ಮತ್ತೆ ದರ್ಶನ್ ಅಭಿಮಾನಿಗಳ ಮೇಲೆ ಆಕ್ರೋಶ ಹೊರಹಾಕಿದ ರಮ್ಯಾ
Ramya vs Darshan Fans: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿರುವಾಗ ಹೇಳಿಕೆ ನೀಡಿದ್ದ ರಮ್ಯಾ, ರೇಣುಕಾಸ್ವಾಮಿ ಕುಟುಂಬದವರಿಗೆ ನ್ಯಾಯ ದೊರಕುವ ಭರವಸೆ ಮೂಡಿದೆ ಎಂದಿದ್ದರು. ಅದಕ್ಕೆ ಪ್ರತಿಯಾಗಿ ದರ್ಶನ್ ಅಭಿಮಾನಿಗಳು ರಮ್ಯಾರ ನಿಂದನೆಗಿಳಿದಿದ್ದರು. ಇದೀಗ ರಮ್ಯಾ, ದರ್ಶನ್ ಅಭಿಮಾನಿಗಳ ದುರ್ವರ್ತನೆಯನ್ನು ಖಂಡಿಸಿದ್ದಾರೆ.

ನಟಿ ರಮ್ಯಾ (Ramya), ರೇಣುಕಾ ಸ್ವಾಮಿ ಪ್ರಕರಣ ನಡೆದಾಗಿನಿಂದಲೂ ರೇಣುಕಾಸ್ವಾಮಿಗೆ ಅವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಆಗ್ರಹಿಸುತ್ತಲೇ ಇದ್ದಾರೆ. ಅದರ ಜೊತೆಗೆ ದರ್ಶನ್ ಅಭಿಮಾನಿಗಳ ದುರ್ವರ್ತನೆಯನ್ನು ಖಂಡಿಸುತ್ತಲೇ ಬಂದಿದ್ದಾರೆ. ಇತ್ತೀಚೆಗೆ ಸಹ ಸುಪ್ರೀಂಕೋರ್ಟ್ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಾಗಲೂ ಸಹ ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ದೊರಕುವ ವಿಶ್ವಾಸ ವ್ಯಕ್ತಪಡಿಸಿದ್ದರು. ಅದಾದ ಬಳಿಕ ದರ್ಶನ್ ಅಭಿಮಾನಿಗಳು ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳನ್ನು ಹರಿಬಿಟ್ಟಿದ್ದರು. ಅದಕ್ಕೆ ಪ್ರತಿಯಾಗಿ ರಮ್ಯಾ ಸಹ ಆಕ್ರೋಶ ಹೊರಹಾಕಿದ್ದರು. ಇಂದು ಮತ್ತೆ ರಮ್ಯಾ, ದರ್ಶನ್ ಅಭಿಮಾನಿಗಳ ವರ್ತನೆಯನ್ನು ಖಂಡಿಸಿದ್ದಾರೆ.
ನಿನ್ನೆ (ಜುಲೈ 26) ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದ ನಟಿ ರಮ್ಯಾ, ‘ದರ್ಶನ್ ಅಭಿಮಾನಿಗಳಿಗೆ ನನ್ನ ಇನ್ಸ್ಟಾಗ್ರಾಂಗೆ ಸ್ವಾಗತ. ರೇಣುಕಾಸ್ವಾಮಿಗೆ ಯಾಕೆ ನ್ಯಾಯ ಸಿಗಬೇಕು ಎಂಬುದಕ್ಕೆ ಇದೇ ಕಾರಣ’ ಎಂದಿದ್ದರು. ಆ ಮೂಲಕ ದರ್ಶನ್ ಅಭಿಮಾನಿಗಳ ದುಂಡಾವರ್ತನೆಗೆ ಪ್ರತಿಫಲವಾಗಿ ಆದರೂ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂದಿದ್ದರು.
ಇಂದು (ಜುಲೈ 27) ಮತ್ತೆ ಇನ್ಸ್ಟಾಗ್ರಾಂನಲ್ಲಿ ಸಂದೇಶ ಹಂಚಿಕೊಂಡಿರುವ ‘ರೇಣುಕಾಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂಥಹಾ ಸ್ತ್ರೀದ್ವೇಷಿ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ’ ಎಂದಿದ್ದಾರೆ ರಮ್ಯಾ. ಅದರ ಜೊತೆಗೆ ದರ್ಶನ್ ಅಭಿಮಾನಿಗಳು ತಮಗೆ ಅವರಿಗೆ ಮಾಡಿರುವ ಅಶ್ಲೀಲ ಸಂದೇಶಗಳನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ರಮ್ಯಾ ಹಂಚಿಕೊಂಡಿದ್ದಾರೆ. ರಮ್ಯಾ ಅವರನ್ನುದ್ದೇಶಿಸಿ ಅತ್ಯಂತ ಅಶ್ಲೀಲ ಸಂದೇಶಗಳನ್ನು ದರ್ಶನ್ ಅಭಿಮಾನಿಗಳು ಮಾಡಿದ್ದಾರೆ.
ಇದನ್ನೂ ಓದಿ:‘ಡೆವಿಲ್’ ಸಿನಿಮಾ ಶೂಟ್ ಮುಗಿಸಿ ಬೆಂಗಳೂರಿಗೆ ಮರಳಿದ ದರ್ಶನ್
ನಟಿ ರಮ್ಯಾ, ರಾಜಕೀಯಕ್ಕೆ ಹೋಗಿ ಬಂದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದು ಮಹಿಳಾ ಪರ, ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ರೇಣುಕಾ ಸ್ವಾಮಿ ಪ್ರಕರಣ ನಡೆದಾಗಲೂ ಸಹ ನಟಿ ರಮ್ಯಾ, ರೇಣುಕಾ ಸ್ವಾಮಿ ಪರವಾಗಿ ಪೋಸ್ಟ್ಗಳನ್ನು ಹಂಚಿಕೊಂಡಿದ್ದರು. ಅದಕ್ಕೆ ಪ್ರತಿಯಾಗಿ ರಮ್ಯಾ ಸಹ ದರ್ಶನ್ ಅಭಿಮಾನಿಗಳ ದುರ್ವರ್ತನೆಯನ್ನು ವಿರೋಧಿಸುತ್ತಲೇ ಬರುತ್ತಿದ್ದಾರೆ.
ರಮ್ಯಾ ಮಾತ್ರವೇ ಅಲ್ಲದೆ ನಟ ಒಳ್ಳೆ ಹುಡ್ಗ ಪ್ರಥಮ್ ವಿರುದ್ಧವೂ ಇತ್ತೀಚೆಗೆ ದರ್ಶನ್ ಅಭಿಮಾನಿಗಳು ದೌರ್ಜನ್ಯ ಮೆರೆದಿದ್ದಾರೆ. ಪ್ರಥಮ್ಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ನಿರ್ಮಾಪಕ ಉಮಾಪತಿ ಗೌಡ ವಿರುದ್ಧವೂ ಸಹ ದರ್ಶನ್ ಅಭಿಮಾನಿಗಳು ಅಶ್ಲೀಲ ಪೋಸ್ಟ್ಗಳನ್ನು ಹಂಚಿಕೊಂಡಿದ್ದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




