ಎಸ್​ಎಂ ಕೃಷ್ಣ ಕುರಿತು ರಮ್ಯಾ ಭಾವುಕ ಪೋಸ್ಟ್

Ramya: ಮಾಜಿ ಸಿಎಂ ಎಸ್​ಎಂ ಕೃಷ್ಣ ನಿನ್ನೆ ನಿಧನ ಹೊಂದಿದ್ದಾರೆ. ನಟಿ ರಮ್ಯಾ ಸಹ ಕೃಷ್ಣ ಅವರ ಆಪ್ತ ವಲಯದಲ್ಲಿದ್ದರು. ಕೃಷ್ಣ ಅವರ ನಿಧನದಿಂದ ತೀವ್ರ ದುಃಖತಪ್ತವಾಗಿರುವ ನಟಿ ರಮ್ಯಾ, ಇನ್​ಸ್ಟಾಗ್ರಾಂನಲ್ಲಿ ಕೃಷ್ಣ ಅವರ ಬಗ್ಗೆ ಭಾವುಕ ಪೋಸ್ಟ್ ಬರೆದುಕೊಂಡಿದ್ದಾರೆ. ಕೃಷ್ಣ ಅವರ ಅಂತ್ಯಕ್ರಿಯೆ ಇಂದು ಸೋಮನಹಳ್ಳಿಯಲ್ಲಿ ನಡೆಯಲಿದೆ.

ಎಸ್​ಎಂ ಕೃಷ್ಣ ಕುರಿತು ರಮ್ಯಾ ಭಾವುಕ ಪೋಸ್ಟ್
ಕೃಷ್ಣ-ರಮ್ಯಾ
Follow us
ಮಂಜುನಾಥ ಸಿ.
|

Updated on:Dec 11, 2024 | 11:49 AM

ಮಾಜಿ ಸಿಎಂ ಎಸ್​ಎಂ ಕೃಷ್ಣ ನಿನ್ನೆ ನಿಧನ ಹೊಂದಿದ್ದಾರೆ. ಕುಟುಂಬ ಸದಸ್ಯರು, ಅಪಾರ ಅಭಿಮಾನಿ ವರ್ಗವನ್ನು ಕೃಷ್ಣ ಅಗಲಿದ್ದಾರೆ. ಕೃಷ್ಣ ಅವರ ಅಗಲಿಕೆಗೆ ಹಲವರು ಕಂಬನಿ ಮಿಡಿದಿದ್ದಾರೆ. ಚಿತ್ರರಂಗದವರೊಟ್ಟಿಗೂ ಕೃಷ್ಣ ಆತ್ಮೀಯ ಬಂಧ ಹೊಂದಿದ್ದರು. ಹಲವು ಯುವ ರಾಜಕಾರಣಿಗಳಿಗೆ ಮಾರ್ಗದರ್ಶಕರೂ ಆಗಿದ್ದರು. ನಟಿ ರಮ್ಯಾ ಸಹ ಕೃಷ್ಣ ಅವರ ಆಪ್ತ ವಲಯದಲ್ಲಿದ್ದರು. ರಮ್ಯಾ ಅವರು ರಾಜಕೀಯ ಪ್ರವೇಶ ಮಾಡಿದಾಗ ಅವರಿಗೂ ಮಾರ್ಗದರ್ಶನವನ್ನು ಕೃಷ್ಣ ಅವರು ಮಾಡಿದ್ದರು. ಇದೀಗ ಅಗಲಿದ ಹಿರಿಯ ಮುತ್ಸಧಿ ಬಗ್ಗೆ ರಮ್ಯಾ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ.

ನಿನ್ನೆ ಕೃಷ್ಣ ನಿಧನರಾಗುತ್ತಿದ್ದಂತೆ ಅವರ ನಿವಾಸಕ್ಕೆ ಆಗಮಿಸಿದ್ದ ನಟಿ ರಮ್ಯಾ, ಕಣ್ಣೀರು ಹಾಕಿದ್ದರು. ತೀವ್ರ ದುಖಃದಲ್ಲಿದ್ದ ನಟಿ ರಮ್ಯಾ ಮಾಧ್ಯಮಗಳ ಬಳಿಯೂ ಮಾತನಾಡಲಾಗದೆ ತೆರಳಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್ ಒಂದನ್ನು ಕೃಷ್ಣ ಅವರ ಬಗ್ಗೆ ಹಂಚಿಕೊಂಡಿದ್ದರು.

‘ಎಲ್ಲ ರೀತಿಯಿಂದಲೂ ಒಬ್ಬ ಅದ್ಭುತ ರಾಜನೀತಿಜ್ಞ ಆಗಿದ್ದರು, ಎಂದಿಗೂ ಅವರ ‘ರಾಜಕಾರಣಿ’ ರೀತಿ ವರ್ತಿಸಿದವರಲ್ಲ. ಎಂದಿಗೂ ಸಹ ಯಾರ ಬಗ್ಗೆಯೂ ಕೀಳಾಗಿ ಅವರು ಮಾತನಾಡಿದ್ದಿಲ್ಲ, ಅವರ ಎದುರಾಳಿಗಳಿಗೂ ಅದೇ ಗೌರವವನ್ನು ಅವರು ನೀಡುತ್ತಿದ್ದರು. ದೂರದೃಷ್ಟಿಯುಳ್ಳ, ಮಾನವೀಯತೆ ಹೊಂದಿದ್ದ ಸಿಹಿ ಮಾತುಗಳ ಕೃಷ್ಣ ಅವರು ಚೆನ್ನಾಗಿ ಓದಿಕೊಂಡಿದ್ದ, ಹಾಸ್ಯಪ್ರಜ್ಞೆ ಹೊಂದಿದ್ದ ವ್ಯಕ್ತಿ. ಅವರಂಥಹಾ ಸುಂದರ ವ್ಯಕ್ತಿತ್ವ ಹೊಂದಿರುವ ಮತ್ತೊಬ್ಬ ವ್ಯಕ್ತಿ ಸಿಗಲಾರರು. ನೀವು ನೀಡಿರುವ ಎಲ್ಲದಕ್ಕೂ ಧನ್ಯವಾದ. ನೀವು ಈಗ ನಿಮ್ಮ ಆತ್ಮೀಯ ಗೆಳೆಯನನ್ನು ಸೇರಿಕೊಂಡಿದ್ದೀರಿ’ ಎಂದಿದ್ದಾರೆ ರಮ್ಯಾ.

ಇದನ್ನೂ ಓದಿ:ಭಾವುಕರಾಗಿ ಎಸ್​ಎಂ ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

ರಮ್ಯಾ ಅವರ ಸಾಕು ತಂದೆ ಆರ್​ಟಿ ನಾರಾಯಣ್ ಅವರು ಎಸ್​ಎಂ ಕೃಷ್ಣ ಅವರ ಆತ್ಮೀಯ ಗೆಳೆಯರಾಗಿದ್ದರು. ಹಲವು ವರ್ಷಗಳಿಂದಲೂ ಕೃಷ್ಣ ಹಾಗೂ ನಾರಾಯಣ್ ಗೆಳೆಯರಾಗಿದ್ದರು ಹಲವು ವರ್ಷಗಳ ಕಾಲ ಇಬ್ಬರೂ ಒಟ್ಟಿಗೆ ಟೆನ್ನಿಸ್ ಆಡುತ್ತಿದ್ದರು. ಇದೇ ಕಾರಣಕ್ಕೆ ರಮ್ಯಾ, ಅವರು ‘ನೀವೀಗ ನಿಮ್ಮ ಆತ್ಮೀಯ ಗೆಳೆಯನೊಟ್ಟಿಗೆ ಇರಲಿದ್ದೀರಿ’ ಎಂದು ತಮ್ಮ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಕೃಷ್ಣ ಅವರು ನಿಧನ ಹೊಂದಿದ್ದಾರೆ. ನಿನ್ನೆ ರಾಜ್ಯ ಮತ್ತು ರಾಷ್ಟ್ರಕಾರಣದ ಹಲವು ಗಣ್ಯರು ಅವರ ಅಂತಿಮ ದರ್ಶನ ಪಡೆದರು. ಇಂದು (ಡಿಸೆಂಬರ್ 11) ಕೃಷ್ಣ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಮಂಡ್ಯದ ಸೋಮನಹಳ್ಳಿಗೆ ಕೊಂಡೊಯ್ದಿದ್ದು ಅಲ್ಲಿಯೇ ಅಂತಿಮ ಸಂಸ್ಕಾರ ನಡೆಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:42 am, Wed, 11 December 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ