Ramya Divya Spandana: ರಮ್ಯಾ ಸಿಹಿ ಸುದ್ದಿ; ನಿರ್ಮಾಣ ಸಂಸ್ಥೆ ‘ಆಪಲ್​ ಬಾಕ್ಸ್​ ಸ್ಟುಡಿಯೋಸ್​’ ಮೂಲಕ ಕಮ್​ಬ್ಯಾಕ್​ ಮಾಡಿದ ನಟಿ

Ramya | Apple Box Studios: ನಟಿ ರಮ್ಯಾ ಅವರು ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಗೆ ‘ಆಪಲ್​ ಬಾಕ್ಸ್​ ಸ್ಟುಡಿಯೋಸ್​’ ಎಂದು ಹೆಸರು ಇಡಲಾಗಿದೆ.

Ramya Divya Spandana: ರಮ್ಯಾ ಸಿಹಿ ಸುದ್ದಿ; ನಿರ್ಮಾಣ ಸಂಸ್ಥೆ ‘ಆಪಲ್​ ಬಾಕ್ಸ್​ ಸ್ಟುಡಿಯೋಸ್​’ ಮೂಲಕ ಕಮ್​ಬ್ಯಾಕ್​ ಮಾಡಿದ ನಟಿ
ರಮ್ಯಾ ದಿವ್ಯ ಸ್ಪಂದನಾ
Follow us
TV9 Web
| Updated By: ಮದನ್​ ಕುಮಾರ್​

Updated on:Aug 31, 2022 | 12:47 PM

ಖ್ಯಾತ ನಟಿ ರಮ್ಯಾ (Ramya Divya Spandana) ಅವರು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿದ್ದರು. ಅದರಂತೆ, ಗಣೇಶ ಚತುರ್ಥಿಯ ಶುಭ ದಿನದಂದು ಗುಡ್ ನ್ಯೂಸ್​ ನೀಡಿದ್ದಾರೆ. ಅವರು ಈಗ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ತಮ್ಮ ಹೊಸ ನಿರ್ಮಾಣ ಸಂಸ್ಥೆಗೆ ‘ಆಪಲ್​ ಬಾಕ್ಸ್​ ಸ್ಟುಡಿಯೋಸ್​’ (Apple Box Studios) ಎಂದು ಹೆಸರು ಇಟ್ಟಿದ್ದಾರೆ. ತಮ್ಮ ಹೊಸ ನಿರ್ಮಾಣ ಸಂಸ್ಥೆಯ ಕುರಿತು ಅಭಿಮಾನಿಗಳಿಗೆ ತಿಳಿಸಲು ರಮ್ಯಾ (Ramya) ಅವರು ಪತ್ರ ಬರೆದಿದ್ದಾರೆ. ಇದರಲ್ಲಿ ನಮ್ಮ ಉದ್ದೇಶದ ಬಗ್ಗೆ ವಿವರಣೆ ನೀಡಿದ್ದಾರೆ.

‘ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್‌ನ ಮೂಲಕ ನಿರ್ಮಾಪಕಿ ಆಗಲಿದ್ದೇನೆ ಎನ್ನುವುದು ವಿಶೇಷ’ ಎಂದು ಅವರು ಪತ್ರ ಆರಂಭಿಸಿದ್ದಾರೆ.

‘ಏನಿದು ಆಪಲ್ ಬಾಕ್ಸ್‌? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ, ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮೆರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ. ಈ ಪೆಟ್ಟಿಗೆಯ ಸರಳತೆ ನನಗೆ ಸದಾ ಸ್ಫೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ. ಪ್ರಸ್ತುತ, ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ ಒ.ಟಿ.ಟಿ ಪ್ಲಾಟ್ ಫಾರಂಗಳಿಗಾಗಿ ಸಿನಿಮಾ ಹಾಗು ವೆಬ್ ಸೀರೀಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟುಡಿಯೋಸ್ ಸಿದ್ಧವಾಗುತ್ತಿದೆ’ ಎಂದು ರಮ್ಯಾ ತಿಳಿಸಿದ್ದಾರೆ.

‘ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್‌ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ. ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತ್ಪೂರ್ವಕ ವಂದನೆಗಳು. ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು. ಇದರ ಜೊತೆಗೆ ವಿಜಯ್​ ಕಿರಗಂದೂರು, ಜಯಣ್ಣ, ಯೋಗಿ ಜಿ. ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು’ ಎಂದು ರಮ್ಯಾ ಅವರು ಪತ್ರದಲ್ಲಿ ಬರೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:29 am, Wed, 31 August 22

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ