ್ ಎನಿಸಿಕೊಂಡಿತ್ತು. ಈಗ ಒಟಿಟಿಯಲ್ಲಿ ದೇಶ-ವಿದೇಶಗಳ ಸಿನಿಮಾ ಪ್ರೇಕ್ಷಕರನ್ನು ಎಸ್​ಎಸ್​ಇ ತಲುಪಿದ್ದು ಇಡೀ ಚಿತ್ರತಂಡಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದ ಬಳಿಕ ರಕ್ಷಿತ್ ಶೆಟ್ಟಿ ತಮ್ಮದೇ ನಿರ್ದೇಶನದ ‘ರಿಚರ್ಡ್ ಆಂಟನಿ’ ಸಿನಿಮಾದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ರಿಚರ್ಡ್ ಆಂಟನಿ’ ಬಗ್ಗೆ ಇತ್ತೀಚೆಗೆ ಕೆಲವು ಸುದ್ದಿಗಳು ಸಹ ಹರಿದಾಡುತ್ತಿವೆ. ಇದರ ನಡುವೆ ಸಿನಿಮಾದ ಬಗ್ಗೆ ಸಣ್ಣ ಸುಳಿವೊಂದನ್ನು ರಕ್ಷಿತ್ ನೀಡಿದ್ದಾರೆ.

ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ಸಿನಿಮಾ ಒಟಿಟಿಯಲ್ಲಿ ಬಿಡುಗಡೆ ಆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಸುರಿಮಳೆಯೇ ಸುರಿಸಲಾಗುತ್ತಿದೆ. ರಕ್ಷಿತ್ ಶೆಟ್ಟಿ ಆಯ್ದ ಕೆಲವು ಒಳ್ಳೆಯ ಟ್ವೀಟ್​ಗಳಿಗೆ ಪ್ರತಿಕ್ರಿಯೆ ಸಹ ನೀಡುತ್ತಿದ್ದಾರೆ. ‘ಎಸ್​ಎಸ್​ಇ’ ಸೈಡ್ ಬಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದ ನೆಟ್ಟಿಗರೊಬ್ಬರು ರಕ್ಷಿತ್ ಶೆಟ್ಟಿ ಅವರನ್ನು ‘ರಿಚರ್ಡ್ ಆಂಟೋನಿ’ ಯಾವಾರ ಆರಂಭಿಸುತ್ತೀರಿ, ಒಂದು ಸುಳಿವಾದರೂ ಕೊಡಿ ಎಂದಿದ್ದರು.

ಇದನ್ನೂ ಓದಿ:ಪಾರ್ಟಿಗೆ ಕರಿಯಲ್ವಾ ಎಂದ ಶಿವಣ್ಣನಿಗೆ, ರಕ್ಷಿತ್ ಶೆಟ್ಟಿ ಹೇಳಿದ್ದೇನು?

ನೆಟ್ಟಿಗರ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾ ಬಿಡುಗಡೆ ಆಗಿ ಮಾರ್ಚ್ 28ಕ್ಕೆ ಹತ್ತು ವರ್ಷವಾಗುತ್ತದೆ’ ಎಂದಿದ್ದಾರೆ. ‘ರಿಚರ್ಡ್ ಆಂಟನಿ’ ಸಿನಿಮಾವನ್ನು ಅದೇ ದಿನ ಪ್ರಾರಂಭ ಮಾಡುವ ಸಾಧ್ಯತೆ ಇದೆ. ‘ಉಳಿದವರು ಕಂಡಂತೆ’ ಸಿನಿಮಾ 2014ರ ಮಾರ್ಚ್ 28ಕ್ಕೆ ಬಿಡುಗಡೆ ಆಗಿತ್ತು. ಅದಾದ ಬಳಿಕ ಇನ್ಯಾವುದೇ ಸಿನಿಮಾವನ್ನು ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡಿಲ್ಲ. ಇದೀಗ ‘ರಿಚರ್ಡ್ ಆಂಟನಿ’ ನಿರ್ದೇಶನ ಮಾಡುತ್ತಿದ್ದಾರೆ.

‘ರಿಚರ್ಟ್ ಆಂಟನಿ’ ಸಿನಿಮಾವನ್ನು ಹೊಂಬಾಳೆ ಪ್ರೊಡಕ್ಷನ್​ನವರು ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿತ್ತು. ಹೊಂಬಾಳೆಯವರು ಕೆಲ ಪೋಸ್ಟರ್​ಗಳನ್ನು ಸಹ ಬಿಡುಗಡೆ ಮಾಡಿದ್ದರು. ಆದರೆ ಇತ್ತೀಚೆಗೆ ಹೊರಬಂದಿರುವ ಸುದ್ದಿಯಂತೆ ಹೊಂಬಾಳೆಯವರು ‘ರಿಚರ್ಡ್ ಆಂಟನಿ’ ಸಿನಿಮಾವನ್ನು ಕೈಬಿಟ್ಟಿದ್ದಾರಂತೆ. ಹೀಗಾಗಿ ರಕ್ಷಿತ್ ಶೆಟ್ಟಿ ತಾವೇ ಸ್ವತಃ ‘ರಿಚರ್ಡ್ ಆಂಟನಿ’ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ