Actress Ramya: ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್​ ನ್ಯೂಸ್ ಹುಟ್ಟಿದ್ದು ಹೇಗೆ?

ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮರಳಿದ್ದಾರೆ.

Actress Ramya: ರಮ್ಯಾಗೆ ಹೃದಯಾಘಾತ ಆಗಿದೆ ಎಂಬ ಸುದ್ದಿ ಸುಳ್ಳು; ಈ ಫೇಕ್​ ನ್ಯೂಸ್ ಹುಟ್ಟಿದ್ದು ಹೇಗೆ?
ರಮ್ಯಾ
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Sep 06, 2023 | 1:01 PM

‘ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ ಎನ್ನುವ ಸುದ್ದಿ ಇಂದು (ಸೆಪ್ಟೆಂಬರ್ 6) ವೈರಲ್ ಆಯಿತು. ತಮಿಳು ಮಾಧ್ಯಮಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವರದಿ ಮಾಡಿದ್ದವು. ಆದರೆ, ಇದು ಸುಳ್ಳು ಸುದ್ದಿ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿದೆ. ‘ರಮ್ಯಾ ಆರೋಗ್ಯವಾಗಿದ್ದಾರೆ’ ಎಂದು ಅವರ ಆಪ್ತರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಮ್ಯಾ (Ramya Divya Spandana) ಅವರು ಈ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ನೀಡಬೇಕಿದೆ.

ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಆಗಿದೆ ಎನ್ನುವ ಸುಳ್ಳು ಸುದ್ದಿ ಹರಿದಾಡಿತ್ತು.

ರಮ್ಯ ಹೆಸರಿನ ತಮಿಳು ಕಿರುತೆರೆ ನಟಿ ಮೃತಪಟ್ಟಿದ್ದರು ಎನ್ನಲಾಗಿದೆ. ಈ ವಿಚಾರ ಹೇಳುವಾಗ ತಮಿಳುನಾಡಿನ ಕೆಲವರು ರಮ್ಯಾ ದಿವ್ಯಾ ಸ್ಪಂದನಾ  ಫೋಟೋ ಹಂಚಿಕೊಂಡಿದ್ದಾರೆ. ಆ ಬಳಿಕ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈಗ ರಮ್ಯಾ ಅವರು ಆರಾಮಾಗಿದ್ದಾರೆ ಎನ್ನುವ ಸುದ್ದಿ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Ramya Divya Spandana: ವಿದೇಶ ಪ್ರವಾಸದಲ್ಲಿ ನಟಿ ರಮ್ಯಾ ಮೋಜು-ಮಸ್ತಿ; ಇಲ್ಲಿದೆ ವಿಡಿಯೋ

ಸದ್ಯ ರಮ್ಯಾ ಯೂರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿ ಸುತ್ತಾಡುತ್ತಾ, ಹಲವರನ್ನು ಭೇಟಿ ಮಾಡುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಹಲವು ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ.

ರಮ್ಯಾ ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಚಿತ್ರತಂಡದ ವಿರುದ್ಧ ಅವರು ಕೇಸ್ ಕೂಡ ದಾಖಲು ಮಾಡಿದ್ದರು. ಈಗ ಧನಂಜಯ್ ನಟನೆಯ ‘ಉತ್ತರಕಾಂಡ’ ಚಿತ್ರದಲ್ಲಿ ರಮ್ಯಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಈ ಸಿನಿಮಾದ ಶೂಟಿಂಗ್ ಸದ್ಯ ಪ್ರಗತಿಯಲ್ಲಿದೆ. ಕೆಆರ್​ಜಿ ಸ್ಟುಡಿಯೋ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:24 pm, Wed, 6 September 23

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ