ಬಾಲಿವುಡ್ ‘ರಾಮಾಯಣ’ಕ್ಕೆ ಯಶ್ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ರೂಪಾಯಿ?

ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಅವರು ಹಿಂದಿಯಲ್ಲಿ ‘ರಾಮಾಯಣ’ ಮಾಡುತ್ತಿದ್ದಾರೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್ ಫೈನಲ್ ಆದರೆ, ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇನ್ನು, ರಾವಣನ ಪಾತ್ರಕ್ಕೆ ಯಶ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಬಾಲಿವುಡ್ ‘ರಾಮಾಯಣ’ಕ್ಕೆ ಯಶ್ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ರೂಪಾಯಿ?
ಯಶ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Oct 22, 2023 | 8:16 AM

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಡೆ ಸಾಕಷ್ಟು ಕುತೂಹಲಕಾರಿಯಾಗಿದೆ. ‘ಕೆಜಿಎಫ್ 2’ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ಆದಾಗ್ಯೂ ಅವರು ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ಮುಂದಿನ ಚಿತ್ರ ಯಾವುದು ಎಂಬುದರ ಚಿಕ್ಕ ಸುಳಿವನ್ನೂ ಅವರು ಬಿಟ್ಟುಕೊಡುತ್ತಿಲ್ಲ. ಈ ಬಗ್ಗೆ ಅವರ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಇದೆ. ಅವರ ಮುಂದಿನ ಚಿತ್ರಕ್ಕಾಗಿ ಕಾದು ಕೂತು ಫ್ಯಾನ್ಸ್ ಕೂಡ ಸುಸ್ತಾಗಿದ್ದಾರೆ. ಈಗ ಅವರು ಬಾಲಿವುಡ್​ ‘ರಾಮಾಯಣ’ಕ್ಕೆ ವಿಲನ್ ಆಗುತ್ತಾರೆ ಎನ್ನಲಾಗಿದೆ. ಇದಕ್ಕೆ ಅವರು ಪಡೆಯುತ್ತಿರುವ ಸಂಭಾವನೆ ವಿಚಾರ ಅನೇಕರಿಗೆ ಅಚ್ಚರಿ ಮೂಡಿಸಿದೆ.

ರಾಕಿಂಗ್ ಸ್ಟಾರ್ ಯಶ್ ಅವರು ‘ಕೆಜಿಎಫ್’ ಚಿತ್ರದಿಂದ ಜನಪ್ರಿಯತೆ ಪಡೆದರು. ಬಾಲಿವುಡ್​ ಮಂದಿಗೆ ಯಶ್ ಹೆಸರು ಪರಿಚಯ ಆಯಿತು. ‘ಕೆಜಿಎಫ್’ ಹಿಂದಿ ವರ್ಷನ್ ಥಿಯೇಟರ್​​ನಲ್ಲಿ ಗಳಿಕೆ ಮಾಡಿದ್ದು 44 ಕೋಟಿ ರೂಪಾಯಿ. ಆ ಬಳಿಕ ಅನೇಕರು ಈ ಚಿತ್ರವನ್ನು ಒಟಿಟಿಯಲ್ಲಿ ನೋಡಿ ಕಣ್ತುಂಬಿಕೊಂಡರು. ಈ ಕಾರಣದಿಂದಲೇ ‘ಕೆಜಿಎಫ್ 2’ ಸಿನಿಮಾ ಭರ್ಜರಿ ಯಶಸ್ಸು ಕಂಡಿತು. ಈ ಚಿತ್ರ ಹಿಂದಿಯಲ್ಲಿ 400+ ಕೋಟಿ ರೂಪಾಯಿ ಬಾಚಿಕೊಂಡಿದೆ. ಈಗ ಯಶ್ ಮುಂದಿನ ಸಿನಿಮಾ ಬಗ್ಗೆ ಸುದ್ದಿ ಹರಿದಾಡುತ್ತಿದೆ.

ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಅವರು ಹಿಂದಿಯಲ್ಲಿ ‘ರಾಮಾಯಣ’ ಮಾಡುತ್ತಿದ್ದಾರೆ. ರಾಮನ ಪಾತ್ರಕ್ಕೆ ರಣಬೀರ್ ಕಪೂರ್ ಫೈನಲ್ ಆದರೆ, ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಆಯ್ಕೆ ಮಾಡಿಕೊಳ್ಳಲಾಗಿದೆ. ಇನ್ನು, ರಾವಣನ ಪಾತ್ರಕ್ಕೆ ಯಶ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಚಿತ್ರಕ್ಕೆ ಯಶ್ ಪಡೆಯತ್ತಿರುವುದು 100-150 ಕೋಟಿ ರೂಪಾಯಿ ಎನ್ನಲಾಗಿದೆ. ಈ ವಿಚಾರ ಫ್ಯಾನ್ಸ್​ ಅಚ್ಚರಿಗೆ ಕಾರಣ ಆಗಿದೆ. ಯಶ್ ಸಂಭಾವನೆ ಕೇಳಿ ಅನೇಕರು ಮೂಗಿನ ಮೇಲೆ ಬೆರಳು ಇಟ್ಟಿದ್ದಾರೆ.

ಯಶ್ ಅವರು ಇಷ್ಟು ದೊಡ್ಡ ಮೊತ್ತದ ಸಂಭಾವನೆಗೆ ಬೇಡಿಕೆ ಇಡುವುದಕ್ಕೂ ಒಂದು ಕಾರಣ ಇದೆ. ರಾವಣನ ಪಾತ್ರ ಮಾಡಬೇಕು ಎಂದರೆ ಸಾಕಷ್ಟು ಸಿದ್ಧತೆ ಬೇಕು. ಅಷ್ಟೇ ಅಲ್ಲದೆ ಈ ಚಿತ್ರ ಮೂರು ಪಾರ್ಟ್ನ್​ನಲ್ಲಿ ರಿಲೀಸ್ ಆಗಲಿದ್ದು, ಹೆಚ್ಚಿನ ಕಾಲ್​ಶೀಟ್ ನೀಡಬೇಕಾಗುತ್ತದೆ. ಮತ್ತೊಂದು ಸಿನಿಮಾ ಒಪ್ಪಿಕೊಂಡರೆ ಯಶ್ ಅವರು ‘ರಾಮಾಯಣ’ ಹಾಗೂ ಬಾಲಿವುಡ್ ಚಿತ್ರವನ್ನು ಬ್ಯಾಲೆನ್ಸ್ ಮಾಡಿಕೊಂಡು ಹೋಗಬೇಕಾಗುತ್ತದೆ. ಈ ಎಲ್ಲಾ ಕಾರಣಕ್ಕೆ ಯಶ್ ಅವರು ಇಷ್ಟು ದೊಡ್ಡ ಮೊತ್ತದ ಹಣ ಚಾರ್ಜ್ ಮಾಡುತ್ತಿದ್ದಾರೆ.

ಯಶ್ ಅವರು ರಾವಣನ ಪಾತ್ರ ಮಾಡುತ್ತಿರುವ ಬಗ್ಗೆ ಅನೇಕರಿಗೆ ಅಸಮಾಧಾನ ಇದೆ. ರಾವಣ ಓರ್ವ ರಾಕ್ಷಸ. ರಾಮನ ಆರಾಧಿಸಿ, ರಾವಣನ ದ್ವೇಷಿಸುವವರು ಅನೇಕರಿದ್ದಾರೆ. ಅವರು ಈ  ಪಾತ್ರವನ್ನು ಒಪ್ಪಿಕೊಳ್ಳಬಾರದಿತ್ತು ಎಂಬುದು ಅನೇಕರ ಅಭಿಪ್ರಾಯ. ಆದರೆ, ಯಶ್ ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಂಡಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಯಶ್​ ಅಭಿಮಾನಿಗಳಿಗೆ ನೋವಾಗುವಂತೆ ಮಾತಾಡಿದ ರವಿತೇಜ; ಕ್ಷಮೆ ಕೇಳುವಂತೆ ಫ್ಯಾನ್ಸ್​ ಒತ್ತಾಯ

ಇನ್ನು, ಯಶ್ ಅವರು ‘ಕೆಜಿಎಫ್ 3’ ಸಿನಿಮಾ ಕೆಲಸಗಳನ್ನೂ ಆರಂಭಿಸಬೇಕಿದೆ. ಸದ್ಯ ಪ್ರಶಾಂತ್ ನೀಲ್ ಅವರು ‘ಸಲಾರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಈ ಸಿನಿಮಾ ರಿಲೀಸ್ ಆದ ಬಳಿಕ ಪ್ರಶಾಂತ್ ನೀಲ್ ಅವರು ಜೂನಿಯರ್ ಎನ್​ಟಿಆರ್ ಸಿನಿಮಾ ಕೈಗೆತ್ತಿಕೊಳ್ಳುತ್ತಾರೆ. ಹೀಗಾಗಿ ‘ಕೆಜಿಎಫ್ 3’ ಸಿನಿಮಾ ಮತ್ತಷ್ಟು ವಿಳಂಬ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:12 am, Sun, 22 October 23

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ