AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಂದೇಶ ಕೇಸ್: ಮುಚ್ಚಿದ ಕೊಠಡಿಯಲ್ಲಿ ವಿಚಾರಣೆಗೆ ಹಾಜರಾದ ರಮ್ಯಾ

ಇನ್​ಸ್ಟಾಗ್ರಾಮ್ ಮೂಲಕ ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದ ವಿಚಾರಣೆ ಆರಂಭ ಆಗಿದೆ. ರಮ್ಯಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಇದನ್ನು ಸೂಕ್ಷ್ಮ ಪ್ರಕರಣ ಎಂದು ಪರಿಗಣಿಸಿ ಮುಚ್ಚಿದ ಕೊಠಡಿಯಲ್ಲಿ ವಿಚಾರಣೆ ಮಾಡಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಅಶ್ಲೀಲ ಸಂದೇಶ ಕೇಸ್: ಮುಚ್ಚಿದ ಕೊಠಡಿಯಲ್ಲಿ ವಿಚಾರಣೆಗೆ ಹಾಜರಾದ ರಮ್ಯಾ
Ramya Divya Spandana
Ramesha M
| Edited By: |

Updated on: Mar 10, 2026 | 3:56 PM

Share

ಖ್ಯಾತ ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಸಂದೇಶ ಕಳಿಸಿದ 11 ಆರೋಪಿಗಳ ವಿರುದ್ಧ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಸೈಬರ್ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿರುವ ಹಿನ್ನೆಲೆಯಲ್ಲಿ ರಮ್ಯಾ ಅವರು ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ಮುಂದೆ ಹಾಜರಾಗಿದ್ದಾರೆ. ಇಂದು (ಮಾರ್ಚ್ 10) ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣೆಗೆ ಹಾಜರಾದ ರಮ್ಯಾ (Ramya) ಅವರು ಫಿರ್ಯಾದಿ ಹೇಳಿಕೆ ದಾಖಲಿಸಿದ್ದಾರೆ.

ವೃತ್ತಿ ಜೀವನ ಮತ್ತು ರಾಜಕೀಯ ಜೀವನದ ಬಗ್ಗೆ ರಮ್ಯಾ ಅವರು ಮಾಹಿತಿ ನೀಡಿದ್ದಾರೆ. ಇನ್‌ಸ್ಟಾಗ್ರಾಂ ಅಕೌಂಟ್ ಬಗ್ಗೆಯೂ ಕೋರ್ಟ್​ನಲ್ಲಿ ಹೇಳಿಕೆ ದಾಖಲಿಸಿದ್ದಾರೆ. ಆರೋಪಿಗಳು ಇನ್‌ಸ್ಟಾಗ್ರಾಂ ಮೂಲಕ ಕಳುಹಿಸಿದ್ದ ಸಂದೇಶದ ಬಗ್ಗೆಯೂ ರಮ್ಯಾ ಮಾಹಿತಿ ನೀಡಿದ್ದಾರೆ. ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಅನಿಸಿಕೆ ಹಂಚಿಕೊಂಡ ಬಳಿಕ ಕೆಲವರಿಂದ ಅಶ್ಲೀಲ ಸಂದೇಶ ಬಂದಿತ್ತು.

ಇದನ್ನು ಸೂಕ್ಷ್ಮ ಪ್ರಕರಣವೆಂದು ಪರಿಗಣಿಸಲಾಗಿದೆ. ಹಾಗಾಗಿ ಮುಚ್ಚಿದ ಕೊಠಡಿಯಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಜಡ್ಜ್ ಈ. ರಾಜೀವ ಗೌಡ ಅವರು ಇನ್‌ಕ್ಯಾಮರಾ ಪ್ರೊಸೀಡಿಂಗ್ಸ್ ನಡೆಸಿದ್ದಾರೆ. ಇನ್​ಸ್ಟಾಗ್ರಾಮ್​​ನಲ್ಲಿ ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡಿದ್ದ ಹಲವರು ರಮ್ಯಾಗೆ ಅಸಭ್ಯ ಕಮೆಂಟ್ ಮತ್ತು ಸಂದೇಶ ಕಳಿಸಿದ್ದರು.

ರಮ್ಯಾ ದಿವ್ಯ ಸ್ಪಂದನಾ ಅವರು ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ತುಂಬಾ ಆಕ್ಟೀವ್ ಆಗಿದ್ದಾರೆ. ಆದರೆ ಅವರನ್ನು ಕೆಲವರು ಟಾರ್ಗೆಟ್ ಮಾಡಿದ್ದರು. ಅಶ್ಲೀಲ ಕಮೆಂಟ್ ಮತ್ತು ಅಸಭ್ಯ ಮೆಸೇಜ್​ಗಳ ಮೂಲಕ ಕಿರುಕುಳ ನೀಡಿದ್ದರು. ಅಂಥವರಿಗೆ ಕಾನೂನಿನ ಮೂಲಕ ಪಾಠ ಕಲಿಸಲು ರಮ್ಯಾ ಮುಂದಾದರು. ಮುಲಾಜಿಲ್ಲದೇ ದೂರು ದಾಖಲಿಸಿದರು.

ಇದನ್ನೂ ಓದಿ: ರಮ್ಯಾ, ವಿಜಯಲಕ್ಷ್ಮಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 50 ಸಾಮಾಜಿಕ ಜಾಲತಾಣ ಅಕೌಂಟ್​​ಗಳನ್ನು ಬಂದ್ ಮಾಡಿಸಿದ್ದರು. ಬಂಧನಕ್ಕೆ ಹೆದರಿ 20ಕ್ಕೂ ಹೆಚ್ಚು ಆರೋಪಿಗಳು ಪರಾರಿ ಆಗಿದ್ದರು. ಬಂಧಿತ ಆರೋಪಿಗಳು ಒಂದು ಲಕ್ಷ ರೂಪಾಯಿ ಬಾಂಡ್ ಹಾಗೂ ಇತರೆ ಭದ್ರತೆಗಳನ್ನು ಒದಗಿಸಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us