Ramya: ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡಕ್ಕೆ ರಮ್ಯಾ ಲೀಗಲ್​ ನೋಟೀಸ್​; 1 ಕೋಟಿ ರೂ. ಪರಿಹಾರಕ್ಕೆ ಒತ್ತಾಯ

Hostel Hudugaru Bekagiddare: ರಮ್ಯಾ ಅವರು ಈ ಮೊದಲು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಪ್ರೋಮೋ ಶೂಟ್​ನಲ್ಲಿ ಭಾಗಿ ಆಗಿದ್ದರು. ಆದರೆ ಈಗ ಅವರು ಲೀಗಲ್​ ನೋಟೀಸ್​ ಕಳಿಸಿರುವುದು ಅಚ್ಚರಿ ಮೂಡಿಸಿದೆ.

Ramya: ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡಕ್ಕೆ ರಮ್ಯಾ ಲೀಗಲ್​ ನೋಟೀಸ್​; 1 ಕೋಟಿ ರೂ. ಪರಿಹಾರಕ್ಕೆ ಒತ್ತಾಯ
ರಮ್ಯಾ, ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಪೋಸ್ಟರ್​
Follow us
Malatesh Jaggin
| Updated By: ಮದನ್​ ಕುಮಾರ್​

Updated on:Jul 19, 2023 | 12:21 PM

ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಸಿನಿಮಾ ತಂಡಕ್ಕೆ ಲೀಗಲ್​ ನೋಟೀಸ್​ (Legal Notice) ಕಳಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಬಿಡುಗಡೆ ಆಗಿದ್ದ ಟ್ರೇಲರ್​ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್​ ಖುಷಿ ಆಗಿದ್ದರು. ಆದರೆ ಈ ದೃಶ್ಯಗಳನ್ನು ತಮ್ಮ ಅನುಮತಿ ಇಲ್ಲದೇ ಬಳಸಲಾಗಿದೆ ಎಂದು ಈಗ ರಮ್ಯಾ ಅವರು ತಕರಾರು ತೆಗೆದಿದ್ದಾರೆ. ಇದರಿಂದ ತಮಗೆ ಆಗಿರುವ ನಷ್ಟವನ್ನು ತುಂಬಿಕೊಡಬೇಕು ಹಾಗೂ ಎಲ್ಲ ಕಡೆಗಳಿಂದ ತಮ್ಮ ದೃಶ್ಯ, ಫೋಟೋ, ಸುದ್ದಿ ಮತ್ತಿತ್ತರ ಕಂಟೆಂಟ್​ಗಳನ್ನು ತೆಗೆದುಹಾಕಬೇಕು ಎಂದು ರಮ್ಯಾ ಡಿಮ್ಯಾಂಡ್​ ಮಾಡಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಅವರು ನೋಟೀಸ್​ನಲ್ಲಿ ಒತ್ತಾಯಿಸಿದ್ದಾರೆ. ಇದು ಈಗ ಚಿತ್ರತಂಡಕ್ಕೆ ತಲೆ ನೋವಾಗಿ ಪರಿಣಮಿಸುವ ಸಾಧ್ಯತೆ ಇದೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಜುಲೈ 21ರಂದು ಬಿಡುಗಡೆ ಮಾಡಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಈಗ ಕೊನೇ ಕ್ಷಣದಲ್ಲಿ ರಮ್ಯಾ ಅವರಿಂದ ಲೀಗಲ್​ ನೋಟೀಸ್​ ಬಂದಿರುವುದರಿಂದ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ. ಈ ಮೊದಲು ರಮ್ಯಾ ಅವರು ಈ ಸಿನಿಮಾದ ಪ್ರೋಮೋ ಶೂಟ್​ನಲ್ಲಿ ಭಾಗಿ ಆಗಿದ್ದರು. ಆದರೆ ಈಗ ಅವರು ಲೀಗಲ್​ ನೋಟೀಸ್​ ಕಳಿಸಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಸಂಜು ವೆಡ್ಸ್ ಗೀತಾ 2 ಸಿನಿಮಾ ಘೋಷಣೆ: ಕಿಟ್ಟಿ ಜೊತೆಗೆ ರಮ್ಯಾ ಇರ್ತಾರಾ?

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಟ್ರೇಲರ್​ ಗಮನ ಸೆಳೆದಿದೆ. ಇದರಲ್ಲಿ ರಮ್ಯಾ, ರಿಷಬ್​ ಶೆಟ್ಟಿ, ದಿಗಂತ್​, ಪವನ್​ ಕುಮಾರ್ ಮುಂತಾದವರು ಕಾಣಿಸಿಕೊಂಡಿದ್ದಾರೆ. ಆದರೆ ಈ ಟ್ರೇಲರ್​ ಅನ್ನು ಯೂಟ್ಯೂಬ್​ ಮುಂತಾದ ಕಡೆಗಳಿಂದ ತೆಗೆದು ಹಾಕಬೇಕು ಎಂದು ಕೋರ್ಟ್​ ಆದೇಶಿಸಿದೆ ಎಂದು ಈ ಲೀಗಲ್​ ನೋಟೀಸ್​ನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Ramya: ಗುಲಾಬಿಗೆ ಮುತ್ತಿಟ್ಟ ರಮ್ಯಾ ದಿವ್ಯ ಸ್ಪಂದನಾ; ಜೊತೆಗೊಂದು ಚಂದದ ಕವನ

ನಿತಿನ್​ ಕೃಷ್ಣಮೂರ್ತಿ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಅವರು ‘ಪರಂವಾ ಪಿಕ್ಚರ್ಸ್​’ ಮೂಲಕ ಬಿಡುಗಡೆ ಮಾಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:05 pm, Wed, 19 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ