AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮರಸ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್; ಭಿನ್ನ ಪಾತ್ರದಲ್ಲಿ ನಟ

Ramarasa movie: ಕನ್ನಡ ನಟ ಪ್ರಜ್ವಲ್ ದೇವರಾಜ್ 'ರಾಮರಸ' ಸಿನಿಮಾದಲ್ಲಿ ಗುರುಸಿದ್ಧನ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ರಾಮನವಮಿಯಂದು ವಿನಯ್ ಗುರೂಜಿ ಅನಾವರಣಗೊಳಿಸಿದ ಅವರ ಲುಕ್ ಪೋಸ್ಟರ್ ವೈರಲ್ ಆಗಿದೆ. ಪೋಸ್ಟರ್‌ನಲ್ಲಿ ಪ್ರಜ್ವಲ್ ಉದ್ದನೆಯ ಕೂದಲು, ರುದ್ರಾಕ್ಷಿ ಮಾಲೆ ಮತ್ತು ಕೋಪಭರಿತ ನೋಟದಿಂದ ಮಿಂಚಿದ್ದಾರೆ.

‘ರಾಮರಸ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್; ಭಿನ್ನ ಪಾತ್ರದಲ್ಲಿ ನಟ
ರಾಮರಸ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on:Mar 27, 2026 | 3:07 PM

Share

ಕನ್ನಡದ ನಟ ಪ್ರಜ್ವಲ್ ದೇವರಾಜ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದವರು. ಅವರು ಈಗ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಸಿನಿಮಾದ ಭಾಗ ಆಗುತ್ತಿದ್ದಾರೆ. ಸಾಕಷ್ಟು ಭಿನ್ನ ಶೈಲಿಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಪ್ರಜ್ವಲ್ ಅವರು ಗುರುಸಿದ್ಧನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಗಮನ ಸೆಳೆದಿದೆ.

ರಾಮನವಮಿ ಪ್ರಯುಕ್ತ ‘ರಾಮರಸ’ ಚಿತ್ರದಲ್ಲಿನ ಪ್ರಜ್ವಲ್ ದೇವರಾಜ್ ಲುಕ್ ಅನಾವರಣಗೊಂಡಿದೆ. ವಿನಯ್ ಗುರೂಜಿ ಅವರು ಈ ಲುಕ್ ಅನಾವರಣ ಮಾಡಿದರು. ಪೋಸ್ಟರ್​ ಅಲ್ಲಿ ಉದ್ದನೆಯ ಕೂದಲು ಬಿಟ್ಟು, ಕತ್ತಲ್ಲಿ ರುದ್ರಾಕ್ಷಿ ಮಾಲೆ ಧರಿಸಿದ್ದಾರೆ ಪ್ರಜ್ವಲ್. ಮುಖದಲ್ಲಿ ಕೋಪ ಮನೆ ಮಾಡಿದೆ. ಹಿಂಭಾಗದಲ್ಲಿ ನಾನಾ ರೀತಿಯ ಕಟ್ಟಡಗಳನ್ನು ಕಾಣಬಹುದು. ಅವರ ಪಾತ್ರದ ಪೋಸ್ಟರ್​​ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ. ಸಿನಿಮಾದಲ್ಲಿ ಈ ಪಾತ್ರ ತುಂಬಾನೇ ಪ್ರಾಮುಖ್ಯತೆ ಪಡೆಯಲಿದೆಯಂತೆ.

‘ದೈವಿಕ ಕಥೆಗೆ ಅದ್ಭುತ ಸೇರ್ಪಡೆ. ಸಿನಿಪಯಣದ ಈ ಅದ್ಧೂರಿ ಪಥದಲ್ಲಿ, ಈಗ ಪ್ರಜ್ವಲ್ ದೇವರಾಜ್ ಅವರ ಸಾಟಿಯಿಲ್ಲದ ಪ್ರತಿಭೆ ನಮಗೆ ಜೊತೆಯಾಗಿದೆ. ರಾಮರಸದ ಈ ಮಹಾನ್ ಕಥಾ ಲೋಕಕ್ಕೆ ಗುರು ಸಿದ್ಧರಿಗೆ ಆತ್ಮೀಯ ಸ್ವಾಗತ. ಇದು ಬರೀ ಸಿನಿಮಾ ಅಲ್ಲ, ಒಂದು ಅದ್ಭುತ ಅನುಭವ’ ಎಂದು ಪೋಸ್ಟರ್ ಕ್ಯಾಪ್ಶನ್ ಅಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ‘ರಾಮರಸ’ ಚಿತ್ರದಲ್ಲಿ ಮಿಂಚಲು ಬಂದ ‘ಅಧ್ಯಕ್ಷ’ ಸುಂದರಿ ಹೆಬಾ ಪಟೇಲ್

‘ರಾಮರಸ’ ಸಿನಿಮಾದಲ್ಲಿ ಮಾಟ ಮಂತ್ರದ ವಿಷಯಗಳು ಹೈಲೈಟ್ ಆಗಿವೆ. ಕಾರ್ತಿಕ್ ಮಹೇಶ್, ಪ್ರಜ್ವಲ್ ದೇವರಾಜ್ ಜೊತೆಗೆ ಶರಣ್ ಕೂಡ ನಟಿಸಿದ್ದಾರೆ. ಇನ್ನೂ ಅನೇಕ ಕಲಾವಿದರು ಸಿನಿಮಾದ ಭಾಗ ಆಗಲಿದ್ದು, ಅದನ್ನು ಗುಟ್ಟಾಗಿಯೇ ಇಡಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ರಿವೀಲ್ ಮಾಡುವ ಸಾಧ್ಯತೆ ಇದೆ.

ಎಂಬಿ ಗಿರಿರಾಜ್ ಅವರು ‘ರಾಮರಸ’ ಚಿತ್ರಕ್ಕೆ ಕಥೆ ಬರೆದು, ನಿರ್ದೇಶನ ಮಾಡಿದ್ದಾರೆ. ಗುರು ದೇಶಪಾಂಡೆ ಅವರು ಕ್ರಿಯೇಟಿವ್ ಹೆಡ್ ಆಗಿದ್ದಾರೆ. ಗುರು ದೇಶಪಾಂಡೆ ಹಾಗೂ ವಿಕ್ರಂ ಆರ್ಯ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಸುಗುಣ ಜಯಪಾಲ್ ಚಿತ್ರದ ಸಹ ನಿರ್ಮಾಪಕರು. ಈ ಸಿನಿಮಾದಲ್ಲಿ ಕಾರ್ತಿಕ್ ಮಹೇಶ್ ಪಾತ್ರ ಕೂಡ ಗಮನ ಸೆಳೆಯುವ ರೀತಿಯಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:01 pm, Fri, 27 March 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ