Hostel Hudugaru Bekagiddare: ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಬಿಡುಗಡೆಗೆ ಕೋರ್ಟ್​ ಅನುಮತಿ; ರಮ್ಯಾ ಹಾಕಿದ ಕೇಸ್​ನಲ್ಲಿ ನಿಟ್ಟುಸಿರು ಬಿಟ್ಟ ಚಿತ್ರತಂಡ

Ramya Divya Spandana: ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್​ನಲ್ಲಿ ರಮ್ಯಾ ಅವರ ಅರ್ಜಿ ವಜಾ ಆಗಿದ್ದು, ಸಿನಿಮಾ ಬಿಡುಗಡೆಗೆ ಅನುಮತಿ ಸಿಕ್ಕಿದೆ.

Hostel Hudugaru Bekagiddare: ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಬಿಡುಗಡೆಗೆ ಕೋರ್ಟ್​ ಅನುಮತಿ; ರಮ್ಯಾ ಹಾಕಿದ ಕೇಸ್​ನಲ್ಲಿ ನಿಟ್ಟುಸಿರು ಬಿಟ್ಟ ಚಿತ್ರತಂಡ
ರಮ್ಯಾ, ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಪೋಸ್ಟರ್​

Updated on: Jul 20, 2023 | 4:10 PM

ಭಾರಿ ನಿರೀಕ್ಷೆ ಮೂಡಿಸಿರುವ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಸಿನಿಮಾ ತಂಡದ ಬಿಡುಗಡೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆಗಿದೆ. ಈ ಸಿನಿಮಾದಲ್ಲಿ ತಮ್ಮ ವಿಡಿಯೋಗಳನ್ನು ಅನುಮತಿ ಇಲ್ಲದೇ ಬಳಸಿಕೊಳ್ಳಲಾಗಿದೆ ಎಂದು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಆರೋಪಿಸಿದ್ದರು. ಹಾಗಾಗಿ ಚಿತ್ರದಲ್ಲಿನ ತಮ್ಮ ದೃಶಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು. ಅಲ್ಲದೇ ಚಿತ್ರತಂಡಕ್ಕೆ ಲೀಗಲ್​ ನೋಟೀಸ್​ ಕಳಿಸಿದ್ದರು. ಇದರಿಂದ ಜುಲೈ 21ರಂದು ಸಿನಿಮಾ ಬಿಡುಗಡೆ ಆಗತ್ತೋ ಇಲ್ಲವೋ ಎಂಬ ಅನುಮಾನ ಮೂಡಿತ್ತು. ಆದರೆ ಕೋರ್ಟ್​ನಲ್ಲಿ ರಮ್ಯಾ (Ramya) ಅವರ ಅರ್ಜಿ ವಜಾ ಆಗಿದೆ. ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.

ಕೆಲವೇ ದಿನಗಳ ಹಿಂದೆ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಟ್ರೇಲರ್​ ಬಿಡುಗಡೆ ಆಗಿತ್ತು. ಅದರಲ್ಲಿ ರಮ್ಯಾ, ದಿಗಂತ್​, ರಿಷಬ್​ ಶೆಟ್ಟಿ, ಪವನ್​ ಕುಮಾರ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್​ನಲ್ಲಿ ರಮ್ಯಾ ಅವರನ್ನು ನೋಡಿ ಫ್ಯಾನ್ಸ್​ ಖುಷಿಪಟ್ಟರು. ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಲು ಇದು ಕೂಡ ಕಾರಣ ಆಯಿತು. ಆದರೆ ಇದರಲ್ಲಿ ಬಳಕೆ ಆಗಿರುವ ತಮ್ಮ ದೃಶ್ಯಗಳಿಗೆ ಚಿತ್ರತಂಡದವರು ಅನುಮತಿ ಪಡೆದಿಲ್ಲ ಎಂದು ರಮ್ಯಾ ತಕಾರು ತೆಗೆದಿದ್ದರು. ಅದಕ್ಕಾಗಿ ಅವರು ಕೋರ್ಟ್​ ಮೊರೆ ಹೋಗಿದ್ದರು.

Hostel Hudugaru Bekagiddare Trailer: ಮಿತಿ ಮೀರಿದೆ ಹಾಸ್ಟೆಲ್​ ಹುಡುಗರ ಹಾವಳಿ; ಏನೆಲ್ಲ ಮಾಡವ್ರೆ ನೀವೇ ನೋಡಿ

ನಿತಿನ್​ ಕೃಷ್ಣಮೂರ್ತಿ ಅವರ ನಿರ್ದೇಶನದಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಮೂಡಿಬಂದಿದೆ. ಅಜನೀಶ್​ ಬಿ. ಲೋಕನಾಥ್​ ಅವರು ಸಂಗೀತ ನೀಡಿರುವ ಹಾಡುಗಳು ಗಮನ ಸೆಳೆದಿವೆ. ಅರವಿಂದ್​ ಎಸ್​. ಕಶ್ಯಪ್​ ಅವರು ಈ ಸಿನಿಮಾಗೆ ಛಾಯಾಗ್ರಹಣ ಮಾಡಿದ್ದಾರೆ. ರಕ್ಷಿತ್​ ಶೆಟ್ಟಿ ಒಡೆತನದ ‘ಪರಂವಾ ಪಿಕ್ಚರ್ಸ್​’ ಮೂಲಕ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆ ಆಗುತ್ತಿದೆ.

Hostel Hudugaru Bekagiddare Official Trailer | B Ajaneesh Loknath | Nithin Krishnamurthy | A2 Music

ಕೋರ್ಟ್​​ನಲ್ಲಿ ತಮ್ಮ ಪರವಾಗಿ ತೀರ್ಪು ಬಂದಿರುವುದಕ್ಕೆ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾತಂಡದವರು ನಿಟ್ಟುಸಿರು ಬಿಟ್ಟಿದ್ದಾರೆ. ನರ್ತಕಿ ಚಿತ್ರಮಂದಿರದ ಎದುರಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಹೊಸ ಕಲಾವಿದರು ನಟಿಸಿದ್ದಾರೆ. ವಿಶೇಷವಾದ ಪ್ರಮೋಷನ್​ ವಿಡಿಯೋಗಳ ಮೂಲಕ ಈ ಸಿನಿಮಾ ಹೈಪ್​ ಸೃಷ್ಟಿ ಮಾಡಿದೆ. ಈ ಮೊದಲು ಪುನೀತ್​ ರಾಜ್​ಕುಮಾರ್​ ಕೂಡ ಈ ಚಿತ್ರದ ಪ್ರಮೋಷನಲ್​ ವಿಡಿಯೋದಲ್ಲಿ ಕಾಣಿಸಿಕೊಂಡು ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:55 pm, Thu, 20 July 23

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us