ನಟ ರಮೇಶ್ ಅರವಿಂದ್ ಹಾಗೂ ರವಿಚಂದ್ರನ್ಗೆ ಸಿಕ್ತು ಗೌರವ ಡಾಕ್ಟರೇಟ್
ಸುವರ್ಣಸೌಧ ಸಭಾಭವನದಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾನಿಲಯದ 10ನೇ ಘಟಿಕೋತ್ಸವ ಇಂದು (ಸೆಪ್ಟೆಂಬರ್ 14) ನಡೆದಿದೆ. ರಮೇಶ್ ಅರವಿಂದ್, ರವಿಚಂದ್ರನ್ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ಅವರಿಗೆ ಗೌರವ ಡಾಕ್ಟರೇಟ್ ಸಿಕ್ಕಿದೆ.
ನಟ ರಮೇಶ್ ಅರವಿಂದ್ (Ramesh Aravind) ಹಾಗೂ ವಿ. ರವಿಚಂದ್ರನ್ (Ravichandran) ಅವರು ಹಲವು ದಶಕಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ರಂಗಕ್ಕೆ ತಮ್ಮದೇ ಕೊಡುಗೆ ನೀಡುತ್ತಾ ಬರುತ್ತಿದ್ದಾರೆ. ಇಬ್ಬರೂ ನಟನೆಯ ಜತೆಗೆ ಹಲವು ಸಿನಿಮಾಗಳನ್ನು ನಿರ್ದೇಶಿಸಿ ಭೇಷ್ ಎನಿಸಿಕೊಂಡಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾನಿಲಯದ 10ನೇ ಘಟಿಕೋತ್ಸವ ಸಮಾರಂಭದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಈ ಸ್ಟಾರ್ ನಟರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.
ಸುವರ್ಣಸೌಧ ಸಭಾಭವನದಲ್ಲಿ ರಾಣಿ ಚನ್ನಮ್ಮ ವಿಶ್ವ ವಿದ್ಯಾನಿಲಯದ 10ನೇ ಘಟಿಕೋತ್ಸವ ಇಂದು (ಸೆಪ್ಟೆಂಬರ್ 14) ನಡೆದಿದೆ. ರಮೇಶ್ ಅರವಿಂದ್, ರವಿಚಂದ್ರನ್ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ಅವರಿಗೆ ಗೌರವ ಡಾಕ್ಟರೇಟ್ ಸಿಕ್ಕಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ಡಾಕ್ಟರೇಟ್ಅನ್ನು ಪ್ರದಾನ ಮಾಡಿದ್ದಾರೆ. ರಾಣಿ ಚೆನ್ನಮ್ಮ ವಿವಿ ಕುಲಪತಿ ಪ್ರೊ. ರಾಮಚಂದ್ರೆಗೌಡ ಸೇರಿ ಹಲವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಮೇಶ್ ಅರವಿಂದ್ ಅವರು ಇತ್ತೀಚೆಗಷ್ಟೇ ಹುಟ್ಟಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಬರ್ತ್ಡೇ ಪ್ರಯುಕ್ತ ‘ಶಿವಾಜಿ ಸುರತ್ಕಲ್ 2’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಚಿತ್ರದ ಮೂಲಕ ಅವರು ಮತ್ತೊಂದು ಸಸ್ಪೆನ್ಸ್ ಕಥಾ ಹಂದರ ಇರುವ ಸಿನಿಮಾವನ್ನು ಹೊತ್ತು ತರುತ್ತಿದ್ದಾರೆ. ಈ ಚಿತ್ರಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೆಲಸಗಳು ಭರದಿಂದ ಸಾಗುತ್ತಿವೆ. ಗೌರವ ಡಾಕ್ಟರೇಟ್ ಪಡೆಯುವ ಉದ್ದೇಶದಿಂದ ರಮೇಶ್ ಅರವಿಂದ್ ಅವರು ಸಿನಿಮಾ ಕೆಲಸಗಳಿಂದ ಬಿಡುವು ಮಾಡಿಕೊಂಡು ವಿಶ್ವವಿದ್ಯಾನಿಲಯಕ್ಕೆ ತೆರಳಿ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ: ‘ಶಿವಾಜಿ ಸುರತ್ಕಲ್ 2’ ತಂಡದೊಂದಿಗೆ ರಮೇಶ್ ಅರವಿಂದ್ ಬರ್ತ್ಡೇ ಆಚರಣೆ
ರವಿಚಂದ್ರನ್ ಅವರ ನಟನೆಯ ‘ರವಿ ಬೋಪಣ್ಣ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿತು. ಈ ಸಿನಿಮಾಗೆ ರವಿಚಂದ್ರನ್ ಅವರೇ ನಿರ್ದೇಶನ ಮಾಡಿದ್ದರು.