AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲಿಗೆ ಬೀಳ್ತೀನಿ, ಕೇಸ್ ವಾಪಸ್ ತಗೊಳ್ಳಿ ಎಂದ ದರ್ಶನ್ ಫ್ಯಾನ್ಸ್: ರಮ್ಯಾ ಖಡಕ್ ಉತ್ತರ

ದರ್ಶನ್ ಮೇಲಿನ ಅತಿಯಾದ ಅಭಿಮಾನದಿಂದ ಕೆಲವರು ನಟಿ ರಮ್ಯಾಗೆ ಅಸಭ್ಯವಾಗಿ ಕಮೆಂಟ್ ಮಾಡಿದ್ದರು. ಅಂಥವರ ಮೇಲೆ ರಮ್ಯಾ ಅವರು ಕೇಸ್ ಹಾಕಿ ಕಾನೂನಿನ ಮೂಲಕ ತಕ್ಕ ಪಾಠ ಕಲಿಸುತ್ತಿದ್ದಾರೆ. ಕೇಸ್ ವಾಪಸ್ ತೆಗೆದುಕೊಳ್ಳಿ ಎಂಬ ಮನವಿಗೆ ಸಂಬಂಧಿಸಿದಂತೆ ರಮ್ಯಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕಾಲಿಗೆ ಬೀಳ್ತೀನಿ, ಕೇಸ್ ವಾಪಸ್ ತಗೊಳ್ಳಿ ಎಂದ ದರ್ಶನ್ ಫ್ಯಾನ್ಸ್: ರಮ್ಯಾ ಖಡಕ್ ಉತ್ತರ
Ramya Divya Spandana
ಮದನ್​ ಕುಮಾರ್​
|

Updated on: Nov 27, 2025 | 5:56 PM

Share

ಖ್ಯಾತ ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರಿಗೆ ಕೆಲವರು ಅಶ್ಲೀಲವಾಗಿ ಕಮೆಂಟ್ ಮತ್ತು ಮೆಸೇಜ್ ಮಾಡಿದ್ದರು. ದರ್ಶನ್ ಕೇಸ್ ಬಗ್ಗೆ ರಮ್ಯಾ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಕ್ಕಾಗಿ ಡಿ ಬಾಸ್ ಅಭಿಮಾನಿಗಳು (Darshan Fans) ಕೋಪಗೊಂಡು ಈ ರೀತಿ ಮೆಸೇಜ್ ಕಳಿಸಿದ್ದರು. ಅಂಥವರ ವಿರುದ್ಧ ರಮ್ಯಾ ಅವರು ಕೇಸ್ ಹಾಕಿ, ಕಾನೂನಿನ ಮೂಲಕ ಪಾಠ ಕಲಿಸುತ್ತಿದ್ದಾರೆ. ಈಗಾಗಲೇ ಕಿಡಿಗೇಡಿಗಳನ್ನು ಅರೆಸ್ಟ್ ಮಾಡಲಾಗಿದೆ. ಬಳಿಕ ಜಾಮೀನು ಕೂಡ ಸಿಕ್ಕಿದೆ. ‘ಕಾಲಿಗೆ ಬೀಳ್ತೀವಿ, ದಯವಿಟ್ಟು ಕೇಸ್ ವಾಪಸ್ ತೆಗೆದುಕೊಳ್ಳಿ’ ಎಂದು ಆರೋಪಿಗಳ ಕುಟುಂಬದವರು ರಮ್ಯಾಗೆ ಮನವಿ ಮಾಡಿದ್ದಾರೆ. ಅದಕ್ಕೆ ರಮ್ಯಾ (Ramya) ಅವರು ಖಡಕ್ ಉತ್ತರ ನೀಡಿದ್ದಾರೆ.

‘ಎಲ್ಲ ಆರೋಪಿಗಳು ಬೇಲ್ ಮೇಲೆ ಹೊರಗೆ ಬಂದಿದ್ದಾರೆ. ನಾನು ಯಾವಾಗಲೋ ಕ್ಷಮಿಸಿದ್ದೇನೆ. ಆದರೆ ಅವರು ಈ ರೀತಿ ತಪ್ಪು ಮತ್ತೊಮ್ಮೆ ಯಾರಿಗೂ ಮಾಡಬಾರದು ಎಂಬುದು ನನ್ನ ಉದ್ದೇಶ. ಅದಕ್ಕಾಗಿಯೇ ನಾನು ದೂರು ದಾಖಲಿಸಿದ್ದು. ಅವರು ಮತ್ತೆ ತಪ್ಪು ಮಾಡಲ್ಲ ಎಂಬ ಭರವಸೆ ನನಗೆ ಇದೆ. ಶಿಕ್ಷೆ ಕೊಡಿಸಬೇಕು ಎಂಬ ಉದ್ದೇಶ ನನಗೆ ಇಲ್ಲ’ ಎಂದು ರಮ್ಯಾ ಅವರು ಹೇಳಿದ್ದಾರೆ.

‘ಸಮಾಜಕ್ಕೆ ಒಂದು ಒಳ್ಳೆಯ ಸಂದೇಶ ನೀಡಬೇಕು ಎಂದರೆ, ಹೆಣ್ಮಕ್ಕಳ ಸಲುವಾಗಿ ನಾವು ಕಾನೂನಿನ ಪ್ರಕಾರ ನಡೆದುಕೊಳ್ಳಬೇಕಾಗುತ್ತದೆ. ಆ ಪ್ರಕಾರವಾಗಿ ಅರೆಸ್ಟ್ ಮಾಡಲಾಗಿತ್ತು. ಕಾನೂನಿನ ಪ್ರಕಾರವೇ ಅವರೆಲ್ಲ ಈಗ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅವರ ಪೋಷಕರು ಬಂದು ನನ್ನನ್ನು ಭೇಟಿ ಮಾಡುವ ಅವಶ್ಯಕತೆ ಇಲ್ಲ. ನನಗೆ ಕೇಳುವ ಬದಲು ನಿಮ್ಮ ಮಕ್ಕಳಿಗೆ ಬುದ್ಧಿ ಹೇಳಿ’ ಎಂದಿದ್ದಾರೆ ರಮ್ಯಾ.

‘ಒಂದು ಕಡೆ ನೀವು ಬಡವರು ಎನ್ನುತ್ತೀರಿ. ಫೋನ್ ಇದೆ ಅಂತ ನೀವು ಡೇಟಾ ಖರೀದಿಸಬಹುದು, ಇನ್​ಸ್ಟಾಗ್ರಾಮ್ ಬಳಸಬಹುದು, ಕಮೆಂಟ್ ಮಾಡಬಹುದು. ಹಾಗೆಲ್ಲ ಕಮೆಂಟ್ ಮಾಡುವುದು ಸರಿಯಲ್ಲ ಅಂತ ಮಕ್ಕಳಿಗೆ ಹೇಳಿಕೊಡಬೇಕು. ಯಾರೋ ಸ್ನೇಹಿತರು ಕಮೆಂಟ್ ಮಾಡಿದರು ಎನ್ನುವುದಾದರೆ ಇನ್ಮೇಲೆ ನಿಮ್ಮ ಮೊಬೈಲ್ ಯಾರಿಗೂ ಕೊಡಬೇಡಿ’ ಎಂದು ರಮ್ಯಾ ಹೇಳಿದ್ದಾರೆ.

ಇದನ್ನೂ ಓದಿ: ದರ್ಶನ್ ನಟನೆಯ ‘ಡೆವಿಲ್’ ಸಿನಿಮಾಕ್ಕೆ ಶುಭ ಕೋರಿದ ನಟಿ ರಮ್ಯಾ

ಸಿನಿಮಾಗೆ ಕಮ್​ಬ್ಯಾಕ್ ಮಾಡುವ ಬಗ್ಗೆಯೂ ರಮ್ಯಾ ಅವರು ಆಲೋಚನೆ ಮಾಡಿದ್ದಾರೆ. ಈಗಾಗಲೇ ಅವರು ಕೆಲವು ಕಥೆಗಳನ್ನು ಕೇಳಿದ್ದಾರೆ. ಐತಿಹಾಸಿಕ, ಪೌರಾಣಿಕ ಶೈಲಿಯ ಸಿನಿಮಾಗಳನ್ನು ಮಾಡುವ ಆಸೆ ಅವರಿಗೆ ಇದೆ. ಈಗಾಗಲೇ ಚಿತ್ರರಂಗದ ಹಿಟ್ ನಿರ್ದೇಶಕರೊಬ್ಬರ ಜೊತೆ ರಮ್ಯಾ ಅವರು ಹೊಸ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ. ಆದರೆ ಆ ನಿರ್ದೇಶಕ ಯಾರು ಎಂಬುದನ್ನು ರಮ್ಯಾ ಬಹಿರಂಗಪಡಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?