AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ದೇವರಾಜ್ ‘ಕರಾವಳಿ’ಯಲ್ಲಿ ದೊಡ್ಡವರಾದ ರಮೇಶ್ ಇಂದಿರಾ

Ramesh Indira: ‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ವಿಲನ್ ಪಾತ್ರದ ಮೂಲಕ ಪ್ರೇಕ್ಷಕರಿಗೆ ಹೆಚ್ಚು ಹತ್ತಿರವಾಗಿದ್ದ ರಮೇಶ್ ಇಂದಿರಾ ಈಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾದಲ್ಲಿ ಖಡಕ್ ಪಾತ್ರದಲ್ಲಿ ನಟಿಸಿದ್ದಾರೆ. ಇಲ್ಲಿದೆ ನೋಡಿ ಅವರ ಪೋಸ್ಟರ್.

ಪ್ರಜ್ವಲ್ ದೇವರಾಜ್ ‘ಕರಾವಳಿ’ಯಲ್ಲಿ ದೊಡ್ಡವರಾದ ರಮೇಶ್ ಇಂದಿರಾ
ಮಂಜುನಾಥ ಸಿ.
|

Updated on: Nov 01, 2024 | 11:51 AM

Share

ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾ ಚಿತ್ರೀಕರಣ ಪ್ರಾರಂಭ ಆದಾಗಿನಿಂದಲೂ ಸಾಕಷ್ಟು ಕುತೂಹಲ ಕೆರಳಿಸಿದೆ. ತಮ್ಮ ಭಿನ್ನ ಟೀಸರ್, ಪೋಸ್ಟರ್​ಗಳ ಮೂಲಕ ಕುತೂಹಲ ಮೂಡಿಸಿದೆ. ಪ್ರಜ್ವಲ್ ದೇವರಾಜ್ ನಟಿಸಿ ಗುರುದತ್ ಗಾಣಿಗ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಕರಾವಳಿ ಗ್ರಾಮ ಭಾಗದ ಕತೆ ಹೊಂದಿದ್ದು, ಕೆಲ ದಶಗಳ ಹಿಂದೆ ನಡೆಯುವ ಕತೆ ಒಳಗೊಂಡಿದೆ. ಸಿನಿಮಾದಲ್ಲಿ ಖಡಕ್ ವಿಲನ್​ಗಳ ಸಾಲೇ ಇದ್ದು, ಇದೀಗ ಅವರಲ್ಲಿ ಒಬ್ಬರ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

‘ಸಪ್ತ ಸಾಗರದಾಚೆ ಎಲ್ಲೊ’ ಸೈಡ್ ಎ ಮತ್ತು ಬಿ ಸಿನಿಮಾದಲ್ಲಿ ನಾಯಕ ನಾಯಕಿಯರಷ್ಟೆ ಗಮನ ಸೆಳೆದಿದ್ದು ಸಿನಿಮಾದ ವಿಲನ್ ಪಾತ್ರ. ‘ಲವ್ ಯು ಮನು’ ಎನ್ನುತ್ತಾ ಪ್ರೇಕ್ಷಕರಿಗೆ ಹತ್ತಿರವಾಗಿದ್ದ ರಮೇಶ್ ಇಂದಿರಾ ಈಗ ‘ಕರಾವಳಿ’ ಸಿನಿಮಾನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದಲ್ಲಿ ಬೇರೆ ಪಾತ್ರಗಳು ಅವರನ್ನು ಕರೆಯುವುದು ‘ದೊಡ್ಡವರು’ ಎಂದು. ಇದೀಗ ದೀಪಾವಳಿ ಹಬ್ಬಕ್ಕೆ ಅವರ ಖಡಕ್ ಆಗಿರುವ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ.

ರಮೇಶ್ ಇಂದಿರಾ, ಉದ್ದನೆಯ ಹಳೆ ಮರ್ಸಿಡೀಸ್ ಬೆಂಜ್ ಕಾರಿನ ಮೇಲೆ ಪಂಚೆ ತೊಟ್ಟು ಬರಿಮೈಯಲ್ಲಿ, ಹೆಗಲಿಗೆ ಟವೆಲ್ ಒಂದನ್ನು ಹಾಕಿಕೊಂಡು ಕೂತು, ಕೈಯಲ್ಲಿ ಉದ್ದನೆಯ ಸಿಂಗಲ್ ಶಾಟ್ ಬಂದೂಕು ಹಿಡಿದಿರುವ ಪೋಸ್ಟರ್ ಸಖತ್ ಗಮನ ಸೆಳೆಯುತ್ತಿದೆ. ‘ಕರಾವಳಿ’ ಸಿನಿಮಾನಲ್ಲಿ ಕತ್ತು, ಮಚ್ಚುಗಳೇ ಅಬ್ಬರಿಸಲಿವೆ ಎಂದು ಈ ವರೆಗೆ ಬಿಡುಗಡೆ ಆದ ಪೋಸ್ಟರ್​​ಗಳಿಂದ ಗೊತ್ತಾಗಿತ್ತು, ಆದರೆ ರಮೇಶ್ ಇಂದಿರಾ ಆಧುನಿಕ ಬಂದೂಕು ಹಿಡಿದು ಕಾಣಿಸಿಕೊಂಡಿರುವುದು ನೋಡಿದರೆ ಸಿನಿಮಾದ ಕತೆ ನಡೆಯುವ ಕಾಲಮಾನದ ಬಗ್ಗೆ ಅನುಮಾನ ಮೂಡುತ್ತಿದೆ.

ಇದನ್ನೂ ಓದಿ:ಪ್ರಜ್ವಲ್ ದೇವರಾಜ್ ಜನ್ಮದಿನಕ್ಕೆ ‘ರಾಕ್ಷಸ’, ‘ಕರಾವಳಿ’ ಲುಕ್ ಬಿಡುಗಡೆ; ಒಂದಕ್ಕಿಂತ ಒಂದು ಭಿನ್ನ

‘ಕರಾವಳಿ’ ಸಿನಿಮಾದಲ್ಲಿ ರಮೇಶ್ ಇಂದಿರಾ ಮಾತ್ರವೇ ಅಲ್ಲದೆ ಮಿತ್ರ ಸಹ ಬಹಳ ಭಿನ್ನವಾದ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕಾಗಿ ಮಿತ್ರ ಭಿನ್ನ ಹೇರ್​ಸ್ಟೈಲ್ ಮತ್ತು ಲುಕ್ ಮಾಡಿಸಿಕೊಂಡಿದ್ದಾರೆ. ಇನ್ನು ಇದೇ ಸಿನಿಮಾದಲ್ಲಿ ಅಚ್ಯುತ್ ಕುಮಾರ್ ಸಹ ಇರಲಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಹಲವು ಪ್ರತಿಭಾವಂತ ನಟರು, ತಂತ್ರಜ್ಞರು ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಸಿನಿಮಾದ ಚಿತ್ರೀಕರಣ ಇನ್ನೇನು ಮುಗಿಯಲಿದ್ದು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ