AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಸಿನಿಮಾ ನೋಡಿ ಹೊಗಳಿದ ರಕ್ಷಿತಾ ಪ್ರೇಮ್, ಮಾಸ್ಟರ್ ಆನಂದ್

ಕಿಚ್ಚ ಸುದೀಪ್, ಉಪೇಂದ್ರ ಬಳಿಕ ರಕ್ಷಿತಾ ಪ್ರೇಮ್, ಮಾಸ್ಟರ್ ಆನಂದ್ ಕೂಡ ‘ಟಾಕ್ಸಿಕ್’ ಸಿನಿಮಾ ನೋಡಿದ್ದಾರೆ. ಬಳಿಕ ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿರುವ ಮಿಶ್ರ ಪ್ರತಿಕ್ರಿಯೆ ನಡುವೆಯೂ ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ.

‘ಟಾಕ್ಸಿಕ್’ ಸಿನಿಮಾ ನೋಡಿ ಹೊಗಳಿದ ರಕ್ಷಿತಾ ಪ್ರೇಮ್, ಮಾಸ್ಟರ್ ಆನಂದ್
Rakshitha Prem, Yash, Master Anand
ಮದನ್​ ಕುಮಾರ್​
|

Updated on: Aug 30, 2026 | 11:15 AM

Share

‘ಟಾಕ್ಸಿಕ್’ (Toxic) ಸಿನಿಮಾ ನೋಡಿದ ಕೆಲವರಿಗೆ ಇಷ್ಟ ಆಗಿಲ್ಲ. ಪರಭಾಷೆಯ ಪ್ರೇಕ್ಷಕರು ಹೆಚ್ಚಾಗಿ ಈ ಸಿನಿಮಾವನ್ನು ಟ್ರೋಲ್ ಮಾಡುತ್ತಿದ್ದಾರೆ. ಪ್ರೇಕ್ಷಕರು ಹಾಗೂ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದ ಈ ಸಿನಿಮಾ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಯಶ್ (Yash) ಅವರ ಪ್ರಯತ್ನಕ್ಕೆ ಮೆಚ್ಚುಗೆ ಸಲ್ಲಬೇಕು ಎಂದು ಅಪ್ಪಟ ಅಭಿಮಾನಿಗಳು ಹೇಳುತ್ತಿದ್ದಾರೆ. ಅವರ ನಟನೆಗೆ ಪ್ರಶಂಸೆ ಸಿಕ್ಕಿದೆ. ಕನ್ನಡದ ಹಲವು ಸೆಲೆಬ್ರಿಟಿಗಳು ಈ ಸಿನಿಮಾ ಬಗ್ಗೆ ಮಾತನಾಡುತ್ತಿದ್ದಾರೆ. ಸುದೀಪ್, ಉಪೇಂದ್ರ, ಆರ್. ಚಂದ್ರು ಬಳಿಕ ರಕ್ಷಿತಾ ಪ್ರೇಮ್, ಮಾಸ್ಟರ್ ಆನಂದ್, ಪ್ರದೀಪ್ ಈಶ್ವರ್ ಮುಂತಾದವರು ‘ಟಾಕ್ಸಿಕ್’ ಸಿನಿಮಾಗೆ ಬೆಂಬಲ ಸೂಚಿಸಿದ್ದಾರೆ.

ಸಿನಿಮಾ ನೋಡಿದ ಬಳಿಕ ಮಾಸ್ಟರ್ ಆನಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಹಾಯ್, ಎಲ್ಲರಿಗೂ ನಮಸ್ಕಾರ. ಇದು ಮಧ್ಯ ರಾತ್ರಿ ಪೋಸ್ಟ್. ಟಾಕ್ಸಿಕ್ ಸಿನಿಮಾ ನೋಡಿಕೊಂಡು ಬಂದು ಈ ವಿಡಿಯೋ ಮಾಡುತ್ತಿದ್ದೇನೆ. ಭಾವನೆಗಳು ಹಾಗೆ ಇರುವಾಗಲೇ ಹೇಳಿಬಿಡೋಣ ಅಂತ ವಿಡಿಯೋ ಮಾಡಿದ್ದೇನೆ. ಈ ಸಿನಿಮಾ ಬಗ್ಗೆ ಬೇರೆ ರೀತಿಯ ಅಭಿಪ್ರಾಯವನ್ನು ಜನರು ಯಾಕೆ ಕೊಡುತ್ತಿದ್ದಾರೆ ಅಂತ ಗೊತ್ತಿಲ್ಲ’ ಎಂದು ಮಾಸ್ಟರ್ ಆನಂದ್ ಅವರು ಮಾತು ಆರಂಭಿಸಿದ್ದಾರೆ.

ಟಾಕ್ಸಿಕ್ ಹೊಗಳಿದ ಮಾಸ್ಟರ್ ಆನಂದ್:

‘ನಿಜವಾಗಿಯೂ ಇದೊಂದು ಬ್ರಿಲಿಯಂಟ್ ಸ್ಕ್ರಿಪ್ಟ್, ಚಿತ್ರಕಥೆ, ಡೈರೆಕ್ಷನ್. ಇದನ್ನು ನೋಡಲು ಬೇರೆಯದೇ ದೃಷ್ಟಿಕೋನ ಬೇಕು. ಆ ದೃಷ್ಟಿಕೋನ ಇಲ್ಲದೇ ಇರುವುದಕ್ಕೆ ನಿಮಗೆ ಗೊಂದಲ ಆಗುತ್ತಿದೆ ಎನಿಸುತ್ತದೆ. ಈ ಸಿನಿಮಾ ತುಂಬಾ ಕ್ಲಿಯರ್ ಆಗಿದೆ. ಹಲವು ಭಾವನೆಗಳು ಈ ಸಿನಿಮಾದಲ್ಲಿವೆ. ಆ್ಯಕ್ಷನ್, ರೊಮ್ಯಾನ್ಸ್ ಇದೆ. ಆರ್ಟ್ ಡೈರೆಕ್ಷನ್ ಚೆನ್ನಾಗಿದೆ. ನಾವು ಈ ರೀತಿಯ ಸಿನಿಮಾಗೆ ಬೆಂಬಲ ನೀಡಬೇಕು’ ಎಂದು ಮಾಸ್ಟರ್ ಆನಂದ್ ಅವರು ಹೇಳಿದ್ದಾರೆ.

‘ಟಾಕ್ಸಿಕ್’ ನೋಡಿ ರಕ್ಷಿತಾ ಪ್ರೇಮ್ ಮೆಚ್ಚುಗೆ:

‘ಈಗ ತಾನೆ ನಾನು ಟಾಕ್ಸಿಕ್ ಸಿನಿಮಾ ನೋಡಿದ್ದೇನೆ. ತುಂಬ ಚೆನ್ನಾಗಿ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ. ಒಬ್ಬ ಮನುಷ್ಯನ ಮನಸ್ಥಿತಿ ಬಗ್ಗೆ ಈ ಸಿನಿಮಾ ಇದೆ. ಇದು ದಕ್ಷಿಣ ಭಾರತದ ಸಿನಿಮಾ ಎಂಬ ಕಾರಣಕ್ಕೆ ನಾವು ಒಪ್ಪಿಕೊಳ್ಳುತ್ತಿಲ್ಲವೇ? ಯಶ್ ಅವರ ನಟನೆ ಈ ಸಿನಿಮಾದಲ್ಲಿ ಬಹಳ ಚೆನ್ನಾಗಿದೆ. ನನ್ನ ಸ್ನೇಹಿತರಿಗೂ ಈ ಸಿನಿಮಾ ಇಷ್ಟ ಆಯಿತು’ ಎಂದು ರಕ್ಷಿತಾ ಪ್ರೇಮ್ ಅವರು ಹೇಳಿದ್ದಾರೆ.

ಇದನ್ನೂ ಓದಿ: 4 ದಿನಕ್ಕೆ ಎಷ್ಟಾಯಿತು ‘ಟಾಕ್ಸಿಕ್’ ಸಿನಿಮಾದ ಕಲೆಕ್ಷನ್? ಇಲ್ಲಿದೆ ಲೆಕ್ಕ

ಯಶ್ ಬಗ್ಗೆ ಪ್ರದೀಪ್ ಈಶ್ವರ್ ಮಾತು:

‘ಹಿಟ್ ಅಥವಾ ಫ್ಲಾಪ್ ಎನ್ನುವುದು ಹೀರೊಗಳಿಗೆ ಅನ್ವಯಿಸುತ್ತದೆಯೇ ಹೊರತು ಲೆಜೆಂಡ್‌ಗಳಿಗಲ್ಲ. ಯಶ್ ಅವರು ಕೇವಲ ಕರ್ನಾಟಕಕ್ಕೆ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೇ ಒಬ್ಬ ನಿಜವಾದ ಲೆಜೆಂಡ್. ಕನ್ನಡಿಗನಾಗಿ ನಾನು ಯಶ್ ಅವರನ್ನು ಬೆಂಬಲಿಸುತ್ತೇನೆ. ಕರ್ನಾಟಕದ ಈ ಪ್ರತಿಭೆಯನ್ನು ನಾವೆಲ್ಲಾ ಕನ್ನಡಿಗರು ಒಗ್ಗಟ್ಟಾಗಿ ನಿಂತು ಬೆಂಬಲಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ’ ಎಂದು ಪ್ರದೀಪ್ ಈಶ್ವರ್ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ