ಶಿವರಾಜ್​ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಧನ್ಯವಾದ ತಿಳಿಸಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ

ಭೇಟಿ ವೇಳೆ ಶಿವರಾಜ್​ಕುಮಾರ್ ಹಾಗೂ ಗೀತಾ ಶಿವರಾಜ್​ಕುಮಾರ್ ಅವರಿಗೆ ರಣದೀಪ್ ಧನ್ಯವಾದ ತಿಳಿಸಿದ್ದಾರೆ. ಉಭಯ ಕುಶಲೋಪರಿ ಮಾತುಕತೆ ನಡೆದಿದೆ.

ಶಿವರಾಜ್​ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಧನ್ಯವಾದ ತಿಳಿಸಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ
ಶಿವಣ್ಣ ನಿವಾಸದಲ್ಲಿ ರಣದೀಪ್
Follow us
ರಾಜೇಶ್ ದುಗ್ಗುಮನೆ
|

Updated on:May 23, 2023 | 11:34 AM

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಬಾರಿ ಕಾಂಗ್ರೆಸ್ ಪರ ಅನೇಕ ಸೆಲೆಬ್ರಿಟಿಗಳು ಪ್ರಚಾರ ಮಾಡಿದ್ದರು. ಆ ಪೈಕಿ ಶಿವರಾಜ್​ಕುಮಾರ್ (Shivarajkumar) ಅವರು ಪ್ರಮುಖರು. ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಸೇರಿದ ಬಳಿಕ ಶಿವಣ್ಣ ಕೂಡ ಪ್ರಚಾರದಲ್ಲಿ ಭಾಗಿ ಆಗಿದ್ದರು. ಅವರು ಪ್ರಚಾರ ಮಾಡಿದವರ ಪೈಕಿ ಅನೇಕ ಸ್ಪರ್ಧಿಗಳು ಗೆದ್ದಿದ್ದಾರೆ. ಹೀಗಾಗಿ, ಬೆಂಗಳೂರಿನ ನಾಗವಾರ ನಿವಾಸದಲ್ಲಿ ಶಿವಣ್ಣ ಹಾಗೂ ಗೀತಾ ದಂಪತಿಯನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಭೇಟಿ ಮಾಡಿ, ಧನ್ಯವಾದ ಹೇಳಿದ್ದಾರೆ.

ಈ ಬಾರಿ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರು. ಸೊರಬದ ಮಧು ಬಂಗಾರಪ್ಪ, ಶಿರಸಿಯ ಭೀಮಣ್ಣ ನಾಯ್ಕ್, ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಅನೇಕರ ಪರ ಅವರು ಮತ ಕೇಳಿದ್ದರು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಹೀಗಾಗಿ, ರಣದೀಪ್ ಅವರು ಶಿವರಾಜ್​ಕುಮಾರ್ ಮನೆಗೆ ಭೇಟಿ ನೀಡಿದ್ದಾರೆ.

ಭೇಟಿ ವೇಳೆ ಶಿವರಾಜ್​ಕುಮಾರ್ ಹಾಗೂ ಗೀತಾ ಶಿವರಾಜ್​ಕುಮಾರ್ ಅವರಿಗೆ ರಣದೀಪ್ ಧನ್ಯವಾದ ತಿಳಿಸಿದ್ದಾರೆ. ಉಭಯ ಕುಶಲೋಪರಿ ಮಾತುಕತೆ ನಡೆದಿದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಶಿವಣ್ಣ ಕೂಡ ಚುನಾವಣಾ ಪ್ರಚಾರದಲ್ಲಿ ಭಾಗಿ ಆಗಿದ್ದು ಅನೇಕರಲ್ಲಿ ಕುತೂಹಲ ಮೂಡಿಸಿತ್ತು ಅವರು ರಾಜಕೀಯ ಸೇರುತ್ತಾರೆ ಎನ್ನುವ ಮಾತು ಕೇಳಿಬಂತು. ಆದರೆ, ಇದನ್ನು ಅವರು ಅಲ್ಲಗಳೆದಿದ್ದರು. ಅವರಿಗೆ ರಾಜಕೀಯ ಸೇರುವ ಯಾವುದೇ ಆಲೋಚನೆ ಇಲ್ಲ. ಈ ಬಗ್ಗೆ ಅವರು ಮಾತನಾಡಿದ್ದರು. ‘ಒಳ್ಳೆಯ ಕೆಲಸ ಮಾಡುವವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಅಷ್ಟೇ. ಭೀಮಣ್ಣ ನಮಗೆ ಸಂಬಂಧಿಕರು. ಜಗದೀಶ್ ಶೆಟ್ಟರ್ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಆದರೆ, ರಾಜಕೀಯ ಸೇರುವ ಆಲೋಚನೆ ಇಲ್ಲ’ ಎಂದಿದ್ದರು.

ಇದನ್ನೂ ಓದಿ: Shivarajkumar: ‘ನಾನು ನಟ ಮಾತ್ರ.. ರಾಜಕೀಯದ ಬಗ್ಗೆ ನನಗೆ ಗೊತ್ತಿಲ್ಲ’: ಚುನಾವಣಾ ಪ್ರಚಾರದ ವೇಳೆ ಶಿವಣ್ಣನ ನೇರ ಮಾತು

ಶಿವರಾಜ್​ಕುಮಾರ್ ಅವರು ರಾಜಕೀಯ ಕೆಲಸದ ಕಾರಣಕ್ಕೆ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದಿದ್ದರು. ರಾಜ್ಯದ ವಿವಿಧ ಕಡೆಗಳಿಗೆ ತೆರಳಿ ಅವರು ಮತಬೇಟೆ ಮಾಡಿದ್ದರು. ಈಗ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ‘ಘೋಸ್ಟ್​’, ‘ಜೈಲರ್​’, ‘ಕ್ಯಾಪ್ಟನ್ ಮಿಲ್ಲರ್’ ಸೇರಿ ಹತ್ತಾರು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:24 am, Tue, 23 May 23

Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ