ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’

Abracadabra Movie: ರಕ್ಷಿತ್​ ಶೆಟ್ಟಿ ನಿರ್ಮಾಣ ಮಾಡುವ ಚಿತ್ರಗಳು ಸಾಮಾನ್ಯ ಸಿನಿಮಾಗಿಂತ ಭಿನ್ನವಾಗಿರುತ್ತದೆ ಎಂಬುದು ಅಭಿಮಾನಿಗಳಿಗೆ ಮನದಟ್ಟಾಗಿದೆ. ಹೀಗಾಗಿ, ರಕ್ಷಿತ್​ ಶೆಟ್ಟಿಗೆ ದೊಡ್ಡ ಅಭಿಮಾನಿ ಬಳಗವೇ ಹುಟ್ಟಿಕೊಂಡಿದೆ.

ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’
ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 24, 2021 | 2:55 PM

‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಸಿನಿಮಾದಲ್ಲಿ ಅನಂತ್​ ನಾಗ್ ಮತ್ತು ರಕ್ಷಿತ್​ ಶೆಟ್ಟಿ​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ಇಬ್ಬರೂ ಮತ್ತೆ ಒಂದಾಗಿದ್ದಾರೆ. ಅಂದರೆ, ಅನಂತ್​ನಾಗ್​ ಮುಂದಿನ ಚಿತ್ರಕ್ಕೆ ರಕ್ಷಿತ್​ ಶೆಟ್ಟಿ ಬಂಡವಾಳ ಹೂಡುತ್ತಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರೆ.

ರಕ್ಷಿತ್​ ಶೆಟ್ಟಿ ನಿರ್ಮಾಣ ಮಾಡುವ ಚಿತ್ರಗಳು ಸಾಮಾನ್ಯ ಸಿನಿಮಾಗಿಂತ ಭಿನ್ನವಾಗಿರುತ್ತದೆ ಎಂಬುದು ಅಭಿಮಾನಿಗಳಿಗೆ ಮನದಟ್ಟಾಗಿದೆ. ಹೀಗಾಗಿ, ರಕ್ಷಿತ್​ ಶೆಟ್ಟಿಗೆ ದೊಡ್ಡ ಅಭಿಮಾನಿ ಬಳಗವೇ ಹುಟ್ಟಿಕೊಂಡಿದೆ. ನಾಯಕನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಅವರು ಹೆಸರು ಮಾಡಿದ್ದಾರೆ. ಈಗ ಅವರು ‘ಆಬ್ರಕಡಾಬ್ರ’ ಹೆಸರಿನ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಈ ಬಗ್ಗೆ ಬರೆದುಕೊಂಡಿರುವ ರಕ್ಷಿತ್​, ‘ನಮ್ಮ ಪರಂವಃ ಸ್ಟುಡಿಯೋಸ್ ನಿರ್ಮಾಣದ ಮುಂದಿನ ಚಿತ್ರ ಆಬ್ರಕಡಾಬ್ರ. ಎಂದಿನಂತೆ ನಿಮ್ಮೆಲ್ಲರ ಪ್ರೀತಿಯ ಆಶೀರ್ವಾದ ನಮ್ಮ ಮೇಲೆ ಹಾಗೂ ಕನ್ನಡ ಚಿತ್ರಗಳ ಮೇಲೆ ಸದಾ ಹೀಗೆ ಇರಲಿ’ ಎಂದು ಕೋರಿದ್ದಾರೆ.

ಈ ಸಿನಿಮಾದಲ್ಲಿ ಅನಂತ್​ ನಾಗ್​, ಸಿರಿ ರವಿಕುಮಾರ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ. ಶಿಶಿರ್​ ರಾಜ್​ಮೋಹನ್​ ಅವರು ಈ ಸಿನಿಮಾದ ಕಥೆ ಬರೆದು, ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಶೀಘ್ರವೇ ಈ ಸಿನಿಮಾದ ಶೂಟಿಂಗ್​ ಆರಂಭಗೊಳ್ಳಲಿದೆ. ರಕ್ಷಿತ್ ಹಂಚಿಕೊಂಡಿರುವ ಪೋಸ್ಟರ್​ ಎಲ್ಲರ ಗಮನ ಸೆಳೆಯುತ್ತಿದೆ.

‘777 ಚಾರ್ಲಿ’ ಸಿನಿಮಾದಲ್ಲಿ ರಕ್ಷಿತ್​ ನಟಿಸುತ್ತಿದ್ದಾರೆ. ಈ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಒಂದು ಶ್ವಾನ ಕೂಡ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಚಿತ್ರದ ಟೀಸರ್​ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿತ್ತು. ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾದಲ್ಲೂ ರಕ್ಷಿತ್​ ನಟಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ‘ರಿಚರ್ಡ್​ ಆ್ಯಂಟೋನಿ’ ಸಿನಿಮಾದಲ್ಲೂ ರಕ್ಷಿತ್​ ನಟಿಸುತ್ತಿದ್ದಾರೆ. ‘ಸಕುಟುಂಬ ಸಮೇತ’ ಮೊದಲಾದ ಸಿನಿಮಾಗಳನ್ನು ಅವರು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: Richard Anthony Teaser: ಯೂಟ್ಯೂಬ್​ನಲ್ಲಿ ಧೂಳೆಬ್ಬಿಸಿದ ರಿಚರ್ಡ್ ಆಂಟನಿ; ಮತ್ತೊಂದು ದಾಖಲೆ ಬರೆದ ರಕ್ಷಿತ್ ಶೆಟ್ಟಿ

 ‘ಹಿಂದೆ ನೋಡೋಕೆ ಇಷ್ಟವಿಲ್ಲ, ನಾನು ಗೋರಿ ಕಟ್ಕೊಂಡೇ ಮುಂದೆ ಹೋಗೋದು’; ಎಲ್ಲಾ ವಿಚಾರಕ್ಕೆ ಸ್ಪಷ್ಟನೆ ನೀಡಿದ ರಕ್ಷಿತ್​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ