AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತದಾನ ಮುಗಿದ ಬೆನ್ನಲ್ಲೇ ಸಿನಿಮಾ ಅಬ್ಬರ ಶುರು; ಈ ವಾರ ಯಾವೆಲ್ಲ ಸಿನಿಮಾ ರಿಲೀಸ್?

ರಿಷಿ ಅವರು ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರ ಸಿನಿಮಾಗಳಲ್ಲಿ ಕಾಮಿಡಿ ಹೆಚ್ಚಿರುತ್ತದೆ. ಈಗ ಅವರು ‘ರಾಮನ ಅವತಾರ’ ಸಿನಿಮಾದಲ್ಲಿ ನಟಿಸಿದ್ದು, ಮೇ 10ರಂದು ರಿಲೀಸ್ ಆಗಲಿದೆ. ಅವರಿಗೆ ಜೊತೆಯಾಗಿ ಪ್ರಣಿತಾ ಸುಭಾಷ್ ನಟಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಮತದಾನ ಮುಗಿದ ಬೆನ್ನಲ್ಲೇ ಸಿನಿಮಾ ಅಬ್ಬರ ಶುರು; ಈ ವಾರ ಯಾವೆಲ್ಲ ಸಿನಿಮಾ ರಿಲೀಸ್?
ರಿಶಿ-ಗ್ರೇ ಗೇಮ್ಸ್
ರಾಜೇಶ್ ದುಗ್ಗುಮನೆ
|

Updated on: May 09, 2024 | 7:32 AM

Share

ಎಲೆಕ್ಷನ್ ಅಬ್ಬರದಿಂದಾಗಿ ಇಷ್ಟು ವಾರಗಳ ಕಾಲ ಕನ್ನಡದಲ್ಲಿ ಅಷ್ಟಾಗಿ ಸಿನಿಮಾಗಳು ರಿಲೀಸ್ ಆಗಿರಲಿಲ್ಲ. ಈಗ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Loksabha Election) ಪೂರ್ಣಗೊಂಡಿದೆ. ಹೀಗಾಗಿ, ಫಲಿತಾಂಶದ (ಜೂನ್ 4) ದಿನದವರೆಗೆ ಕರ್ನಾಟಕದಲ್ಲಿ ಯಾವುದೇ ರಾಜಕೀಯ ಅಬ್ಬರ ಇರುವುದಿಲ್ಲ. ಹೀಗಾಗಿ ಈ ವಾರ (ಮೇ 10) ಕನ್ನಡದಲ್ಲಿ ಕೆಲವು ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ವಾರ ಕನ್ನಡದಲ್ಲಿ ರಿಲೀಸ್ ಆಗಲಿರೋ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ರಾಮನ ಅವತಾರ

ರಿಷಿ ಅವರು ಕನ್ನಡದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಅವರ ಸಿನಿಮಾಗಳಲ್ಲಿ ಕಾಮಿಡಿ ಹೆಚ್ಚಿರುತ್ತದೆ. ಈಗ ಅವರು ‘ರಾಮನ ಅವತಾರ’ ಸಿನಿಮಾದಲ್ಲಿ ನಟಿಸಿದ್ದು, ಮೇ 10ರಂದು ರಿಲೀಸ್ ಆಗಲಿದೆ. ಅವರಿಗೆ ಜೊತೆಯಾಗಿ ಪ್ರಣಿತಾ ಸುಭಾಷ್ ನಟಿಸುತ್ತಿದ್ದಾರೆ. ಅರುಣ್ ಸಾಗರ್, ಶುಬ್ರಾ ಅಯ್ಯಪ್ಪ, ಅನಿರುದ್ಧ್ ಆಚಾರ್ಯ ನಟಿಸಿದ್ದಾರೆ. ವಿಕಾಸ್ ಪಂಪಾಪತಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪಕ್ಕಾ ಹಾಸ್ಯ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ.

ಗ್ರೇ ಗೇಮ್ಸ್

ವಿಜಯ್ ರಾಘವೇಂದ್ರ ನಟನೆಯ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್ ರಿಲೀಸ್ ಆಗುತ್ತಿವೆ. ಅವರ ನಟನೆಯ ‘ಗ್ರೇ ಗೇಮ್ಸ್’ ಸಿನಿಮಾ ಕೂಡ ಮೇ 10ರಂದು ಬಿಡುಗಡೆ ಆಗುತ್ತಿದೆ. ಶ್ರುತಿ ಪ್ರಕಾಶ್, ಭಾವನಾ ರಾವ್, ಜೈ ಗೋಪಿನಾಥ್, ಇಶಿತಾ ಸಿಂಗ್, ಅರ್ಪಣಾ, ರವಿ ಭಟ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಗಂಗಾಧರ್ ಸಾಲಿಮಠ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಆನಂದ್ ಮುಗದ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಇದನ್ನೂ ಓದಿ: ಕೇವಲ 99 ರೂಪಾಯಿಗೆ ‘ರಾಮನ ಅವತಾರ’ ಸಿನಿಮಾ ನೋಡುವ ಆಫರ್​

ಕಳೆದ ವಾರದ ಸಿನಿಮಾ

ಕಳೆದ ವಾರ ರಿಲೀಸ್ ಆದ ‘ಕಾಂಗರೂ’ ಸಿನಿಮಾ ಕೂಡ ಥಿಯೇಟರ್​ನಲ್ಲಿದೆ. ಆದಿತ್ಯ, ರಂಜನಿ ರಾಘವನ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರ ಕೂಡ ಥಿಯೇಟರ್​ನಲ್ಲಿ ಸ್ಪರ್ಧೆಯಲ್ಲಿದೆ. ತೆಲುಗಿನಲ್ಲಿ ‘ಆರ್​ಆರ್​ಆರ್’ ಸಿನಿಮಾ ರೀ-ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?