AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್​​ ಕಿರಿಕ್​; ರಮ್ಯಾ ಸಿನಿಮಾದ ವಿರುದ್ಧ ರಾಜೇಂದ್ರ ಸಿಂಗ್​ ಬಾಬು ದೂರು

Swathi Mutthina Male Haniye: ಒಂದೇ ಶೀರ್ಷಿಕೆಯಲ್ಲಿ ಎರಡು ಸಿನಿಮಾ ನಿರ್ಮಾಣ ಆಗುತ್ತಿರುವುದು ಅಚ್ಚರಿ ಮೂಡಿಸಿದೆ. ರಮ್ಯಾ ಅವರು ತಮ್ಮ ಚಿತ್ರದ ಟೈಟಲ್​ ಬದಲಾಯಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ.

Ramya: ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್​​ ಕಿರಿಕ್​; ರಮ್ಯಾ ಸಿನಿಮಾದ ವಿರುದ್ಧ ರಾಜೇಂದ್ರ ಸಿಂಗ್​ ಬಾಬು ದೂರು
ರಾಜೇಂದ್ರ ಸಿಂಗ್ ಬಾಬು, ರಮ್ಯಾ
TV9 Web
| Edited By: |

Updated on:Dec 12, 2022 | 2:32 PM

Share

ನಟಿ ರಮ್ಯಾ (Ramya Divya Spandana) ಅವರು ಬಹಳ ಉತ್ಸಾಹದಲ್ಲಿ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ. ಈಗಾಗಲೇ ಈ ಚಿತ್ರಕ್ಕೆ ಶೂಟಿಂಗ್​ ಮುಗಿದಿದೆ. ಆದರೆ ಈಗ ಶೀರ್ಷಿಕೆ ವಿಚಾರವಾಗಿ ಕಿರಿಕ್​ ಶುರುವಾಗುವ ಸೂಚನೆ ಸಿಕ್ಕಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Swathi Mutthina Male Haniye) ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು (S V Rajendra Singh Babu) ಅವರು ಆಕ್ಷೇಪ ಎತ್ತಿದ್ದಾರೆ. ಈ ಕುರಿತು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು ಅವರು ಪತ್ರದಲ್ಲಿ ಖಡಕ್​ ಆಗಿ ತಿಳಿಸಿದ್ದಾರೆ.

1990ರಲ್ಲಿ ‘ಬಣ್ಣದ ಗೆಜ್ಜೆ’ ಚಿತ್ರ ಬಿಡುಗಡೆ ಆಗಿತ್ತು. ಆ ಸಿನಿಮಾಗೆ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ನಿರ್ದೇಶನ ಮಾಡಿದ್ದರು. ‘ಬಣ್ಣದ ಗೆಜ್ಜೆ’ ಚಿತ್ರದ ‘ಸ್ವಾತಿ ಮುತ್ತಿನ ಮಳೆ ಹನಿಯೇ..’ ಹಾಡು ಇಂದಿಗೂ ಫೇಮಸ್​. ಇದೇ ಶೀರ್ಷಿಕೆಯನ್ನು ಇಟ್ಟುಕೊಂಡು ನಟಿ ರಮ್ಯಾ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಆದರೆ ರಾಜೇಂದ್ರ ಸಿಂಗ್​ ಬಾಬು ಅವರು ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿರುವುದಾಗಿ ತಿಳಿಸಿದ್ದಾರೆ. ಹಾಗಾಗಿ ತಮ್ಮ ಪರ ವಕೀಲರ ಮೂಲಕ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ.

ಎಸ್​.ವಿ. ರಾಜೇಂದ್ರ ಸಿಂಗ್​ ಬಾಬು ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರಕ್ಕೆ ‘ರೆಬಲ್​ ಸ್ಟಾರ್​’ ಅಂಬರೀಷ್​ ಹಾಗೂ ಸುಹಾಸಿನಿ ಅವರು ಜೋಡಿ ಎಂಬುದು ವಿಶೇಷ. ಈ ಚಿತ್ರಕ್ಕೆ ಶೇಕಡ 80ರಷ್ಟು ಶೂಟಿಂಗ್​ ಮುಗಿದಿತ್ತು. ಆದರೆ ಅಂಬರೀಷ್​ ನಿಧನರಾದ ಬಳಿಕ ಕೆಲವು ದೃಶ್ಯಗಳ ಚಿತ್ರೀಕರಣ ಬಾಕಿ ಉಳಿದುಕೊಂಡಿತು ಎಂದು ಪತ್ರದಲ್ಲಿ ರಾಜೇಂದ್ರ ಸಿಂಗ್​ ಬಾಬು ತಿಳಿಸಿದ್ದಾರೆ.

ಇದನ್ನೂ ಓದಿ
Image
Ramya: 18ನೇ ಪ್ರಾಯದಲ್ಲಿ ರಮ್ಯಾ ಹೇಗಿದ್ದರು ನೋಡಿ; ವೈರಲ್​ ಆಗಿದೆ ಹಳೇ ಐಡಿ ಕಾರ್ಡ್​​ ಫೋಟೋ
Image
ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ರಮ್ಯಾಗೆ 4ನೇ ಸ್ಥಾನ; ರಚಿತಾ, ಆಶಿಕಾ, ರಶ್ಮಿಕಾ, ರಾಧಿಕಾ ನಡುವೆ ನಂ.1 ಯಾರು?
Image
Ramya: ತಮ್ಮನ್ನು ತಾವೇ ‘ಡ್ರಾಮಾ ಕ್ವೀನ್​’ ಎಂದು ಕರೆದುಕೊಂಡ ನಟಿ ರಮ್ಯಾ; ಕಾರಣ ಏನು?
Image
Ramya: ಕಡೆಗೂ ಶೂಟಿಂಗ್​ ಸೆಟ್​ಗೆ ಬಂದ ರಮ್ಯಾ: ಡಾಲಿ ಜತೆ ಇರುವ ವಿಡಿಯೋ ವೈರಲ್​; ಏನಿದು ಸಮಾಚಾರ?

ಇದನ್ನೂ ಓದಿ:  ಬೆರಳೆಣಿಕೆ ದಿನಗಳಲ್ಲಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತಂಡ

ರಮ್ಯಾ ಅವರು ‘ಆಪಲ್​ ಬಾಕ್ಸ್​’ ಹೆಸರಲಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅದರ ಮೂಲಕ ನಿರ್ಮಾಣ ಆಗುತ್ತಿರುವ ಮೊದಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ರಾಜ್​ ಬಿ. ಶೆಟ್ಟಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಸಿರಿ ರವಿಕುಮಾರ್​ ಅವರು ನಾಯಕಿ ಆಗಿದ್ದಾರೆ. ಆದರೆ ಈಗ ಈ ಚಿತ್ರಕ್ಕೆ ಶೀರ್ಷಿಕೆ ವಿವಾದ ಎದುರಾಗಿದೆ.

ಇದನ್ನೂ ಓದಿ: Actress Ramya: ‘ನಾನು ಆ ಚಿತ್ರದಲ್ಲಿ ನಟಿಸುತ್ತಿಲ್ಲ’; ಸ್ಪಷ್ಟನೆ ನೀಡಿದ ನಟಿ ರಮ್ಯಾ

ಒಂದೇ ಶೀರ್ಷಿಕೆಯಲ್ಲಿ ಎರಡು ಸಿನಿಮಾ ನಿರ್ಮಾಣ ಆಗುತ್ತಿರುವುದು ಅಚ್ಚರಿ ಮೂಡಿಸಿದೆ. ರಮ್ಯಾ ಅವರು ತಮ್ಮ ಚಿತ್ರದ ಶೀರ್ಷಿಕೆ ಬದಲಾಯಿಸುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಈ ಕುರಿತು ಅವರು ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:32 pm, Mon, 12 December 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು