AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಪಿರೈಟ್​ ಕೇಸ್​; ಕೋರ್ಟ್​ನಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧಾರ

‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ 2 ಹಾಡುಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಎಫ್​ಐಆರ್​ ದಾಖಲಾಗಿದೆ. ಹಾಗಾಗಿ ರಕ್ಷಿತ್​ ಶೆಟ್ಟಿ ಅವರ ಒಡೆತನದ ಪರಂವಾ ಸ್ಟುಡಿಯೋಸ್​ ಸಂಸ್ಥೆಯು ಪ್ರತಿಕ್ರಿಯೆ ನೀಡಿದೆ. 2 ಹಾಡುಗಳ ಬಳಕೆ ಆಗಿರುವುದು ಎಲ್ಲಿ ಎಂಬುದನ್ನು ತಿಳಿಸಲಾಗಿದೆ. ನ್ಯಾಯಾಲಯದ ಮೆಟ್ಟಿಲು ಏರಲು ‘ಪರಂವಾ ಸ್ಟುಡಿಯೋಸ್​’ ತೀರ್ಮಾನಿಸಿದೆ.

ಕಾಪಿರೈಟ್​ ಕೇಸ್​; ಕೋರ್ಟ್​ನಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧಾರ
ರಕ್ಷಿತ್​ ಶೆಟ್ಟಿ
ಮದನ್​ ಕುಮಾರ್​
|

Updated on:Jul 15, 2024 | 8:47 PM

Share

ನಟ ರಕ್ಷಿತ್​ ಶೆಟ್ಟಿ ಅವರು ನಿರ್ಮಾಪಕನಾಗಿಯೂ ಸಕ್ರಿಯರಾಗಿದ್ದಾರೆ. ಅವರು ನಿರ್ಮಾಣ ಮಾಡುವ ಸಿನಿಮಾಗಳಿಗೆ ಈ ಮೊದಲು ಕೂಡ ವಿಘ್ನಗಳು ಉಂಟಾಗಿದ್ದವು. ರಕ್ಷಿತ್​ ಶೆಟ್ಟಿ ಒಡೆತನದ ‘ಪರಂವಾ ಸ್ಟುಡಿಯೋಸ್’ ನಿರ್ಮಾಣ ಮಾಡಿದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಎರಡು ಹಾಡನ್ನು ಅನುಮತಿ ಇಲ್ಲದೇ ಬಳಸಲಾಗಿದೆ ಎಂಬ ಕಾರಣಕ್ಕೆ ಈಗ ‘ಎಂಆರ್​ಟಿ ಮ್ಯೂಸಿಕ್​’ ಸಂಸ್ಥೆಯು ಕೇಸ್​ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ‘ಪರಂವಾ ಸ್ಟುಡಿಯೋಸ್​’ ಕಡೆಯಿಂದ ಸ್ಪಷ್ಟನೆ ನೀಡಲಾಗಿದೆ. ಅಲ್ಲದೇ, ಈ ವ್ಯಾಜ್ಯವನ್ನು ನ್ಯಾಯಾಲಯದಲ್ಲೇ ಇತ್ಯರ್ಥ ಮಾಡಿಕೊಳ್ಳಲು ರಕ್ಷಿತ್​ ಶೆಟ್ಟಿ ನಿರ್ಧರಿಸಿದ್ದಾರೆ.

‘ಪರಂವಾ ಸ್ಟುಡಿಯೋಸ್​’ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ವಿವರವಾಗಿ ಸ್ಪಷ್ಟನೆ ಪ್ರಕಟಿಸಲಾಗಿದೆ. ಆ ಪತ್ರ ಹೀಗಿದೆ.. ‘ಪ್ರೀತಿಯ ಪ್ರೇಕ್ಷಕರೇ ಹಾಗೂ ಮಾಧ್ಯಮ ಮಿತ್ರರೇ, ನಾವು ಈ ಬಹಿರಂಗ ಪತ್ರವನ್ನು ಎಂಆರ್​ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ 2 ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟಿಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಕಾರಣ, ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿದೆ ಎಂದು, ಹಾಗು ಬಳಕೆಯ ರೂಪವನ್ನು ನಿಮ್ಮ ಗಮನಕ್ಕೆ ತರಲು’ ಎಂದು ಪತ್ರ ಆರಂಭಿಸಲಾಗಿದೆ.

‘ಬಳಕೆಯ ವಿವರ: 1. ತರಗತಿಯೊಂದಲ್ಲಿ ಶಾಲಾಬಾಲಕಿ ‘ಒಮ್ಮೆ ನಿನ್ನನ್ನು..’ ಹಾಡನ್ನು ಸಹಪಾಠಿಗಳ ಮುಂದೆ ಹಾಡುವುದು. 2. ಮನೆಯ ಟಿವಿಯಲ್ಲಿ ‘ನ್ಯಾಯ ಎಲ್ಲಿದೆ..’ ಹಾಡಿನ ಪ್ರಸಾರಣೆ. ಈ ಮುಂಚೆ, ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮಾ ತೆರೆಕಾಣುವುದಕ್ಕೂ ಮುನ್ನವೇ ನಾವು ‘ಎಂಆರ್​ಟಿ’ ಸಂಸ್ಥೆಯ ಮುಖ್ಯಸ್ಥರೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದೆವು. ಆದರೆ ಅವರು ನಮ್ಮ ಮುಂದೆ ಇಟ್ಟ ಶುಲ್ಕ ನಮ್ಮ ಬಜೆಟ್​ಅನ್ನು ಮೀರಿತ್ತು. ಎಂಆರ್​ಟಿ ಸಂಸ್ಥೆ ಶುಲ್ಕದ ಕುರಿತಾಗಿ ಮರುಮಾತುಕತೆಗೆ ತಯಾರಿರರಿಲ್ಲ. ಈಗ, ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್​ಐಆರ್ ದಾಖಲಾಗಿದೆ’ ಎಂದು ಬರೆಯಲಾಗಿದೆ.

‘ಇದು ನಿಜವಾಗಿಯು ಹಾಡಿನ ಹಕ್ಕು ಉಲ್ಲಂಘನೆಯೆ? ಹೌದಾಗಿದ್ದೇ ಆದಲ್ಲಿ, ನಾವು ತೆರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂಆರ್​ಟಿ ಸಂಸ್ಥೆಯಿಂದ ಕೇಳಲ್ಪಟ್ಟದ್ದು ಬೃಹತ್‌ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ, ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು? ಇದೊಂದು ಯಕ್ಷ ಪ್ರಶ್ನೆ. ಇದಕ್ಕೆ ಉತ್ತರ ನಾವು ಹುಡುಕಬಯಸುತ್ತೇವೆ’ ಎಂದಿದೆ ‘ಪರಂವಾ ಸ್ಟುಡಿಯೋಸ್​’.

ಇದನ್ನೂ ಓದಿ: ಆರು ಮರಿಗಳಿಗೆ ಜನ್ಮ ನೀಡಿದ 777 ಚಾರ್ಲಿ; ಲೈವ್​ ಬಂದು ಸಿಹಿ ಸುದ್ದಿ ನೀಡಿದ ರಕ್ಷಿತ್​ ಶೆಟ್ಟಿ

‘ಹಾಗಾಗಿ, ನ್ಯಾಯ ಮತ್ತು ಪ್ರಭುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯಸ್ಥಾನದಲ್ಲಿಯೇ ನಿರ್ಧಾರವಾಗಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ.ಇದರಿಂದ ಇನ್ನು ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿನಿಮಾಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು ನಮ್ಮ ಈ ಪ್ರಾಮಾಣಿಕ ಪ್ರಯತ್ನ. ನಿಮ್ಮ ಬೆಂಬಲ ಮತ್ತು ಪ್ರೀತಿಯನ್ನು ಆಶಿಸುವ, ಪರಂವಾ ಸ್ಟಡಿಯೋಸ್’ ಎಂದು ಬಹಿರಂಗ ಪತ್ರ ಹಂಚಿಕೊಳ್ಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:37 pm, Mon, 15 July 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ