‘ಗರುಡ ಗಮನ..’ ಚಿತ್ರಕ್ಕೆ ರಾಣಾ ದಗ್ಗುಬಾಟಿ ಫಿದಾ; ಕನ್ನಡ ಸಿನಿಮಾ ಬಗ್ಗೆ ಒಂದೇ ಮಾತಲ್ಲಿ ಅವರು ಹೇಳಿದ್ದೇನು?

GGVV Movie: ‘ಗರುಡ ಗಮನ ವೃಷಭ ವಾಹನ’ ಸಿನಿಮಾ ನೋಡಿ ಎಂದು ಟ್ವಿಟರ್​ನಲ್ಲಿ ಸಿನಿಪ್ರಿಯರೊಬ್ಬರು ರಾಣಾ ದಗ್ಗುಬಾಟಿಗೆ ಸಲಹೆ ನೀಡಿದರು. ಅದಕ್ಕೆ ರಾಣಾ ಪ್ರತಿಕ್ರಿಯಿಸಿದ್ದಾರೆ.

‘ಗರುಡ ಗಮನ..’ ಚಿತ್ರಕ್ಕೆ ರಾಣಾ ದಗ್ಗುಬಾಟಿ ಫಿದಾ; ಕನ್ನಡ ಸಿನಿಮಾ ಬಗ್ಗೆ ಒಂದೇ ಮಾತಲ್ಲಿ ಅವರು ಹೇಳಿದ್ದೇನು?
ಗರುಡ ಗಮನ ವೃಷಭ ವಾಹನ ಪೋಸ್ಟರ್​, ರಾಣಾ ದಗ್ಗುಬಾಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Jan 20, 2022 | 3:14 PM

ರಾಜ್​ ಬಿ. ಶೆಟ್ಟಿ (Raj B Shetty) ಅವರು ತಮ್ಮ ನಟನೆ ಮತ್ತು ನಿರ್ದೇಶನದ ಮೂಲಕ ಮೋಡಿ ಮಾಡಿದ್ದಾರೆ. ಕಳೆದ ವರ್ಷ ತೆರೆಕಂಡ ‘ಗರುಡ ಗಮನ ವೃಷಭ ವಾಹನ’ (Garuda Gamana Vrishabha Vahana) ಸಿನಿಮಾದಿಂದ ಅವರಿಗೆ ದೇಶಾದ್ಯಂತ ಜನಪ್ರಿಯತೆ ಸಿಗುತ್ತಿದೆ. ಅನೇಕ ಕಾರಣಗಳಿಗಾಗಿ ಈ ಸಿನಿಮಾವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಥಿಯೇಟರ್​ನಲ್ಲಿ ಭರ್ಜರಿ ಪ್ರದರ್ಶನ ಕಂಡ ಬಳಿಕ ಒಟಿಟಿ ಪ್ಲಾಟ್​ಫಾರ್ಮ್​ ಮೂಲಕ ಈ ಸಿನಿಮಾ ಧೂಳೆಬ್ಬಿಸಿದೆ. ಜೀ5ನಲ್ಲಿ ಬಿಡುಗಡೆಯಾದ ‘ಗರುಡ ಗಮನ ವೃಷಭ ವಾಹನ’ ಚಿತ್ರವನ್ನು ಈಗ ಪರಭಾಷೆ ಮಂದಿ ಕೂಡ ಹೊಗಳುತ್ತಿದ್ದಾರೆ. ಇತ್ತೀಚೆಗೆಷ್ಟೇ ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಮೆಚ್ಚುಗೆ ಸೂಚಿಸಿದ್ದರು. ಈಗ ಟಾಲಿವುಡ್​ ನಟ ರಾಣಾ ದಗ್ಗುಬಾಟಿ (Rana Daggubati) ಅವರು ಕೂಡ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಕನ್ನಡ ಚಿತ್ರರಂಗದತ್ತ ಪರಭಾಷೆ ಪ್ರೇಕ್ಷಕರ ಆಸಕ್ತಿ ಹೆಚ್ಚುವಂತಾಗಿದೆ.

ಜೀ5ನಲ್ಲಿ ಬಿಡುಗಡೆಯಾದ ಬಳಿಕ ‘ಗರುಡ ಗಮನ ವೃಷಭ ವಾಹನ’ ಚಿತ್ರವನ್ನು ಪರರಾಜ್ಯಗಳ ಜನರು ನೋಡಿದ್ದಾರೆ. ಯೂಟ್ಯೂಬ್​ನಲ್ಲಿ ಅನೇಕರು ಇದರ ವಿಮರ್ಶೆ ಹಂಚಿಕೊಂಡಿದ್ದಾರೆ. ಡಿಫರೆಂಟ್​ ಆಗಿ ಮೂಡಿಬಂದಿರುವ ಈ ಚಿತ್ರದ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಈ ಸಿನಿಮಾ ನೋಡಿ ಎಂದು ಟ್ವಿಟರ್​ನಲ್ಲಿ ಸಿನಿಪ್ರಿಯರೊಬ್ಬರು ರಾಣಾ ದಗ್ಗುಬಾಟಿಗೆ ಸಲಹೆ ನೀಡಿದರು. ಅದಕ್ಕೆ ರಾಣಾ ಪ್ರತಿಕ್ರಿಯಿಸಿದ್ದಾರೆ.

‘ರಾಣಾ ದಗ್ಗುಬಾಟಿ ಅವರೇ, ದಯವಿಟ್ಟು ನೀವು ಸ್ವಲ್ಪ ಬಿಡುವು ಮಾಡಿಕೊಂಡು ಈ ಸಿನಿಮಾ ನೋಡಿ. ನಿಮ್ಮ ಅಭಿಪ್ರಾಯ ತಿಳಿಸಬೇಕೆಂದು ಬಯಸುತ್ತೇನೆ’ ಎಂದು ಅಭಿಮಾನಿಯೊಬ್ಬರು ಮಾಡಿದ ಟ್ವೀಟ್​ಗೆ ರಾಣಾ ಉತ್ತರ ನೀಡಿದ್ದಾರೆ. ‘ಇದು ಅದ್ಭುತವಾಗಿದೆ. ತುಂಬ ಇಷ್ಟಪಟ್ಟಿದ್ದೇನೆ’ ಎಂದು ಅವರು ಟ್ವೀಟ್​ ಮಾಡಿದ್ದಾರೆ.

ಈ ಸಿನಿಮಾದಲ್ಲಿ ರಾಜ್​ ಬಿ. ಶೆಟ್ಟಿ ಮತ್ತು ರಿಷಬ್​ ಶೆಟ್ಟಿ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಮಿಥುನ್​ ಮುಕುಂದನ್​ ಅವರ ಸಂಗೀತಕ್ಕೂ ಭರ್ಜರಿ ಮೆಚ್ಚುಗೆ ವ್ಯಕ್ತವಾಗಿದೆ. ಕೆಲವೇ ದಿನಗಳ ಹಿಂದೆ ರಾಮ್​ ಗೋಪಾಲ್​ ವರ್ಮಾ ಮತ್ತು ಅನುರಾಗ್​ ಕಶ್ಯಪ್​ ಅವರು ಈ ಚಿತ್ರದ ಬಗ್ಗೆ ಅನಿಸಿಕೆ ಹಂಚಿಕೊಂಡಿದ್ದರು.

ಜನವರಿ 13ರಂದು ಒಟಿಟಿಯಲ್ಲಿ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ರಿಲೀಸ್​ ಆಯಿತು. ಕೇವಲ ಮೂರು ದಿನಗಳಲ್ಲಿ ಬರೋಬ್ಬರಿ 8 ಕೋಟಿ ನಿಮಿಷಗಳ ವೀಕ್ಷಣೆ ಕಾಣುವ ಮೂಲಕ ಒಟಿಟಿ ಪ್ರೇಕ್ಷಕರಿಂದ ಭೇಷ್​ ಎನಿಸಿಕೊಂಡಿತು. ಈ ಸಿನಿಮಾದ ಹಾಡುಗಳು ಸಹ ಸೂಪರ್ ಹಿಟ್​ ಆಗಿವೆ. ‘ಮಾದೇವ..’ ಹಾಡು ಹೊಸ ಸೆನ್ಸೇಷನ್​ ಸೃಷ್ಟಿ ಮಾಡಿದೆ.

ಇದನ್ನೂ ಓದಿ:

ರೌಡಿಸಂ ದೃಶ್ಯಕ್ಕೆ ಮಾದೇಶ್ವರನ ಹಾಡು; ‘ಗರುಡ ಗಮನ..’ ಬಗ್ಗೆ ಶಾಂತಮಲ್ಲಿಕಾರ್ಜುನ ಸ್ವಾಮಿ ಬಹಿರಂಗ ಪತ್ರ

GGVV Review: ಹೀಗೂ ಇರಬಹುದಾ ಕ್ರೈಮ್​ ಲೋಕ? ಇದು ರಾಜ್​ ಬಿ. ಶೆಟ್ಟಿ ಇನ್ನೊಂದು ಮುಖ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ