Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ರಮ್ಯಾ ಬೇಕು ಅಂತ ಪ್ರತಿಭಟನೆ, ಗುಡಿ ಕಟ್ಟಿಸಿ ಪೂಜೆ; ‘ಹಾಸ್ಟೆಲ್​ ಹುಡುಗರು’ ಮಾಡಿದ್ದು ಒಂದೆರಡಲ್ಲ

Hostel Hudugaru Bekagiddare: ಹಾಸ್ಟೆಲ್​ ಹುಡುಗರು ಪ್ರತಿಭಟನೆ ಮಾಡುತ್ತಾರೆ. ಕೆಲವರಂತೂ ಕೈ-ಕಾಲು ಕತ್ತರಿಸಿಕೊಳ್ಳತ್ತಾರೆ. ರಮ್ಯಾ ಕಂಬ್ಯಾಕ್​ ಮಾಡಬೇಕು ಎಂದು ಕೆಲವರು ಗುಡಿ ಕಟ್ಟಿಸಿ ಪೂಜೆ ಮಾಡಿಸುತ್ತಾರೆ.

Ramya: ರಮ್ಯಾ ಬೇಕು ಅಂತ ಪ್ರತಿಭಟನೆ, ಗುಡಿ ಕಟ್ಟಿಸಿ ಪೂಜೆ; ‘ಹಾಸ್ಟೆಲ್​ ಹುಡುಗರು’ ಮಾಡಿದ್ದು ಒಂದೆರಡಲ್ಲ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ವೈರಲ್ ವಿಡಿಯೋ
Follow us
TV9 Web
| Updated By: ಮದನ್​ ಕುಮಾರ್​

Updated on:Nov 03, 2022 | 10:00 PM

ನಟಿ ರಮ್ಯಾ (Ramya Divya Spandana) ಅವರು ಒಂದಷ್ಟು ವರ್ಷಗಳ ಕಾಲ ನಟನೆಯಿಂದ ದೂರು ಉಳಿದುಕೊಂಡಿದ್ದರು. ಈಗ ಅವರು ಮತ್ತೆ ಚಿತ್ರರಂಗಕ್ಕೆ ಮರಳಿದ್ದಾರೆ. ನಿರ್ಮಾಪಕಿಯಾಗಿ ಹೊಸ ಪ್ರತಿಭೆಗಳಿಗೆ ಅವಕಾಶ ಕೊಡಲು ಮುಂದಾಗಿದ್ದಾರೆ. ಅವರನ್ನು ಆದಷ್ಟು ಬೇಗ ದೊಡ್ಡ ಪರದೆ ಮೇಲೆ ನೋಡಬೇಕು ಎಂಬುದು ಅಭಿಮಾನಿಗಳ ಆಸೆ. ಹಾಗಂತ ಪ್ರತಿಭಟನೆ ಮಾಡೋಕಾಗತ್ತಾ? ರಮ್ಯಾಗಾಗಿ ಗುಡಿ ಕಟ್ಟಿಸಿ ಪೂಜೆ ಮಾಡೋಕಾಗತ್ತಾ? ‘ಹಾಸ್ಟೆಲ್​ ಹುಡುಗರು’ ಇದನ್ನೆಲ್ಲ ಮಾಡಿದ್ದಾರೆ. ಏನಿದು ಕಹಾನಿ ಅಂತೀರಾ? ಇಲ್ಲಿದೆ ಪೂರ್ತಿ ವಿವರ. ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಸಿನಿಮಾದ ಪ್ರಚಾರಕ್ಕಾಗಿ ಒಂದು ವಿಡಿಯೋ ಮಾಡಲಾಗಿದೆ. ಅದರಲ್ಲಿ ಈ ಎಲ್ಲ ಸನ್ನಿವೇಶಗಳು ಹೈಲೈಟ್​ ಆಗಿವೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ. ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣ ಆಗಿರುವ ಮೊದಲ ಚಿತ್ರವಿದು. ಆರಂಭದಿಂದಲೂ ಈ ಸಿನಿಮಾ ವಿಶೇಷ ಪ್ರೋಮೋಗಳ ಮೂಲಕ ಗಮನ ಸೆಳೆಯುತ್ತಿದೆ. ಈ ಮೊದಲು ಪುನೀತ್​ ರಾಜ್​ಕುಮಾರ್​ ಅವರು ಈ ಚಿತ್ರತಂಡಕ್ಕೆ ಬೆಂಬಲ ನೀಡಿದ್ದರು. ಈಗ ರಮ್ಯಾ ಸಾಥ್​ ನೀಡಿ​ದ್ದಾರೆ.

ವಿಶೇಷವಾದ ಒಂದು ಕಾನ್ಸೆಪ್ಟ್​ನಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರೋಮೋ ತಯಾರಾಗಿದೆ. ನಟಿ ರಮ್ಯಾ ಅವರು ತಮ್ಮ ಸಿನಿಮಾದಲ್ಲಿ ನಟಿಸಬೇಕು ಎಂದು ಹಾಸ್ಟೆಲ್​ ಹುಡುಗರು ಪ್ರತಿಭಟನೆ ಮಾಡುತ್ತಾರೆ. ಕೆಲವರಂತೂ ಕೈ-ಕಾಲು ಕತ್ತರಿಸಿಕೊಳ್ಳತ್ತಾರೆ. ರಮ್ಯಾ ಕಂಬ್ಯಾಕ್​ ಮಾಡಬೇಕು ಎಂದು ಕೆಲವರು ಗುಡಿ ಕಟ್ಟಿಸಿ ಪೂಜೆ ಮಾಡಿಸುತ್ತಾರೆ. ಕೊನೆಗೂ ರಮ್ಯಾ ಅವರು ಒಪ್ಪಿಕೊಂಡು ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಾರೆ. ಅದಕ್ಕೆ ಪ್ರತಿಯಾಗಿ ರಮ್ಯಾಗೆ ವಿಚಿತ್ರವಾದ ಸಂಭಾವನೆ ದೊರೆಯುತ್ತದೆ! ಸದ್ಯ ಈ ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

ಇದನ್ನೂ ಓದಿ
Image
Ramya: 18ನೇ ಪ್ರಾಯದಲ್ಲಿ ರಮ್ಯಾ ಹೇಗಿದ್ದರು ನೋಡಿ; ವೈರಲ್​ ಆಗಿದೆ ಹಳೇ ಐಡಿ ಕಾರ್ಡ್​​ ಫೋಟೋ
Image
ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ರಮ್ಯಾಗೆ 4ನೇ ಸ್ಥಾನ; ರಚಿತಾ, ಆಶಿಕಾ, ರಶ್ಮಿಕಾ, ರಾಧಿಕಾ ನಡುವೆ ನಂ.1 ಯಾರು?
Image
Ramya: ತಮ್ಮನ್ನು ತಾವೇ ‘ಡ್ರಾಮಾ ಕ್ವೀನ್​’ ಎಂದು ಕರೆದುಕೊಂಡ ನಟಿ ರಮ್ಯಾ; ಕಾರಣ ಏನು?
Image
Ramya: ಕಡೆಗೂ ಶೂಟಿಂಗ್​ ಸೆಟ್​ಗೆ ಬಂದ ರಮ್ಯಾ: ಡಾಲಿ ಜತೆ ಇರುವ ವಿಡಿಯೋ ವೈರಲ್​; ಏನಿದು ಸಮಾಚಾರ?

ಹೊಸಬರ ಕಾನ್ಪೆಪ್ಟ್​ ಮೆಚ್ಚಿಕೊಂಡಿರುವ ರಮ್ಯಾ ಅವರು ಈ ತಂಡಕ್ಕೆ ಸಾಥ್​ ನೀಡಿದ್ದಾರೆ. ಪ್ರೋಮೋ ವಿಡಿಯೋದಲ್ಲಿ ನಟಿಸುವ ಮೂಲಕ ರಮ್ಯಾ ಅವರು ಮತ್ತೆ ಬಣ್ಣ ಹಚ್ಚಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ರಂಗಭೂಮಿಯ ಅನೇಕ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಕೆಲವು ಸ್ಟಾರ್ ನಟರು ಅತಿಥಿ ಪಾತ್ರ ಮಾಡಿದ್ದಾರೆ. ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಜನವರಿಯಲ್ಲಿ ಸಿನಿಮಾ ತೆರೆಗೆ ಬರುವ ಸಾಧ್ಯತೆ ಇದೆ. ಅಜನೀಶ್ ಲೋಕನಾಥ್ ಸಂಗೀತ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಅವರು ಸಂಕಲನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:00 pm, Thu, 3 November 22

ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ