ಕೊನೆಗೂ ರಿವೀಲ್ ಆಯ್ತು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್​​ ದಿನಾಂಕ

ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ. ಇದರಲ್ಲಿ ಬಿಡುಗಡೆ ದಿನಾಂಕ ತಿಳಿಸಲಾಗಿದೆ.

ಕೊನೆಗೂ ರಿವೀಲ್ ಆಯ್ತು ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ರಿಲೀಸ್​​ ದಿನಾಂಕ
ರಾಜ್ ಬಿ ಶೆಟ್ಟಿ-ರವಿ ಸಿರಿ ಕುಮಾರ್
Follow us
ರಾಜೇಶ್ ದುಗ್ಗುಮನೆ
|

Updated on: Oct 24, 2023 | 12:04 PM

ನಟಿ ರಮ್ಯಾ (Ramya) ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ಇದರ ಜೊತೆಗೆ ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆ ‘ಆ್ಯಪಲ್ ಬಾಕ್ಸ್ ಸ್ಟುಡಿಯೋ’ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದು ಬಹಳ ಸಮಯ ಕಳೆದಿದೆ. ಈಗ ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ನವೆಂಬರ್ 24ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ರಮ್ಯಾ ಅವರು ಈ ಮೊದಲು ರಾಜಕೀಯ ಹಾಗೂ ಸಿನಿಮಾ ಕ್ಷೇತ್ರದಿಂದ ದೂರವೇ ಇದ್ದರು. ಆ ಬಳಿಕ ಅವರು ನಿಧಾನವಾಗಿ ಚಿತ್ರರಂಗದ ಜೊತೆ ಸಂಪರ್ಕ ಬೆಳೆಸಿಕೊಳ್ಳುತ್ತಾ ಬಂದರು. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾನ ನಿರ್ಮಾಣ ಮಾಡುವುದರ ಜೊತೆಗೆ  ಈ ಚಿತ್ರದಲ್ಲಿ ನಟಿಸುವುದಾಗಿ ಅವರು ಮೊದಲು ಹೇಳಿದ್ದರು. ಆದರೆ, ಬಳಿಕ ಮನಸ್ಸು ಬದಲಿಸಿದರು. ಈ ಚಿತ್ರದಲ್ಲಿ ರಾಜ್​ ಬಿ ಶೆಟ್ಟಿಗೆ ಜೊತೆಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ.

ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ. ನವೆಂಬರ್ 24ರಂದು ಚಿತ್ರ ಬಿಡುಗಡೆ ಅಗಲಿದೆ ಎಂದು ತಂಡ ಮಾಹಿತಿ ನೀಡಿದೆ. ‘ಎಲ್ಲರಿಗೂ ವಿಜಯದಶಮಿ ಹಬ್ಬದ ಶುಭಾಶಯಗಳು. ನಮ್ಮ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯೇ ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ: ಪಾಕ್ ವಿರುದ್ಧ ಭಾರತದ ಗೆಲುವಿಗೆ ರಮ್ಯಾ ಸಂಭ್ರಮ: ಆದರೂ ಅವರಿಗೆ ಇದೆ ಒಂದು ಬೇಸರ; ಏನದು?

ಸದ್ಯ ಈ ವಿಚಾರ ರಮ್ಯಾ ಅಭಿಮಾನಿಗಳಿಗೆ ಖುಷಿ ನೀಡಿದೆ. ಎಲ್ಲರೂ ರಮ್ಯಾಗೆ ಆಲ್​ ದಿ ಬೆಸ್ಟ್ ಹೇಳುತ್ತಿದ್ದಾರೆ. ಸಿನಿಮಾ ಗೆಲುವು ಕಾಣಲಿ ಎಂದು ಹಾರೈಸಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅತಿಥಿ ಪಾತ್ರ ಮಾಡಿದ್ದರು. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ