AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ

Ram Gopal Varma | Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ತುಣುಕುಗಳನ್ನು ರಾಮ್​ ಗೋಪಾಲ್​ ವರ್ಮಾ ಅವರಿಗೆ ತೋರಿಸಲಾಗಿದೆ. 3ಡಿ ದೃಶ್ಯಗಳ ಬಗ್ಗೆ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರದ 3ಡಿ ದೃಶ್ಯ ನೋಡಿ ವಿಮರ್ಶೆ ನೀಡಿದ ಆರ್​ಜಿವಿ
ಕಿಚ್ಚ ಸುದೀಪ್​, ರಾಮ್​ ಗೋಪಾಲ್​ ವರ್ಮಾ
TV9 Web
| Updated By: ಮದನ್​ ಕುಮಾರ್​|

Updated on: Apr 24, 2022 | 3:54 PM

Share

ಕನ್ನಡದ ಸಿನಿಮಾಗಳು ದೇಶವ್ಯಾಪಿ ಸದ್ದು ಮಾಡುತ್ತಿವೆ. ಮೊದಲು ಕನ್ನಡ ಚಿತ್ರರಂಗದ ಮಾರುಕಟ್ಟೆ ಸಣ್ಣದು ಎನ್ನುತ್ತಿದ್ದವರು ಈಗ ತಮ್ಮ ಅಭಿಪ್ರಾಯ ಬದಲಾಯಿಸಿಕೊಂಡಿದ್ದಾರೆ. ಈಗಾಗಲೇ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಧೂಳೆಬ್ಬಿಸಿದೆ. ಇನ್ನೂ ಕೆಲವು ಚಿತ್ರಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಸಜ್ಜಾಗಿವೆ. ಆ ಪೈಕಿ ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ಅನೂಪ್​ ಭಂಡಾರಿ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಹಲವು ವಿಶೇಷತೆಗಳು ಇರಲಿವೆ. ಅದರಲ್ಲೂ 3ಡಿ ವರ್ಷನ್​ನಲ್ಲಿ ಈ ಸಿನಿಮಾ ಮೂಡಿಬರುತ್ತಿರುವುದರಿಂದ ಸಿನಿಪ್ರಿಯರು ಹೆಚ್ಚು ಕಾತರ ಇಟ್ಟುಕೊಂಡಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್​ ನೋಡಿ ಕಿಚ್ಚ ಸುದೀಪ್​ (Kichcha Sudeep) ಅಭಿಮಾನಿಗಳು ವಾವ್​ ಎಂದಿದ್ದಾರೆ. ಇನ್ನೇನಿದ್ದರೂ ಸಿನಿಮಾ ಕಣ್ತುಂಬಿಕೊಳ್ಳುವುದೊಂದೇ ಬಾಕಿ. ಅಷ್ಟರಲ್ಲಿ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಈ ಸಿನಿಮಾ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಕೆಲವು 3ಡಿ ದೃಶ್ಯಗಳನ್ನು ನೋಡಿರುವ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಈ ಕುರಿತು ಅವರು ಟ್ವೀಟ್​ ಮಾಡಿದ್ದಾರೆ.

ರಾಮ್​ ಗೋಪಾಲ್​ ವರ್ಮಾ ಮತ್ತು ಉಪೇಂದ್ರ ಅವರು ಜೊತೆಯಾಗಿ ‘ಐ ಆ್ಯಮ್​ ಆರ್​’ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಫಸ್ಟ್​ಲುಕ್​ ಲಾಂಚ್​ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಅದಕ್ಕೆ ಕಿಚ್ಚ ಸುದೀಪ್​ ಅತಿಥಿಯಾಗಿ ಆಗಿದ್ದರು. ಅಷ್ಟೇ ಅಲ್ಲ, ಸುದೀಪ್​ ಮತ್ತು ರಾಮ್​ ಗೋಪಾಲ್​ ವರ್ಮಾ ನಡುವೆ ಮೊದಲಿನಿಂದಲೂ ಒಡನಾಟ ಇದೆ. ಇಬ್ಬರೂ ಜೊತೆಯಾಗಿ ಸಿನಿಮಾ ಕೂಡ ಮಾಡಿದ್ದರು. ಈ ಆತ್ಮೀಯತೆಯ ಕಾರಣದಿಂದಲೇ ಅವರಿಗೆ ‘ವಿಕ್ರಾಂತ್​ ರೋಣ’ ಚಿತ್ರದ ತುಣುಕುಗಳನ್ನು ತೋರಿಸಲಾಗಿದೆ.

‘ವಿಕ್ರಾಂತ್​ ರೋಣ’ ಸಿನಿಮಾದ ಟೀಸರ್​ ಅನ್ನು ರಾಮ್​ ಗೋಪಾಲ್​ ವರ್ಮಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಅನೂಪ್​ ಭಂಡಾರಿ ನಿರ್ದೇಶನ ಮಾಡಿದ, ಕಿಚ್ಚ ಸುದೀಪ್​ ಅಭಿನಯಿಸಿರುವ ‘ವಿಕ್ರಾಂತ್​ ರೋಣ’ ಚಿತ್ರದ ಕೆಲವು 3ಡಿ ದೃಶ್ಯಗಳನ್ನು ನೋಡುವ ಅವಕಾಶ ಸಿಕ್ಕಿತು. ಇದು ನೆಕ್ಸ್ಟ್​ ಲೆವೆಲ್​ ಆಗಿದೆ, ಅತ್ಯದ್ಭುತವಾಗಿದೆ. ಜು.28ರಂದು ಪೂರ್ತಿ ಸಿನಿಮಾ ನೋಡಲು ಕಾತರ ಮೂಡಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಅವರು ಟ್ವೀಟ್​ ಮಾಡಿದ್ದಾರೆ.

ಆರ್​ಜಿವಿ ನೀಡಿದ ವಿಮರ್ಶೆಗೆ ನಿರ್ದೇಶಕ ಅನೂಪ್​ ಭಂಡಾರಿ ಪ್ರತಿಕ್ರಿಯೆ ನೀಡಿದ್ದಾರೆ. ‘ಧನ್ಯವಾದಗಳು ಸರ್​, ನಿಮ್ಮ ಮಾತುಗಳಿಂದಾಗಿ 3ಡಿ ಕ್ವಾಲಿಟಿ ಮೇಲೆ ನಮಗೆ ಇರುವ ನಂಬಿಕೆ 10 ಪಟ್ಟು ಹೆಚ್ಚಾಗಿದೆ’ ಎಂದು ಅನೂಪ್​ ಭಂಡಾರಿ ಬರೆದುಕೊಂಡಿದ್ದಾರೆ. ಆರ್​ಜಿವಿ ಮಾತಿಗೆ ಕಿಚ್ಚ ಸುದೀಪ್​ ಕೂಡ ಧನ್ಯವಾದ ಅರ್ಪಿಸಿದ್ದಾರೆ.

ಅಭಿಮಾನಿಗಳಿಗೆ ‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮುಖ್ಯಪಾತ್ರದಲ್ಲಿ ಕಿಚ್ಚ ಸುದೀಪ್​, ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಬೃಹತ್​ ಸೆಟ್​ಗಳನ್ನು ನಿರ್ಮಿಸಿ ‘ವಿಕ್ರಾಂತ್​ ರೋಣ’ ಚಿತ್ರೀಕರಣ ಮಾಡಲಾಗಿದೆ. ಸುದೀಪ್​ ಕೂಡ ಈ ಸಿನಿಮಾ ಬಗ್ಗೆ ವಿಶೇಷ ಆಸಕ್ತಿ ವಹಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್​ಗಳು ಗಮನ ಸೆಳೆದಿವೆ. ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಟೈಟಲ್​ ಲಾಂಚ್​ ಮಾಡಿದ್ದು ಸಖತ್​ ಸುದ್ದಿಯಾಗಿತ್ತು. ಜು. 28ರಂದು ಈ ಸಿನಿಮಾ ನೋಡಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ:

ಸುದೀಪ್​ ಜೀವನದಲ್ಲಿ ಬದಲಾವಣೆಗೆ ಕಾರಣವಾದ ಇಬ್ಬರು ಡೈರೆಕ್ಟರ್​ ಇವರು; ವೇದಿಕೆಯಲ್ಲಿ ವಿವರಿಸಿದ ಕಿಚ್ಚ

I am R Movie: ಉಪೇಂದ್ರ- ಆರ್​ಜಿವಿ ಕಾಂಬಿನೇಷನ್​ನ ಹೊಸ ಚಿತ್ರ ‘ಐ ಆ್ಯಮ್​ ಆರ್’ ಫಸ್ಟ್​​ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ