ಜೂನ್ 14ಕ್ಕೆ ‘ಶೆಫ್​ ಚಿದಂಬರ’ ಬಿಡುಗಡೆ; ಟ್ರೇಲರ್​ ಅನಾವರಣ ಮಾಡಿ ಹಾರೈಸಿದ ರಮೇಶ್​

‘ಶೆಫ್​ ಚಿದಂಬರ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ರಮೇಶ್​ ಅರವಿಂದ್​ ಅವರು ಈ ಸಿನಿಮಾದ ಟ್ರೇಲರ್​ ಬಿಡುಗಡೆ ಮಾಡಿದ್ದಾರೆ. ಅನಿರುದ್ಧ್​ ಜತ್ಕರ್​, ನಿಧಿ ಸುಬ್ಬಯ್ಯ, ರೇಚಲ್ ಡೇವಿಡ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರೂಪಾ ಡಿ.ಎನ್​. ಅವರ ನಿರ್ಮಾಣ, ಆನಂದ್​ರಾಜ್​ ಅವರ ನಿರ್ದೇಶನ ಈ ಸಿನಿಮಾಗಿದೆ. ಟ್ರೇಲರ್​ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಜೂನ್ 14ಕ್ಕೆ ‘ಶೆಫ್​ ಚಿದಂಬರ’ ಬಿಡುಗಡೆ; ಟ್ರೇಲರ್​ ಅನಾವರಣ ಮಾಡಿ ಹಾರೈಸಿದ ರಮೇಶ್​
‘ಶೆಫ್​ ಚಿದಂಬರ’ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ
Follow us
ಮದನ್​ ಕುಮಾರ್​
|

Updated on: Jun 02, 2024 | 2:48 PM

ಸೀರಿಯಲ್​ ಮತ್ತು ಸಿನಿಮಾ ಈ ಎರಡೂ ಕ್ಷೇತ್ರಗಳಲ್ಲಿ ಫೇಮಸ್​ ಆಗಿರುವ ನಟ ಅನಿರುದ್ಧ್​ ಜತ್ಕರ್ (Anirudh Jatkar) ಅವರು ಹೀರೋ ಆಗಿ ಅಭಿನಯಿಸಿರುವ ‘ಶೆಫ್​ ಚಿದಂಬರ’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ರೂಪ ಡಿ.ಎನ್. ನಿರ್ಮಾಣ ಮಾಡಿರುವ ಈ ಸಿನಿಮಾಗೆ ಆನಂದ್​ರಾಜ್ ಎಂ ಅವರು ನಿರ್ದೇಶನ ಮಾಡಿದ್ದಾರೆ. ಕನ್ನಡದ ಖ್ಯಾತ ನಟ ರಮೇಶ್ ಅರವಿಂದ್ (Ramesh Aravind) ಅವರು ಈ ಸಿನಿಮಾದ ಟ್ರೇಲರ್ ಅನಾವರಣ ಮಾಡಿದ್ದಾರೆ. ಅಲ್ಲದೇ ಅವರು ಟ್ರೇಲರ್​​ಗೆ ಮೆಚ್ಚುಗೆ ಸೂಚಿಸಿದ್ದಾರೆ. ಜೂನ್ 14ಕ್ಕೆ ‘ಶೆಫ್​ ಚಿರಂಬರ’ ಸಿನಿಮಾ (Chef Chidambara Movie) ಬಿಡುಗಡೆ ಆಗಲಿದೆ. 5 ವರ್ಷಗಳ ಬಳಿಕ ಅನಿರುದ್ದ್ ಅವರು ನಟಿಸಿರುವ ಸಿನಿಮಾ ಎಂಬ ಕಾರಣಕ್ಕೆ ಅವರ ಅಭಿಮಾನಿಗಳಿಗೆ ಈ ಸಿನಿಮಾ ವಿಶೇಷವಾಗಿದೆ.

ಟ್ರೇಲರ್​ ಬಿಡುಗಡೆ ವೇಳೆ ರಮೇಶ್​ ಅರವಿಂದ್​ ಅವರು ವಿಷ್ಣುವರ್ಧನ್ ಜೊತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಂಡರು. ಬಳಿಕ ಅನಿರುದ್ಧ್​ ಬಗ್ಗೆ ಮಾತನಾಡಿದರು. ‘ನನ್ನ ನಿರ್ದೇಶನದ ‘ರಾಮ ಶ್ಯಾಮ ಭಾಮ’ ಸೇರಿದಂತೆ 2 ಸಿನಿಮಾಗಳಲ್ಲಿ ಅನಿರುದ್ಧ್​ ಅಭಿನಯಿಸಿದ್ದಾರೆ. ಅವರು ಪ್ರತಿಭಾವಂತ ಕಲಾವಿದ. ಈ ಸಿನಿಮಾ ಟ್ರೇಲರ್ ಕೂಡ ಚೆನ್ನಾಗಿದೆ. ಡಾರ್ಕ್ ಕಾಮಿಡಿ ಶೈಲಿಯ ಈ ಸಿನಿಮಾದ ಟ್ರೇಲರ್ ಕುತೂಹಲ ಮೂಡಿಸಿದೆ. ಸಿನಿಮಾ ನೋಡುವ ಕಾತುರವನ್ನು ಹೆಚ್ಚು ಮಾಡಿದೆ‌. ಚಿತ್ರತಂಡದವರ ಶ್ರಮ ಕಾಣುತ್ತಿದೆ. ಸಿನಿಮಾ ಯಶಸ್ವಿಯಾಗಲಿ’ ಎಂದು ರಮೇಶ್​ ಅರವಿಂದ್​ ಹಾರೈಸಿದರು.

ನಟ ಅನಿರುದ್ಧ್​ ಮಾತನಾಡಿ, ‘ನಿರ್ಮಾಪಕಿ ರೂಪಾ ಅವರ ಪತಿ ಸರ್ವೋತಮ್ ಮತ್ತು ನಾನು ಬಹಳ ವರ್ಷಗಳಿಂದ ಗೆಳೆಯರು. ಅವರು‌ ಸಿನಿಮಾ ಮಾಡೋಣ ಎಂದಾಗ ಅನೇಕ ಕಥೆಗಳನ್ನು ಕೇಳಿದ್ದೆ. ಆನಂದ್​ರಾಜ್ ಅವರು ಹೇಳಿದ ಈ ಕಥೆ ಇಷ್ಟ ಆಯಿತು. ನಂತರ ವಿಷ್ಣುವರ್ಧನ್ ಸ್ಮಾರಕದ ಬಳಿ ಸ್ಕ್ರಿಪ್ಟ್ ಪೂಜೆ ಮಾಡಿದೆವು. ಮುಹೂರ್ತದ ದಿನ ಭಾರತಿ ವಿಷ್ಣುವರ್ಧನ್ ಅವರು ಕ್ಲ್ಯಾಪ್ ಮಾಡಿ ಚಾಲನೆ ನೀಡಿದ್ದರು. ಕಿಚ್ಚ ಸುದೀಪ್ ಅವರು ಟೀಸರ್​ಗೆ ಧ್ವನಿ ನೀಡಿ ಪ್ರೋತ್ಸಾಹಿಸಿದರು. ಈಗ ರಮೇಶ್ ಅರವಿಂದ್ ಅವರು ಟ್ರೇಲರ್ ಅನಾವರಣ ಮಾಡಿ ಕೊಟ್ಟಿದ್ದಾರೆ. ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ‌’ ಎಂದರು.

‘ಶೆಫ್​ ಚಿದಂಬರ’ ಸಿನಿಮಾದ ಚಿತ್ರೀಕರಣವು ಚಿತ್ರತಂಡದ ಸಹಕಾರದಿಂದ ಕೇವಲ 29 ದಿನಗಳಲ್ಲಿ ಮುಕ್ತಾಯವಾಗಿದೆ ಎಂದು ನಿರ್ದೇಶಕ ಆನಂದ್​ರಾಜ್​ ಹೇಳಿದರು. ‘ ಈ ಸಿನಿಮಾದಲ್ಲಿ 3 ಹಾಡುಗಳಿವೆ. ಒಂದು ಹಾಡಿಗೆ ಅನಿರುದ್ಧ್​ ಅವರೇ ಧ್ವನಿ ನೀಡಿದ್ದಾರೆ. ರೂಪಾ ಡಿ.ಎನ್. ಅವರು ಯಾವುದೇ ಕೊರತೆ ಬಾರದ ರೀತಿಯಲ್ಲಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಡಾರ್ಕ್ ಕಾಮಿಡಿ ಇರುವ ಈ ಸಿನಿಮಾ ಎಲ್ಲರಿಗೂ ಪ್ರಿಯವಾಗಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ಕೇಸ್ ಬೆನ್ನಲ್ಲೇ ರಮೇಶ್ ಅರವಿಂದ್​​ಗೆ ಪೆನ್​ಡ್ರೈವ್ ಕೊಟ್ಟ ಫ್ಯಾನ್; ನಟನ ರಿಯಾಕ್ಷನ್ ನೋಡಿ

ಈ ಸಿನಿಮಾದಲ್ಲಿ ನಾಯಕಿಯರಾಗಿ ನಿಧಿ ಸುಬ್ಬಯ್ಯ ಮತ್ತು ರೆಚೆಲ್ ಡೇವಿಡ್ ನಟಿಸಿದ್ದಾರೆ. ಶಿವಮಣಿ ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ರಿತ್ವಿಕ್ ಮುರಳಿಧರ್ ಅವರ ಸಂಗೀತ, ಉದಯ್ ಲೀಲ ಅವರ ಛಾಯಾಗ್ರಹಣ, ವಿಜೇತ್ ಚಂದ್ರ ಅವರ ಸಂಕಲನ, ಗಣೇಶ್ ಪರಶುರಾಮ್ ಅವರ ಸಂಭಾಷಣೆ ಈ ಸಿನಿಮಾಗೆ ಇದೆ. ಟ್ರೇಲರ್ ಬಿಡುಗಡೆ ಮಾಡಿದ ರಮೇಶ್ ಅರವಿಂದ್ ಅವರಿಗೆ ಮತ್ತು ಇಡೀ ಚಿತ್ರತಂಡಕ್ಕೆ ನಿರ್ಮಾಪಕಿ ರೂಪಾ ಡಿ.ಎನ್. ಅವರು ಧನ್ಯವಾದ ಅರ್ಪಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ