AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ರಮ್ಯಾಗೆ 4ನೇ ಸ್ಥಾನ; ರಚಿತಾ, ಆಶಿಕಾ, ರಶ್ಮಿಕಾ, ರಾಧಿಕಾ ನಡುವೆ ನಂ.1 ಯಾರು?

Ramya | Sandalwood: ಕನ್ನಡದ ಜನಪ್ರಿಯ ಟಾಪ್​ 5 ನಟಿಯರ ಪಟ್ಟಿಯಲ್ಲಿ ರಮ್ಯಾ ಸ್ಥಾನ ಪಡೆದಿದ್ದಾರೆ. ‘ಎಷ್ಟೇ ವರ್ಷ ಕಳೆದರೂ ನೀವೇ ನಮ್ಮ ನೆಚ್ಚಿನ ನಟಿ’ ಎಂದು ಫ್ಯಾನ್ಸ್​ ಕಮೆಂಟ್​ ಮಾಡುತ್ತಿದ್ದಾರೆ.

ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ರಮ್ಯಾಗೆ 4ನೇ ಸ್ಥಾನ; ರಚಿತಾ, ಆಶಿಕಾ, ರಶ್ಮಿಕಾ, ರಾಧಿಕಾ ನಡುವೆ ನಂ.1 ಯಾರು?
ಕನ್ನಡದ ಟಾಪ್​ 5 ಜನಪ್ರಿಯ ನಟಿಯರು
Follow us
TV9 Web
| Updated By: ಮದನ್​ ಕುಮಾರ್​

Updated on:Jul 26, 2022 | 7:33 AM

‘ಸ್ಯಾಂಡಲ್​ವುಡ್​ ಕ್ವೀನ್​’ ರಮ್ಯಾ (Sandalwood Queen Ramya) ಅವರು ನಟನೆಯಿಂದ ದೂರ ಉಳಿದುಕೊಂಡಿರಬಹುದು. ಆದರೆ ಅವರ ಹವಾ ಕಮ್ಮಿ ಆಗಿಲ್ಲ. ಚಿತ್ರರಂಗದ ಅನೇಕರ ಜೊತೆ ಅವರು ಸಂಪರ್ಕದಲ್ಲಿದ್ದಾರೆ. ಅವರು ಬಣ್ಣ ಹಚ್ಚದೇ ಬರೋಬ್ಬರಿ 8 ವರ್ಷ ಕಳೆದಿದೆ. ಆದಷ್ಟು ಬೇಗ ರಮ್ಯಾ (Ramya Divya Spandana) ಕಮ್​ಬ್ಯಾಕ್​ ಮಾಡಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಯಾವುದೇ ಸಿನಿಮಾದಲ್ಲೂ ನಟಿಸದೇ ಇದ್ದರೂ ಸಹ ಕನ್ನಡದ ಟಾಪ್​ 5 ಜನಪ್ರಿಯ ನಟಿಯರ ಪಟ್ಟಿಯಲ್ಲಿ ಸ್ಥಾನ ಗಳಿಸಿದ್ದಾರೆ. ಹೌದು, Ormax Media ನಡೆಸಿದ ಸಮೀಕ್ಷೆಯಲ್ಲಿ ರಮ್ಯಾ ಅವರು 4ನೇ ಸ್ಥಾನ ಪಡೆದಿದ್ದಾರೆ. ಇನ್ನುಳಿದ ಸ್ಥಾನಗಳಲ್ಲಿ ರಾಧಿಕಾ ಪಂಡಿತ್​, ರಶ್ಮಿಕಾ ಮಂದಣ್ಣ, ಆಶಿಕಾ ರಂಗನಾಥ್​, ರಚಿತಾ ರಾಮ್​ ಇದ್ದಾರೆ. ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ನಂ.1 ಸ್ಥಾನ ಸಿಕ್ಕಿದೆ.

ರಮ್ಯಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಅವರು Ormax Media ಸಂಸ್ಥೆಯ ಸಮೀಕ್ಷೆ ವರದಿಯನ್ನು ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘8 ವರ್ಷದಿಂದ ನಾನು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರೂ ಕೂಡ ಈ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ. ರಚಿತಾ ರಾಮ್​, ಆಶಿಕಾ ರಂಗನಾಥ್​, ರಶ್ಮಿಕಾ ಮಂದಣ್ಣ, ರಾಧಿಕಾ ಪಂಡಿತ್​ ಜೊತೆ ಈ ಪಟ್ಟಿಯಲ್ಲಿ ನಾನು ಕೂಡ ಸ್ಥಾನ ಪಡೆದಿರುವುದಕ್ಕೆ ಖುಷಿ ಆಗುತ್ತಿದೆ’ ಎಂದು ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
ಕ್ಯೂಟ್ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ಟ್ರೀಟ್ ಕೊಟ್ಟ ನಟಿ ರಮ್ಯಾ
Image
Sai Pallavi: ಕಾಶ್ಮೀರಿ ಪಂಡಿತರ ಹತ್ಯೆ ಕುರಿತು ಸಾಯಿ ಪಲ್ಲವಿ ಹೇಳಿಕೆ ವಿವಾದ: ನಟಿಯ ಪರವಾಗಿ ನಿಂತ ರಮ್ಯಾ
Image
Anushree: ರಮ್ಯಾ ಭೇಟಿ ಮಾಡಿ ‘ನೀವು ಯಾಕಿಷ್ಟು ಚಂದ’ ಎಂದು ಕೇಳಿದ ಆ್ಯಂಕರ್ ಅನುಶ್ರೀ
Image
Rakshit Shetty: ‘ರಮ್ಯಾ ನನ್ನ ಕ್ರಶ್​, ಆದರೆ ಮದುವೆ ಬಗ್ಗೆ ಹಬ್ಬಿರೋದು ಗಾಸಿಪ್​’: ನೇರ ಪ್ರಶ್ನೆಗೆ ಉತ್ತರ ನೀಡಿದ ರಕ್ಷಿತ್​ ಶೆಟ್ಟಿ

2003ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ರಮ್ಯಾ ಅವರು ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​, ಸುದೀಪ್​, ಯಶ್​, ಗಣೇಶ್​, ಉಪೇಂದ್ರ, ನೆನಪಿರಲಿ ಪ್ರೇಮ್​, ವಿಜಯ್​ ರಾಘವೇಂದ್ರ ಮುಂತಾದ ಸ್ಟಾರ್​ ನಟರ ಜೊತೆ ರಮ್ಯಾ ತೆರೆ ಹಂಚಿಕೊಂಡರು. 2014ರಿಂದ ಈಚೆಗೆ ರಮ್ಯಾ ಅವರು ನಟನೆ ಕಡೆಗೆ ಆಸಕ್ತಿ ತೋರಿಸಿಲ್ಲ. ಅವರು ನಟಿಸಿದ್ದ ‘ನಾಗರಹಾವು’ ಸಿನಿಮಾ 2016ರಲ್ಲಿ ತೆರೆಕಂಡಿತು.

ಒಂದೊಳ್ಳೆಯ ಸಿನಿಮಾ ಮೂಲಕ ರಮ್ಯಾ ಅವರು ಮತ್ತೆ ನಟನೆಗೆ ಮರಳಬೇಕು ಎಂದು ಫ್ಯಾನ್ಸ್ ಬೇಡಿಕೆ ಇಡುತ್ತಿದ್ದಾರೆ. ‘ಎಷ್ಟೇ ವರ್ಷ ಕಳೆದರೂ ನೀವೇ ನಮ್ಮ ನೆಚ್ಚಿನ ನಟಿ’ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ. ಇತ್ತೀಚೆಗೆ ಅನೇಕ ಸಿನಿಮಾ ತಂಡಗಳಿಗೆ ರಮ್ಯಾ ಅವರು ಶುಭ ಹಾರೈಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಡಾಲಿ ಧನಂಜಯ್​ ನಟನೆಯ ‘ಹೊಯ್ಸಳ’ ಚಿತ್ರದ ಶೂಟಿಂಗ್​ ಸೆಟ್​ಗೆ ಅವರು ಭೇಟಿ ನೀಡಿ ಗಮನ ಸೆಳೆದಿದ್ದರು.

Published On - 7:32 am, Tue, 26 July 22

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ