‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ

Vikrant Rona: ‘ವಿಕ್ರಾಂತ್​ ರೋಣ’ ಚಿತ್ರ 3ಡಿ ವರ್ಷನ್​ನಲ್ಲಿ ಮೂಡಿಬರುತ್ತಿದೆ. ದೊಡ್ಡ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿರುವುದಕ್ಕೆ ರಾಮ್​ ಗೋಪಾಲ್ ವರ್ಮಾ ಸಂತಸ ವ್ಯಕ್ತಪಡಿಸಿದ್ದಾರೆ.

‘ಮತ್ತೊಂದು ದೊಡ್ಡ ಚಿತ್ರ ಬರ್ತಿದೆ’: ‘ವಿಕ್ರಾಂತ್​ ರೋಣ’ ಬಗ್ಗೆ ಪರಭಾಷೆ ಮಂದಿಗೆ ಮೊದಲೇ ಎಚ್ಚರಿಕೆ ನೀಡಿದ ಆರ್​ಜಿವಿ
ಆರ್​ಜಿವಿ, ಕಿಚ್ಚ ಸುದೀಪ್​
Follow us
TV9 Web
| Updated By: ಮದನ್​ ಕುಮಾರ್​

Updated on: May 22, 2022 | 2:51 PM

ಕನ್ನಡದ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಶೈನ್​ ಆಗುತ್ತಿವೆ. ಈಗಾಗಲೇ ‘ಕೆಜಿಎಫ್​: ಚಾಪ್ಟರ್​ 2’ ಮಾಡಿದ ಸಾಧನೆಯ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಮುಂಬರುವ ಎಲ್ಲ ಬಿಗ್​ ಬಜೆಟ್​ ಕನ್ನಡ ಸಿನಿಮಾಗಳ ಬಗ್ಗೆ ಹೈಪ್​ ಸೃಷ್ಟಿ ಆಗಿದೆ. ಆ ಪೈಕಿ ಹೆಚ್ಚು ಸೌಂಡು ಮಾಡುತ್ತಿರುವುದು ‘ವಿಕ್ರಾಂತ್​ ರೋಣ’ (Vikrant Rona) ಚಿತ್ರ. ಅನೂಪ್​ ಭಂಡಾರಿ ನಿರ್ದೇಶನ ಮಾಡಿರುವ ಈ ಸಿನಿಮಾ ಬಿಡುಗಡೆಗೂ ಮೊದಲೇ ಸಖತ್​ ನಿರೀಕ್ಷೆ ಹುಟ್ಟುಹಾಕಿದೆ. ಈವರೆಗೂ ‘ವಿಕ್ರಾಂತ್​ ರೋಣ’ ಚಿತ್ರದಿಂದ ಹೊರಬಂದಿರುವುದು ಕೆಲವು ಪೋಸ್ಟರ್​ ಮತ್ತು ಟೀಸರ್​ ಮಾತ್ರ. ಅಷ್ಟರಲ್ಲಾಗಲೇ ಕಿಚ್ಚ ಸುದೀಪ್​ (Kichcha Sudeep) ಅಭಿಮಾನಿಗಳು ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳುವಂತಾಗಿದೆ. ಜುಲೈ 28ರಂದು ಈ ಸಿನಿಮಾ ರಿಲೀಸ್​ ಆಗಲಿದ್ದು, ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಂದಕ್ಕಿಂತ ಒಂದು ಎಗ್ಸೈಟಿಂಗ್​ ನ್ಯೂಸ್​ ಹಂಚಿಕೊಳ್ಳುವ ಮೂಲಕ ಸಿನಿಪ್ರಿಯರ ಕೌತುಕವನ್ನು ಹೆಚ್ಚಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಚಿತ್ರದ ಬಗ್ಗೆ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ (Ram Gopal Varma) ಅವರು ಕೂಡ ಮೆಚ್ಚುಗೆ ಸೂಚಿಸುತ್ತಿದ್ದಾರೆ.

‘ವಿಕ್ರಾಂತ್​ ರೋಣ’ ಚಿತ್ರ 3ಡಿ ವರ್ಷನ್​ನಲ್ಲಿ ಮೂಡಿಬರುತ್ತಿದೆ. ದೊಡ್ಡ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗುತ್ತಿದೆ. ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಇಂಗ್ಲಿಷ್​ನಲ್ಲಿಯೂ ಈ ಚಿತ್ರ ತೆರೆಕಾಣಲಿದೆ. ಹಿಂದಿಯಲ್ಲಿ ‘ವಿಕ್ರಾಂತ್ ರೋಣ’ ಸಿನಿಮಾವನ್ನು ಬಿಡುಗಡೆ ಮಾಡುವ ಹೊಣೆಯನ್ನು ‘ಪಿವಿಆರ್​’ ಸಂಸ್ಥೆ ವಹಿಸಿಕೊಂಡಿದೆ. ಆ ಸುದ್ದಿಗೆ ಪ್ರತಿಕ್ರಿಯೆ ನೀಡಿರುವ ರಾಮ್​ ಗೋಪಾಲ್​ ವರ್ಮಾ ಅವರು ಭಾರಿ ಗೆಲುವಿನ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ
Image
Vikrant Rona: ‘ವಿಕ್ರಾಂತ್​ ರೋಣ’ ಚಿತ್ರದ ಬಿಗ್​ ಅನೌನ್ಸ್​ಮೆಂಟ್​; ಕಾತರದಿಂದ ಕಾಯುತ್ತಿರುವ ಕಿಚ್ಚ ಸುದೀಪ್ ಫ್ಯಾನ್ಸ್​
Image
ರಾಷ್ಟ್ರ ಭಾಷೆ ವಿವಾದದ ಬಳಿಕ ಗಲ್ಲಾ ಪೆಟ್ಟಿಗೆಯಲ್ಲೂ ಕಿಚ್ಚ ಸುದೀಪ್​ ವರ್ಸಸ್​ ಅಜಯ್​ ದೇವಗನ್​ ಪೈಪೋಟಿ
Image
‘ಗರುಡ ಗಮನ ವೃಷಭ ವಾಹನ’ ಚಿತ್ರಕ್ಕೆ ಕಿಚ್ಚನ ಚಪ್ಪಾಳೆ; ಸುದೀಪ್​ ಬರೆದ ದೀರ್ಘ ಪತ್ರದಲ್ಲಿ ಏನೇನಿದೆ?
Image
ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು

ಇದನ್ನೂ ಓದಿ: ‘ಕೆಜಿಎಫ್​ 2’, ಉಪೇಂದ್ರ ಮತ್ತು ಸ್ಯಾಂಡಲ್​ವುಡ್​ ಬಗ್ಗೆ ರಾಮ್​ ಗೋಪಾಲ್​ ವರ್ಮಾ ಹೇಳೋದು ಏನು?

‘ಪಿವಿಆರ್​ ಜೊತೆ ವಿಕ್ರಾಂತ್​ ರೋಣ ಸಿನಿಮಾ ಕೈ ಜೋಡಿಸಿರುವ ಸುದ್ದಿಯನ್ನು ಕೇಳಿ ಖುಷಿ ಆಯಿತು. ಈ ಚಿತ್ರದ ಕೆಲವು ದೃಶ್ಯಗಳನ್ನು ನಾನು ನೋಡಿದ್ದೇನೆ. ಇದು ಕನ್ನಡದಿಂದ ಮತ್ತೊಂದು ದೊಡ್ಡ ಸಿನಿಮಾ ಆಗಿ ಹೊರಹೊಮ್ಮಲಿದೆ. ಬ್ಲಾಕ್​ ಬಸ್ಟರ್​ ಸಿನಿಮಾ ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ‘ವಿಕ್ರಾಂತ್ ರೋಣ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ’ ಎಂದು ರಾಮ್​ ಗೋಪಾಲ್​ ವರ್ಮಾ ಟ್ವೀಟ್​ ಮಾಡಿದ್ದಾರೆ. ಈ ಮೂಲಕ ‘ವಿಕ್ರಾಂತ್​ ರೋಣ’ ಚಿತ್ರ ಖಂಡಿತಾ ಸೂಪರ್ ಹಿಟ್​ ಆಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

ಏಪ್ರಿಲ್​ 24ರಂದು ರಾಮ್​ ಗೋಪಾಲ್​ ವರ್ಮಾ ಅವರು ‘ವಿಕ್ರಾಂತ್​ ರೋಣ’ ಚಿತ್ರದ ಟೀಸರ್​ ಶೇರ್​ ಮಾಡಿಕೊಂಡಿದ್ದರು. ಆಗ ಕೂಡ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು. ‘ವಿಕ್ರಾಂತ್​ ರೋಣ’ ಚಿತ್ರದ ಕೆಲವು 3ಡಿ ದೃಶ್ಯಗಳನ್ನು ನೋಡುವ ಅವಕಾಶ ಸಿಕ್ಕಿತು. ಇದು ನೆಕ್ಸ್ಟ್​ ಲೆವೆಲ್​ ಆಗಿದೆ, ಅತ್ಯದ್ಭುತವಾಗಿದೆ. ಜುಲೈ 28ರಂದು ಪೂರ್ತಿ ಸಿನಿಮಾ ನೋಡಲು ಕಾತರ ಮೂಡಿದೆ’ ಎಂದು ರಾಮ್​ ಗೋಪಾಲ್​ ವರ್ಮಾ ಅವರು ಟ್ವೀಟ್​ ಮಾಡಿದ್ದರು.

ವಿದೇಶದಲ್ಲಿ ವಿತರಕರು ‘ವಿಕ್ರಾಂತ್​ ರೋಣ’ ಚಿತ್ರದ ಹಕ್ಕುಗಳನ್ನು ಖರೀದಿಸುವಲ್ಲಿ ಉತ್ಸುಕತೆ ತೋರಿಸಿದ್ದಾರೆ. ಅದರ ಪರಿಣಾಮವಾಗಿ ರಿಲೀಸ್​ಗೂ ಮೊದಲೇ ಈ ಸಿನಿಮಾ ಬರೋಬ್ಬರಿ 10 ಕೋಟಿ ರೂ. ಡೀಲ್​ ನಡೆಸಿದೆ ಎಂಬ ಮಾಹಿತಿ ಕೇಳಿಬಂದಿದೆ. ‘ಒನ್​ ಟ್ವೆಂಟಿ 8 ಮೀಡಿಯಾ’ ಸಂಸ್ಥೆಯು ‘ವಿಕ್ರಾಂತ್​ ರೋಣ’ ಸಿನಿಮಾದ ವಿತರಣೆ ಹಕ್ಕುಗಳನ್ನು ಖರೀದಿಸಿದೆ. ಮೂಲಗಳ ಪ್ರಕಾರ 1.3 ಮಿಲಿಯನ್​ ಡಾಲರ್​, ಅಂದರೆ 10 ಕೋಟಿ ರೂಪಾಯಿಗೆ ಮಾರಾಟ ಆಗಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇಷ್ಟು ದೊಡ್ಡ ಮೊತ್ತಕ್ಕೆ ವಿದೇಶದಲ್ಲಿ ಸಿನಿಮಾ ವಿತರಣೆಯ ಹಕ್ಕು ಮಾರಾಟ ಆಗಿರುವುದು ಇದೇ ಮೊದಲು ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ