‘ಶ್ವಾನದ ಮೇಲೆ ಆನೆ ದಾಳಿ ಮಾಡಿದಂತೆ’; ದರ್ಶನ್ ಪ್ರಕರಣದಲ್ಲಿ ಅಭಿಪ್ರಾಯ ಹಂಚಿಕೊಂಡ ಖ್ಯಾತ ನಿರ್ದೇಶಕ

ರಾಮ್ ಗೋಪಾಲ್ ವರ್ಮಾ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅನೇಕ ಪ್ರಕರಣಗಳ ಬಗ್ಗೆ ಅವರು ಮಾತನಾಡುತ್ತಾರೆ. ಇತ್ತೀಚೆಗೆ ಅವರು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದರು. ಇದು ಸರಿ ಅಲ್ಲ ಎಂದಿದ್ದರು. ಈಗ ಅವರು ಮತ್ತೊಮ್ಮೆ ಇದೇ ವಿಚಾರದ ಬಗ್ಗೆ ಮಾತನಾಡಿದ್ದಾರೆ.

‘ಶ್ವಾನದ ಮೇಲೆ ಆನೆ ದಾಳಿ ಮಾಡಿದಂತೆ’; ದರ್ಶನ್ ಪ್ರಕರಣದಲ್ಲಿ ಅಭಿಪ್ರಾಯ ಹಂಚಿಕೊಂಡ ಖ್ಯಾತ ನಿರ್ದೇಶಕ
‘ಶ್ವಾನದ ಮೇಲೆ ಆನೆ ದಾಳಿ ಮಾಡಿದಂತೆ’; ದರ್ಶನ್ ಪ್ರಕರಣದಲ್ಲಿ ಅಭಿಪ್ರಾಯ ಹಂಚಿಕೊಂಡ ಖ್ಯಾತ ನಿರ್ದೇಶಕ
Follow us
ರಾಜೇಶ್ ದುಗ್ಗುಮನೆ
|

Updated on:Jun 22, 2024 | 11:29 AM

ರೇಣುಕಾ ಸ್ವಾಮಿ ಕೊಲೆ ಕೇಸ್​​ನಲ್ಲಿ ದರ್ಶನ್ (Darshan) ಹಾಗೂ ಪವಿತ್ರಾ ಗೌಡ ಸೇರಿ ಅನೇಕರು ಅರೆಸ್ಟ್ ಆಗಿದ್ದಾರೆ. ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತದೆ. ದರ್ಶನ್ ಬಗ್ಗೆ ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕೆಲವರು ಅವರ ವಿರುದ್ಧ ಮಾತನಾಡಿದರೆ ಇನ್ನೂ ಕೆಲವರು ಅವರ ಪರ ವಹಿಸಿದ್ದಾರೆ. ಈಗ ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ಮತ್ತೆ ದರ್ಶನ್ ವಿರುದ್ಧ ಧ್ವನಿ ಎತ್ತಿದ್ದಾರೆ.

ರಾಮ್ ಗೋಪಾಲ್ ವರ್ಮಾ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅನೇಕ ಪ್ರಕರಣಗಳ ಬಗ್ಗೆ ಅವರು ಮಾತನಾಡುತ್ತಾರೆ. ಇತ್ತೀಚೆಗೆ ಅವರು ದರ್ಶನ್ ವಿರುದ್ಧ ಧ್ವನಿ ಎತ್ತಿದ್ದರು. ಇದು ಸರಿ ಅಲ್ಲ ಎಂದಿದ್ದರು. ಈಗ ಅವರು ಮತ್ತೊಮ್ಮೆ ಇದೇ ವಿಚಾರದ ಬಗ್ಗೆ ಮಾತನಾಡಿದ್ದಾರೆ. ದರ್ಶನ್ ಅವರನ್ನು ಆನೆ ಎಂದು ಕರೆದಿದ್ದು, ರೇಣುಕಾ ಸ್ವಾಮಿಯನ್ನು ಶ್ವಾನ (ಗಾತ್ರದಲ್ಲಿ) ಎಂದು ಕರೆದಿದ್ದಾರೆ.

‘ದರ್ಶನ್ ಅವರು ರೇಣುಕಾ ಸ್ವಾಮಿಯ ಮೇಲೆ ದಾಳಿ ಮಾಡಿದ್ದು ಯಾವ ರೀತಿ ಇದೆ ಎಂದರೆ ಆನೆಯು ಶ್ವಾನದ ಮೇಲೆ ದಾಳಿ ಮಾಡಿದಂತೆ. ಶ್ವಾನ ಅನ್ನೋದು ಅವಹೇಳನಕಾರಿಯಾಗಿ ಅಲ್ಲ, ಗಾತ್ರದಲ್ಲಿ. ನಾಯಿ ಬೊಗಳಿತು ಎಂದು ಆನೆ ಹೋಗಿ ದಾಳಿ ಮಾಡಿದರೆ ಏನಾಗಬಹುದು? ಖಂಡಿತವಾಗಿಯೂ ಸಾವೇ’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ.

ಇದನ್ನೂ ಓದಿ: ದರ್ಶನ್​ಗೆ ಕೌನ್ಸಲಿಂಗ್ ಅಗತ್ಯವಿದೆ ಎಂದು ನಾನು ಜನವರಿಯಲ್ಲೇ ಹೇಳಿದ್ದೆ; ಮನೋ ವೈದ್ಯೆ

ದರ್ಶನ್ ಅವರ ಬಂಧನ ಆಗಿ ಎರಡು ವಾರ ಆಗುತ್ತಾ ಬಂದಿದೆ. ಇಂದು (ಜೂನ್ 22) ಮತ್ತೆ ದರ್ಶನ್ ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗುತ್ತಿದೆ. ದರ್ಶನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:26 am, Sat, 22 June 24

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್