ನಟ ದರ್ಶನ್ ಅಭಿಮಾನಿಗಳ ಕಮೆಂಟ್ ನೋಡಿ ರಮ್ಯಾ ಖಡಕ್ ಪ್ರತಿಕ್ರಿಯೆ
ಇತ್ತೀಚೆಗೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅವರ ಜಾಮೀನು ವಿಚಾರಣೆ ನಡೆದಿತ್ತು. ಸುಪ್ರೀಂ ಕೋರ್ಟ್ನಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗವ ಭರವಸೆ ಇದೆ ಎಂದು ರಮ್ಯಾ ಟ್ವೀಟ್ ಮಾಡಿದ್ದರು. ಆ ಬಳಿಕ ದರ್ಶನ್ ಫ್ಯಾನ್ಸ್ ಮಾಡಿದ ಕಮೆಂಟ್ಗಳನ್ನು ನೋಡಿ ರಮ್ಯಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಟಿ ರಮ್ಯಾ (Ramya Divya Spandana) ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ವಿಷಯಗಳ ಬಗ್ಗೆ ಅವರು ತಮ್ಮ ಧ್ವನಿ ಎತ್ತುತ್ತಾರೆ. ಬರೀ ಸಿನಿಮಾಗಳ ವಿಷಯ ಮಾತ್ರವಲ್ಲದೇ ಅನೇಕ ಸಾಮಾಜಿಕ ಸಂಗತಿಗಳ ಬಗ್ಗೆಯೂ ಮಾತನಾಡುತ್ತಾರೆ. ಅಭಿಮಾನಿಗಳೇ ಹೇಳುವಂತೆ ಅವರು ನ್ಯಾಯದ ಪರ ನಿಲ್ಲುತ್ತಾರೆ. ಇತ್ತೀಚೆಗೆ ದರ್ಶನ್ (Darshan) ಕೇಸ್ ಬಗ್ಗೆ ರಮ್ಯಾ ಅವರು ಪೋಸ್ಟ್ ಮಾಡಿದ್ದರು. ಆ ಬಳಿಕ ದರ್ಶನ್ ಅಭಿಮಾನಿಗಳು (Darshan Fans) ಕಮೆಂಟ್ ಮಾಡಿದ ರೀತಿಗೆ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
‘ಎಲ್ಲ ಡಿ ಬಾಸ್ ಅಭಿಮಾನಿಗಳಿಗಳೂ ನನ್ನ ಇನ್ಸ್ಟಾಗ್ರಾಮ್ ಖಾತೆಗೆ ಸ್ವಾಗತ. ರೇಣುಕಾಸ್ವಾಮಿ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಎಂಬುದಕ್ಕೆ ನಿಮ್ಮ ಕಮೆಂಟ್ಗಳೇ ಸಾಕ್ಷಿ’ ಎಂದು ರಮ್ಯಾ ಅವರು ಬರೆದುಕೊಂಡಿದ್ದಾರೆ. ದರ್ಶನ್ ಅಭಿಮಾನಿಗಳ ವರ್ತನೆ ಬಗ್ಗೆ ಈ ಮೊದಲು ನಟರಾದ ಪ್ರಥಮ್, ಜಗ್ಗೇಶ್ ಮುಂತಾದವರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.
ದರ್ಶನ್ ಕೇಸ್ ಬಗ್ಗೆ ರಮ್ಯಾ ಹೇಳಿದ್ದೇನು? ‘ಭಾರತದ ಜನಸಾಮಾನ್ಯರಿಗೆ ಸುಪ್ರೀಂ ಕೋರ್ಟ್ ಒಂದು ಭರವಸೆಯ ಬೆಳಕಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ’ ಎಂದು ರಮ್ಯಾ ಅವರು ಇನ್ಸ್ಟಾಗ್ರಾಮ್ ಸ್ಟೋರಿ ಮತ್ತು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಬರೆದುಕೊಂಡಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟ್ನಲ್ಲಿ ದರ್ಶನ್ ಜಾಮೀನು ವಿಚಾರಣೆ ನಡೆದ ಬಳಿಕ ರಮ್ಯಾ ಈ ರೀತಿ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಕಮೆಂಟ್ ಆಯ್ಕೆಯನ್ನು ಅವರು ಆಫ್ ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೇಸ್ ಮಾತ್ರವಲ್ಲದೇ ಧರ್ಮಸ್ಥಳದ ವಿವಾದದ ಬಗ್ಗೆಯೂ ರಮ್ಯಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಧರ್ಮಸ್ಥಳದಲ್ಲಿ ಆಗಿರುವ ಪ್ರಕರಣಗಳ ಬಗ್ಗೆ ನ್ಯಾಯಯುತವಾದ ತನಿಖೆ ಆಗುತ್ತದೆ ಎಂಬ ಭರವಸೆ ಇದೆ. ನಮಗೆ ಸತ್ಯ ತಿಳಿಯಬೇಕು’ ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ: ದರ್ಶನ್ಗೆ ಜಾಮೀನು ಕೊಟ್ಟ ಹೈಕೋರ್ಟ್ ಬಗ್ಗೆ ನೇರವಾಗಿ ಅಸಮಾಧಾನ ಹೊರಹಾಕಿದ ಸುಪ್ರೀಂ
ರಮ್ಯಾ ಅವರ ಸಾಮಾಜಿಕ ಕಳಕಳಿ ಕಂಡು ಅವರ ಅಭಿಮಾನಿಗಳು ಭೇಷ್ ಎಂದಿದ್ದಾರೆ. ‘ಕೇಸ್ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರ. ತೆರೆಯ ಮೇಲಷ್ಟೇ ಅಲ್ಲ. ನಿಜ ಜೀವನದಲ್ಲೂ ರಮ್ಯಾ ಹೀರೋಯಿನ್’ ಎಂದು ಅವರ ಅಭಿಮಾನಿಗಳು ಪೋಸ್ಟ್ ಮಾಡಿದ್ದಾರೆ. ಇದನ್ನು ಕೂಡ ರಮ್ಯಾ ಅವರು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.








