‘ರೈಡರ್​’, ‘ಬಡವ ರಾಸ್ಕಲ್​’ ಚಿತ್ರಗಳ ಬಗ್ಗೆ ರಮ್ಯಾ ನಿರೀಕ್ಷೆ; ಡಾಲಿ ಧನಂಜಯಗೆ ಮತ್ತೆ ಮತ್ತೆ ಪ್ರೀತಿ-ಪ್ರೋತ್ಸಾಹ

Ramya Divya Spandana: ‘ಈ ತಿಂಗಳು ಅನೇಕ ಕನ್ನಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಯಾವುದನ್ನು ನೋಡೋದು ಅಂತ ಯೋಚಿಸಬೇಡಿ. ಎಲ್ಲ ಸಿನಿಮಾಗಳನ್ನೂ ನೋಡಿ’ ಎಂದು ರಮ್ಯಾ ಹೇಳಿದ್ದಾರೆ.

‘ರೈಡರ್​’, ‘ಬಡವ ರಾಸ್ಕಲ್​’ ಚಿತ್ರಗಳ ಬಗ್ಗೆ ರಮ್ಯಾ ನಿರೀಕ್ಷೆ; ಡಾಲಿ ಧನಂಜಯಗೆ ಮತ್ತೆ ಮತ್ತೆ ಪ್ರೀತಿ-ಪ್ರೋತ್ಸಾಹ
ಡಾಲಿ ಧನಂಜಯ, ರಮ್ಯಾ, ನಿಖಿಲ್​ ಕುಮಾರಸ್ವಾಮಿ
Follow us
TV9 Web
| Updated By: ಮದನ್​ ಕುಮಾರ್​

Updated on: Dec 22, 2021 | 2:06 PM

‘ಸ್ಯಾಂಡಲ್​ವುಡ್​ ಕ್ವೀನ್​’ ರಮ್ಯಾ (Ramya Divya Spandana) ಅವರು ಸಿನಿಮಾಗಳಲ್ಲಿ ನಟಿಸದೇ ಹಲವು ವರ್ಷ ಆಗಿದೆ. ಆದರೆ ಅವರು ಚಿತ್ರರಂಗದ ಜೊತೆ ಸಂಪರ್ಕದಲ್ಲಿ ಇದ್ದಾರೆ. ಸ್ಯಾಂಡಲ್​​ವುಡ್​ನಲ್ಲಿ ಆಗುವ ಬೆಳವಣಿಗೆಗಳನ್ನು ಅವರು ಗಮನಿಸುತ್ತಿದ್ದಾರೆ. ಹೆಚ್ಚು ಕಾಲ ವಿದೇಶದಲ್ಲೇ ಕಾಲ ಕಳೆದರೂ ಕೂಡ ಅವರು ಕನ್ನಡ ಸಿನಿಮಾಗಳನ್ನು ಗಮನಿಸುತ್ತಾ ಇರುತ್ತಾರೆ. ಅದಕ್ಕೆ ಮತ್ತೆ ಮತ್ತೆ ಸಾಕ್ಷಿ ಸಿಗುತ್ತಲೇ ಇದೆ. ಕನ್ನಡದಲ್ಲಿ ರಿಲೀಸ್​ ಆಗುತ್ತಿರುವ ಚಿತ್ರಗಳ ಬಗ್ಗೆ ರಮ್ಯಾ ಅವರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಈ ವಾರ (ಡಿ.24) ನಿಖಿಲ್​ ಕುಮಾರಸ್ವಾಮಿ (Nikhil Kumaraswamy) ನಟನೆಯ ‘ರೈಡರ್​’ (Rider Movie) ಮತ್ತು ಡಾಲಿ ಧನಂಜಯ (Daali Dhananjay) ಅಭಿನಯದ ‘ಬಡವ ರಾಸ್ಕಲ್​’ (Badava Rascal) ಚಿತ್ರಗಳು ತೆರೆಕಾಣುತ್ತಿವೆ. ಆ ಸಿನಿಮಾಗಳಿಗೆ ರಮ್ಯಾ ಶುಭ ಕೋರಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಆಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ ಮೂಲಕ ಅವರು ಅವರು ಅಭಿಮಾನಿಗಳಿಗೆ ಆಗಾಗ ಅಪ್​ಡೇಟ್​ ನೀಡುತ್ತ ಇರುತ್ತಾರೆ. ಈಗ ಅವರು ಇನ್​ಸ್ಟಾಗ್ರಾಮ್ ಸ್ಟೋರಿ ಮೂಲಕ ‘ರೈಡರ್​’ ಮತ್ತು ‘ಬಡವ ರಾಸ್ಕಲ್​’ ಚಿತ್ರಗಳ ಮೇಲೆ ತಮಗೆ ಎಷ್ಟು ನಿರೀಕ್ಷೆ ಇದೆ ಎಂಬುದನ್ನು ತಿಳಿಸಿದ್ದಾರೆ. ‘ರೈಡರ್’​ ಚಿತ್ರದ ಟೀಸರ್​ ಹಂಚಿಕೊಂಡು ನಿಖಿಲ್​ ಕುಮಾರಸ್ವಾಮಿ ಅವರಿಗೆ ರಮ್ಯಾ ಶುಭ ಕೋರಿದ್ದಾರೆ.

‘ಈ ತಿಂಗಳು ಅನೇಕ ಕನ್ನಡ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಯಾವುದನ್ನು ನೋಡೋದು ಅಂತ ಯೋಚಿಸಬೇಡಿ. ಎಲ್ಲ ಸಿನಿಮಾಗಳನ್ನೂ ನೋಡಿ’ ಎಂದು ರಮ್ಯಾ ಹೇಳಿದ್ದಾರೆ. ‘ಬಡವ ರಾಸ್ಕಲ್​’ ಚಿತ್ರದ ಪೋಸ್ಟರ್​ ಶೇರ್​ ಮಾಡಿಕೊಂಡಿರುವ ಅವರು ಇಡೀ ತಂಡಕ್ಕೆ ಆಲ್​ ದಿ ಬೆಸ್ಟ್​ ಹೇಳಿದ್ದಾರೆ. ಧನಂಜಯ ಅವರಿಗೆ ರಮ್ಯಾ ಕಡೆಯಿಂದ ಈ ರೀತಿ ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ಸಿಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ‘ರತ್ನನ್​ ಪ್ರಪಂಚ’ ಸಿನಿಮಾ ಬಿಡುಗಡೆ ಆದಾಗಲೂ ಅವರು ಪ್ರೀತಿ ತೋರಿಸಿದ್ದರು.

‘ರತ್ನನ್​ ಪ್ರಪಂಚ’ ಚಿತ್ರವನ್ನು ನೋಡಿ ರಮ್ಯಾ ಮೆಚ್ಚಿಕೊಂಡಿದ್ದರು. ಬಳಿಕ ಅವರು ಇನ್​ಸ್ಟಾಗ್ರಾಮ್​ ಮೂಲಕ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದರು. ‘ಕಲಾವಿದರಾದ ಡಾಲಿ ಧನಂಜಯ, ಉಮಾಶ್ರೀ, ಪ್ರಮೋದ್​, ಶ್ರುತಿ, ವೈನಿಧಿ, ಅಚ್ಯುತ್​ ಕುಮಾರ್​, ಅನು ಪ್ರಭಾಕರ್​, ರವಿಶಂಕರ್​ ಎಲ್ಲರೂ ಬ್ರಿಲಿಯಂಟ್​. ರೆಬಾ ಮೋನಿಕಾ ಅವರೇ, ನಾನು ನಿಮಗಿಂತಲೂ ಉತ್ತಮವಾಗಿ ನಟಿಸುತ್ತಿರಲಿಲ್ಲ. ಕಾರ್ತಿಕ್​ ಗೌಡ ಮತ್ತು ಯೋಗಿ ಜಿ. ರಾಜ್​ ಮುಡಿಗೆ ಇನ್ನೊಂದು ಗರಿ ಸೇರಿದೆ. ನಿರ್ದೇಶಕ ರೋಹಿತ್​ ಪದಕಿ ಅವರ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ರಮ್ಯಾ ಪೋಸ್ಟ್​ ಮಾಡಿದ್ದರು.

ಇದನ್ನೂ ಓದಿ:

ನಿಖಿಲ್​ ಕುಮಾರಸ್ವಾಮಿ ನಟನೆಯ ‘ರೈಡರ್​’ ಡಿ.24ಕ್ಕೆ ರಿಲೀಸ್​; ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಪ್ರೀ-ರಿಲೀಸ್​ ಕಾರ್ಯಕ್ರಮ​ ಲೈವ್​ ನೋಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ