AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya Divya Spandana: ರಮ್ಯಾ ಜನ್ಮದಿನಕ್ಕೆ ಸಿಗಲಿದೆ ಸ್ಪೆಷಲ್ ಗಿಫ್ಟ್? ಅಭಿಮಾನಿಗಳಲ್ಲಿ ಕಾತರ

ಇಂದು ರಮ್ಯಾ ಜನ್ಮದಿನ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ವಿಶ್ ಮಾಡುತ್ತಿದ್ದಾರೆ. ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ‘ಉತ್ತರಕಾಂಡ’ ಸಿನಿಮಾದಿಂದ ಅವರ ಪೋಸ್ಟರ್ ಅಥವಾ ಟೀಸರ್ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

Ramya Divya Spandana: ರಮ್ಯಾ ಜನ್ಮದಿನಕ್ಕೆ ಸಿಗಲಿದೆ ಸ್ಪೆಷಲ್ ಗಿಫ್ಟ್? ಅಭಿಮಾನಿಗಳಲ್ಲಿ ಕಾತರ
ರಮ್ಯಾ
TV9 Web
| Edited By: |

Updated on:Nov 29, 2023 | 10:08 AM

Share

ನಟಿ ರಮ್ಯಾ (Ramya Divya Spandana) ಅವರು ನಾಯಕಿ ಆಗಿ ಇತ್ತೀಚೆಗೆ ತೆರೆಮೇಲೆ ಬಂದಿಲ್ಲ. ಅವರನ್ನು ಮತ್ತೆ ದೊಡ್ಡಪರದೆಯಲ್ಲಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರದ ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ. ಇಂದು (ನವೆಂಬರ್ 29) ರಮ್ಯಾ ಜನ್ಮದಿನ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ವಿಶ್ ಮಾಡುತ್ತಿದ್ದಾರೆ. ಈ ವಿಶೇಷ ದಿನದಂದು ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ಲುಕ್ ಹೇಗಿದೆ ಎಂಬುದು ರಿವೀಲ್ ಆಗಬಹುದು ಎಂದು ಫ್ಯಾನ್ಸ್ ಕಾದಿದ್ದಾರೆ.

ರಮ್ಯಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. 2003ರಲ್ಲಿ ರಿಲೀಸ್ ಆದ ‘ಅಭಿ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ಮೊದಲ ಚಿತ್ರದಲ್ಲೇ ಪುನೀತ್ ರಾಜ್​ಕುಮಾರ್ ಜೊತೆ ಅವರು ತೆರೆ ಹಂಚಿಕೊಂಡರು. ಅವರಿಗೆ ‘ಅಭಿ’ ಚಿತ್ರದಿಂದ ಸಾಕಷ್ಟು ಜನಪ್ರಿಯತೆ ಸಿಕ್ಕಿತು. ‘ಎಕ್ಸ್​​ಕ್ಯೂಸ್​ ಮಿ’ ಸಿನಿಮಾದಿಂದ ದೊಡ್ಡ ಗೆಲುವು ಕಂಡರು. ಆ ಬಳಿಕ ಅವರು ಹಲವು ಸ್ಟಾರ್​ಗಳ ಜೊತೆ ತೆರೆ ಹಂಚಿಕೊಂಡರು.

2016ರಿಂದ ಈಚೆ ರಮ್ಯಾ ಯಾವುದೇ ಸಿನಿಮಾದಲ್ಲಿ ನಾಯಕಿ ಆಗಿ ನಟಿಸಿಲ್ಲ. ಈಗ ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ‘ಉತ್ತರಕಾಂಡ’ ಸಿನಿಮಾದಿಂದ ಅವರ ಪೋಸ್ಟರ್ ಅಥವಾ ಟೀಸರ್ ರಿಲೀಸ್ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಡಾಲಿ ಧನಂಜಯ್ ಅವರ ಪಾತ್ರ ಈ ಚಿತ್ರದಲ್ಲಿ ಸಖತ್ ಖಡಕ್ ಆಗಿದೆ. ರಮ್ಯಾ ಅವರಿಗೂ ಅದೇ ರೀತಿಯ ಪಾತ್ರ ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ‘ಉತ್ತರಕಾಂಡ’ ಸಿನಿಮಾಗೆ ರೋಹಿತ್​ ಪದಕಿ ನಿರ್ದೇಶನ ಮಾಡಲಿದ್ದಾರೆ. ‘ಕೆಆರ್​ಜಿ ಸ್ಟುಡಿಯೋಸ್​’ ಬ್ಯಾನರ್ ಮೂಲಕ ಕಾರ್ತಿಕ್​ ಗೌಡ ಮತ್ತು ಯೋಗಿ ಜಿ. ರಾಜ್​ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವಣ್ಣ ಕೂಡ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಇದನ್ನೂ ಓದಿ: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

ಕಳೆದ ವಾರ ರಮ್ಯಾ ನಿರ್ಮಾಣದ ಮೊದಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ರಿಲೀಸ್ ಆಗಿದೆ. ಹೀಗಾಗಿ, ರಮ್ಯಾ ಜನ್ಮದಿನ ಮತ್ತಷ್ಟು ವಿಶೇಷ ಎನಿಸಿಕೊಂಡಿದೆ. ಬರ್ತ್​ಡೇ ಸಂದರ್ಭದಲ್ಲಿ ವೆಕೇಶನ್​ಗೆ ತೆರಳಿದ್ದಾರೋ ಎನ್ನುವ ವಿಚಾರ ಇನ್ನೂ ರಿವೀಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Wed, 29 November 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್