ಅಯೋಧ್ಯೆಗೆ ಭೇಟಿ ನೀಡಿ ಅವರ್ಣನೀಯ ಆಧ್ಯಾತ್ಮಿಕ ಅನುಭೂತಿ ಪಡೆದ ರಕ್ಷಿತ್ ಶೆಟ್ಟಿ

Rakshit Shetty: ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅಯೋಧ್ಯೆಗೆ ಭೇಟಿ ನೀಡಿದ್ದು, ಅಲ್ಲಿ ತಮಗಾದ ಅಭೂತಪೂರ್ವ ಅನುಭವದ ಬಗ್ಗೆ, ನಡೆದ ಕಾಕತಾಳೀಯದ ಬಗ್ಗೆ ವಿವರವಾಗಿ ಬರೆದುಕೊಂಡಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡಿ ಅವರ್ಣನೀಯ ಆಧ್ಯಾತ್ಮಿಕ ಅನುಭೂತಿ ಪಡೆದ ರಕ್ಷಿತ್ ಶೆಟ್ಟಿ
Follow us
ಮಂಜುನಾಥ ಸಿ.
|

Updated on: Mar 06, 2024 | 6:49 PM

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ (Rakshit Shetty) ಆಧ್ಯಾತ್ಮದ ಬಗ್ಗೆ ವಿಶೇಷ ಒಲವು, ಆಸಕ್ತಿ ಉಳ್ಳವರು. ದೇವಾಲಯಗಳಿಗೆ ಆಗಾಗ್ಗೆ ಭೇಟಿ ನೀಡುತ್ತಲೇ ಇರುವ ರಕ್ಷಿತ್ ಶೆಟ್ಟಿ ಇತ್ತೀಚೆಗೆ ಅಯೋಧ್ಯೆಗೆ ತೆರಳಿ ಶ್ರೀರಾಮನ ದರ್ಶನ ಮಾಡಿದ್ದಾರೆ. ರಾಮನ ದರ್ಶನ ಮಾಡುವ ಸಮಯದಲ್ಲಿ ತಮಗಾದ ವಿಶೇಷ ಅನುಭೂತಿಯ ಬಗ್ಗೆ, ತಾವು ಗಮನಸಿದ ಅಪರೂಪದ ಸಂಗತಿಗಳ ಬಗ್ಗೆ ರಕ್ಷಿತ್ ಶೆಟ್ಟಿ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಪಡೆದ ಅನುಭವವನ್ನು ಅವರು ಮಾತುಗಳಲ್ಲಿಯೇ ಓದಿ…

‘ಪ್ರಾಣ ಪ್ರತಿಷ್ಠೆ ಆದಾಗಿನಿಂದಲೂ ರಾಮನನ್ನು ನೇರವಾಗಿ ನೋಡಲು ಕಾತರನಾಗಿದ್ದೆ. ಪ್ರಾಣ ಪ್ರತಿಷ್ಠೆಯ ದಿನದಿಂದಲೂ ರಾಮನ ಕಣ್ಣುಗಳು ನನ್ನನ್ನು ಬಹುವಾಗಿ ಸೆಳೆದಿದ್ದವು. ಆ ಕಣ್ಣುಗಳು ನಿಜವಾದ ಕಣ್ಣುಗಳೇ ಎಂದು ನನಗೆ ಪದೇ ಪದೇ ಅನ್ನಿಸಿತ್ತು. ಅದೆಷ್ಟೋ ಬಾರಿ ಚಿತ್ರಗಳನ್ನು ಜೂಮ್ ಮಾಡಿ ಮಾಡಿ ನೋಡಿದ್ದೆ. ‘ಇಂದು ನಾನು ಗಮನಿಸಿದಂತೆ ಕಣ್ಣುಗಳ ಆ ತೇಜತೆಯನ್ನು ಮೂರ್ತಿ ಸ್ವತಃ ತಾನೇ ಆವಾಹಿಸಿಕೊಂಡಿದೆಯೇನೋ ಎನ್ನಿಸಿತು. ಕಣ್ಣುಗಳಿಗೆ ಆ ತೇಜಸ್ಸು ಪ್ರಾಪ್ತವಾಗಲು ಕಣ್ಣಿನ ಬಿಳಿಯ ಭಾಗವನ್ನು ಭಿನ್ನವಾದ ಕುಸುರಿ ಕೆಲಸ ಮಾಡಲಾಗಿದೆ ಎಂದು ನಾನು ಅರಿತುಕೊಂಡೆ’

ಇದನ್ನೂ ಓದಿ:‘ರಕ್ಷಿತ್ ಶೆಟ್ಟಿ ಮೇಲೆ ಒತ್ತಡ ಹಾಕೋದು ನ್ಯಾಯವಲ್ಲ’: ‘ಥಗ್ಸ್​ ಆಫ್​ ಮಾಲ್ಗುಡಿ’ ಬಗ್ಗೆ ಸುದೀಪ್​ ಮಾತು

‘ಇಂದು ಕೊನೆಗೂ ನಾನು ಹತ್ತಿರದಿಂದ ರಾಮನ ಮೂರ್ತಿಯನ್ನು ಕಂಡೆ. ಬಹಳ ಕಡಿಮೆ ಮಂದಿಗೆ ಅಷ್ಟು ಹತ್ತಿರದಿಂದ ರಾಮನನ್ನು ಕಣ್ಣು ತುಂಬಿಸಿಕೊಳ್ಳುವ ಅದೃಷ್ಟ ಪ್ರಾಪ್ತವಾಗುತ್ತದೆ. ರಾಮನ ಮೂರ್ತಿಯ ಮುಂದೆ ಸುಮಾರು ಅರ್ಧ ತಾಸು ನಾನು ಕುಳಿತಿದ್ದೆ. ಹೀಗೆ ಇಷ್ಟು ಸಮಯ ನಾನು ಯಾವ ಮೂರ್ತಿಯ ಮುಂದೆಯೂ ಕೂತಿದ್ದಿಲ್ಲ. ಆದರೆ ಈ ಅನುಭವ ಭಿನ್ನವಾಗಿತ್ತು. ಸಾಮಾನ್ಯವಾಗಿ ಎಲ್ಲ ಮೂರ್ತಿ ಕೆತ್ತನೆಗಳನ್ನು ನಾನು ಶ್ಲಾಘಿಸುತ್ತೇನೆ. ಆದರೆ ಈ ಮೂರ್ತಿಯ ಕುಸುರಿ ಅದ್ಭುತ. ಇದು ಸಾಮಾನ್ಯವಲ್ಲ. ರಾಮನೆಂದರೆ ಹಾಗೆಯೇ ಎನಿಸುತ್ತದೆ. ಆತ ಕೇವಲ ಪೂಜಿಸಿಕೊಳ್ಳುವ ದೇವರು ಮಾತ್ರವಲ್ಲ, ನನ್ನ ಪ್ರಕಾರ ಆತ ಜೀವ ತಳೆದ ಕಲೆ. ಮೂರ್ತಿಯ ಶಿಲ್ಪ ಅರ್ಜುನ್ ಯೋಗಿರಾಜ್ ಜೀವಂತ ದಂತಕತೆ ಆತನನ್ನು ತಲೆಮಾರುಗಳು ನೆನಪಿಟ್ಟುಕೊಳ್ಳಲಿವೆ. ಈ ಹಿಂದೆ ನಾನು ಅರ್ಜುನ್​ರ ಅದ್ಭುತ ಕೆಲಸ ನೋಡಿದ್ದೇನೆ. ಅವರನ್ನು ಭೇಟಿಯಾಗಿ ಮೂರ್ತಿ ಕೆತ್ತುವಾಗಿನ ಅವರ ಅನುಭವವನ್ನು ಕೇಳಿ ತಿಳಿದುಕೊಳ್ಳಬೇಕು ಎಂದೆನಿಸಿದೆ’

‘ಕೆಲವು ವರ್ಷಗಳ ಹಿಂದೆ ಲಾಕ್​ಡೌನ್ ಸಂದರ್ಭದಲ್ಲಿ ಸುಮ್ಮನೆ ಲೆಕ್ಕ ಮಾಡುತ್ತಿದ್ದೆ. ನಾನು 504 ಚಂದ್ರಪರಿಭ್ರಮಣೆಗಳನ್ನು ಯಾವಾಗ ಪೂರೈಸುತ್ತೇನೆ ಎಂದು ಲೆಕ್ಕ ಹಾಕಿ ದಿನಾಂಕವನ್ನು ಗುರುತು ಹಾಕಿಕೊಂಡಿದ್ದೆ. ಆದರೆ ಕಾಲಾಂತರದಲ್ಲಿ ನಾನದನ್ನು ಮರೆತುಬಿಟ್ಟಿದ್ದೆ. ಕಾಕತಾಳೀಯ ಎಂಬಂತೆ ಆ ದಿನ ಕೃಷ್ಣ ಪಕ್ಷ ದಶಮಿ. ಸರಿಯಾಗಿ ಅದೇ ದಿನ ನಾನು ಪ್ರಯಾಗ್​ರಾಜ್​ನಲ್ಲಿದ್ದೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದೆ. ಕಾಶಿಗೆ ಭೇಟಿ ನೀಡಿದೆ. ಅದರ ಮರುದಿನವೇ ನನ್ನ ಹೊಸ ಸಿನಿಮಾಕ್ಕಾಗಿ ಅಯೋಧ್ಯೆಯ ಶ್ರೀರಾಮ ಪ್ರಭುವಿನ ಉತ್ಸವ ಮೂರ್ತಿಯ ಎದುರು ಸಂಕಲ್ಪ ಮಾಡಿದೆ. ಆ ಅನುಭವವನ್ನು ನನಗೆ ಮಾತಿನಲ್ಲಿ ವರ್ಣಿಸಲು ಆಗದು’

‘ಅದೇ ದಿನ ಹನುಮಂತ ದೇವಾಲಯಕ್ಕೆ ಭೇಟಿ ನೀಡಿದ್ದು ಅಭೂತಪೂರ್ವ ಅನುಭವ. ಅಲ್ಲಿನ ಟ್ರಸ್ಟಿಗಳು ನಮಗೆ ನೀಡಿದ ಸ್ವಾಗತಕ್ಕೆ ಧನ್ಯವಾದ. ವಿಶ್ವೇಶ್ವರಪ್ರಸನ್ನ ತೀರ್ಥರಿಗೆ ಹಾಗೂ ಮಹೇಶ್ ಠಾಕೂರ್ ಅವರಿಗೆ ವಿಶೇಷ ಧನ್ಯವಾದ. ನನ್ನ ಸಹೋದರ ರಂಜಿತ್, ಶ್ರೀನಿಶ್, ಸಂದೇಶ್ ಅಣ್ಣ, ದೇವಿ ಚರಣ್ ಕಾವ ಅವರುಗಳು ನಮ್ಮ ಈ ಪ್ರವಾಸವನ್ನು ಸುಂದರಗೊಳಿಸಿದರು. ಇದೊಂದು ಅದ್ಭುತವಾದ ಅನುಭವ. ಜೈ ಆಂಜನೇಯ, ಜೈ ಶ್ರೀರಾಮ್’.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ