Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು ನಟಿಸಬೇಕಿದ್ದ ‘ರಂಗ ಸಮುದ್ರ’ ಸಿನಿಮಾ ಬಿಡುಗಡೆ ದಿನಾಂಕ ನಿಗದಿ

Rangasamudra: ಟ್ರೈಲರ್, ಹಾಡು, ಸಂದೇಶದ ಕಾರಣಕ್ಕೆ ಗಮನ ಸೆಳೆದಿರುವ ‘ರಂಗಸಮುದ್ರ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.

ಅಪ್ಪು ನಟಿಸಬೇಕಿದ್ದ ‘ರಂಗ ಸಮುದ್ರ’ ಸಿನಿಮಾ ಬಿಡುಗಡೆ ದಿನಾಂಕ ನಿಗದಿ
Follow us
ಮಂಜುನಾಥ ಸಿ.
|

Updated on: Jan 07, 2024 | 9:42 PM

ಪುನೀತ್ ರಾಜ್​ಕುಮಾರ್ (Puneeth Rajkumar) ನಟಿಸಬೇಕಿದ್ದ ‘ರಂಗಸಮುದ್ರ’ ಸಿನಿಮಾ ತಮ್ಮ ಕಥಾವಸ್ತು, ಟ್ರೈಲರ್, ನಟರು ಹಾಡುಗಳ ಕಾರಣದಿಂದ ಸದ್ದಾಗುತ್ತಿದೆ. ಸಿನಿಮಾದ ಕುರಿತು ನಿರೀಕ್ಷೆ ಹೆಚ್ಚಾಗಿರುವ ಬೆನ್ನಲ್ಲೆ ಚಿತ್ರತಂಡವು ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ. ಸಂಕ್ರಾಂತಿ ಬಳಿಕ ‘ರಂಗಸಮುದ್ರ’ ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ.

ಹೊಯ್ಸಳ ಕ್ರಿಯೇಷನ್ಸ್ ಲಾಂಛನದಲ್ಲಿ ಹೊಯ್ಸಳ ಕೋಣನೂರು ನಿರ್ಮಿಸಿರುವ, ರಾಜಕುಮಾರ್ ಅಸ್ಕಿ ನಿರ್ದೇಶಿಸಿ, ರಂಗಾಯಣ ರಘು ಹಾಗೂ ದಕ್ಷಿಣ ಭಾರತದ ಖ್ಯಾತ ನಟ ಸಂಪತ್ ರಾಜ್ ಇನ್ನಿತರರು ಪ್ರಮುಖಪಾತ್ರದಲ್ಲಿ ನಟಿಸಿರಯವ ‘ರಂಗ ಸಮುದ್ರ’ ಸಿನಿಮಾ ಜನವರಿ 19ರಂದು ಬಿಡುಗಡೆ ಆಗಲಿದೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಮೂಲಕ “ರಂಗ ಸಮುದ್ರ” ಈಗಾಗಲೇ ಜನರ ಮನ ಗೆದ್ದಿದೆ. ಜಾನಪದ ಸೊಗಡಿನ ಹಾಗೂ ಕೌಟುಂಬಿಕ ಮನರಂಜನೆಯ ಕಥಾಹಂದರ ಹೊಂದಿರುವ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ.

ಇದನ್ನೂ ಓದಿ:ಪುನೀತ್ ರಾಜ್​ಕುಮಾರ್ ಎರಡನೇ ಪುಣ್ಯ ಸ್ಮರಣೆ, ಭರದಿಂದ ನಡೆದಿದೆ ತಯಾರಿ

ವಾಗೀಶ್ ಚನ್ನಗಿರಿ ಈ ಚಿತ್ರದ ಹಾಡುಗಳನ್ನು ಬರೆದಿದ್ದು, ದೇಸಿ ಮೋಹನ್ ಸಂಗೀತ ನೀಡಿದ್ದಾರೆ. ಆಸ್ಕರ್ ವಿಜೇತ ಕೀರವಾಣಿ, ಕೈಲಾಶ್ ಖೇರ್, ವಿಜಯ ಪ್ರಕಾಶ್, ನವೀನ್ ಸಜ್ಜು ಮುಂತಾದ ಖ್ಯಾತ ಗಾಯಕರು ಹಾಡುಗಳನ್ನು ಹಾಡಿದ್ದಾರೆ. ಆರ್ ಗಿರಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ಧನಂಜಯ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ರಾಘವೇಂದ್ರ ರಾಜಕುಮಾರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಂಗಾಯಣ ರಘು, ಸಂಪತ್ ರಾಜ್, ಕೆವಿಆರ್, ದಿವ್ಯ ಗೌಡ, ಮೂಗುರು ಸುರೇಶ್, ಉಗ್ರಂ ಮಂಜು, ಸ್ಕಂದ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಸಿನಿಮಾದಲ್ಲಿ ಪುನೀತ್ ರಾಜ್​ಕುಮಾರ್ ಅವರು ಪ್ರಮುಖ ಪಾತ್ರವೊಂದಕ್ಕೆ ಬಣ್ಣ ಹಚ್ಚಬೇಕಿತ್ತು. ಕೋವಿಡ್​ಗೆ ಮುನ್ನವೇ ಸಿನಿಮಾದ ಕತೆ ಕೇಳಿ ನಟಿಸಲು ಒಪ್ಪಿಗೆ ಸಹ ಸೂಚಿಸಿದ್ದರು. ಆದರೆ ದುರಾದೃಷ್ಟವಶಾತ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗುವ ಮುನ್ನವೇ ಇಹಲೋಕ ತ್ಯಜಿಸಿದರು. ಪುನೀತ್ ನಟಿಸಬೇಕಿದ್ದ ಈ ಸಿನಿಮಾದಲ್ಲಿ ಇದೀಗ ರಾಘವೇಂದ್ರ ರಾಜ್​ಕುಮಾರ್ ನಟಿಸಿದ್ದಾರೆ. ಶಿಕ್ಷಣ, ಬಡತನ, ಅಸಮಾನತೆ, ಜನಪದ, ದಬ್ಬಾಳಿಕೆ ಇನ್ನೂ ಹಲವು ವಿಷಯಗಳ ಮೇಲೆ ಸಿನಿಮಾದ ಕತೆ ಹೆಣೆಯಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು