AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾಖಾಹಾರಿ’ ಸಿನಿಮಾ ಟ್ರೈಲರ್ ಬಿಡುಗಡೆ: ಭಿನ್ನ ಪಾತ್ರದಲ್ಲಿ ರಂಗಾಯಣ ರಘು

Shakahari Trailer: ರಂಗಾಯಣ ರಘು, ಗೋಪಾಲ ದೇಶಪಾಂಡೆ ಒಟ್ಟಿಗೆ ನಟಿಸಿರುವ ಭಿನ್ನ ಕಥಾಹಂದರ ಹೊಂದಿರುವ ‘ಶಾಖಾಹಾರಿ’ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

‘ಶಾಖಾಹಾರಿ’ ಸಿನಿಮಾ ಟ್ರೈಲರ್ ಬಿಡುಗಡೆ: ಭಿನ್ನ ಪಾತ್ರದಲ್ಲಿ ರಂಗಾಯಣ ರಘು
ಮಂಜುನಾಥ ಸಿ.
|

Updated on: Feb 02, 2024 | 9:45 PM

Share

ಹಾಸ್ಯ ಪಾತ್ರ, ಪೋಷಕ ಪಾತ್ರಗಳ ಮೂಲಕ ರಂಗಾಯಣ ರಘು (Rangayana Raghu) ದೊಡ್ಡ ಮಟ್ಟದ ಜನಪ್ರಿಯತೆ ಗಳಿಸಿದ್ದಾರೆ. ಆದರೆ ರಂಗಾಯಣ ರಘು ಅವರು ಗಂಭೀರ ಪಾತ್ರಗಳಲ್ಲಿ ಅದ್ಭುತವಾಗಿ ಅಭಿನಯಿಸಬಲ್ಲರು. ಅವರ ನಟನೆಯನ್ನು ದುಡಿಸಿಕೊಂಡ ನಿರ್ದೇಶಕರು ಕಡಿಮೆಯೇ. ಇತ್ತೀಚೆಗಷ್ಟೆ ಬಿಡುಗಡೆ ಆದ ‘ರಂಗಸಮುದ್ರ’ ಸಿನಿಮಾದಲ್ಲಿ ರಂಗಾಯಣ ರಘು ಗಂಭೀರವಾದ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅದೇ ಮಾದರಿಯಲ್ಲಿ ಹಾಸ್ಯವಲ್ಲದ ಗಂಭೀರ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿರುವ ‘ಶಾಖಾಹಾರಿ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದ್ದು, ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

ಮಲೆನಾಡಿನ ಸಣ್ಣ ಹಳ್ಳಿಯೊಂದರಲ್ಲಿ ನಡೆಯುವ ಘಟನೆಗಳ ಸುತ್ತ ಹೆಣೆದಿರುವ ಕಾಲ್ಪನಿಕ ಕಥಾಹಂದರ ಹೊಂದಿರುವ ಈ ಸಿನೆಮಾದಲ್ಲಿ ರಂಗಾಯಣ ರಘು ಹೋಟಲ್ ಭಟ್ಟ ಸುಬ್ಬಣ್ಣನಾಗಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತನ್ನ ಸರಳ ಜೀವನಕ್ಕೆ ಅನಿರೀಕ್ಷಿತವಾಗಿ ಬಂದೊಗುವ ಕಷ್ಟ, ತೊಂದರೆಗಳಿಂದ ಮುಕ್ತನಾಗಲೂ ಸುಬ್ಬಣ ಭಟ್ಟ ಎದುರಿಸುವ ಸವಾಲುಗಳು ಹಾಗೂ ಶಾಕಾಹಾರಿ ಹೋಟೆಲ್ ಶಾಖಾಹಾರಿಯಾಗುವ ಬಗೆಯನ್ನು ಇಲ್ಲಿ‌ಕಾಣಬಹುದು.

ಎಸ್​ಐ ಮಲ್ಲಿಕಾರ್ಜುನ್ ಆಗಿ ಗೋಪಾಲಕೃಷ್ಣ ದೇಶಪಾಂಡೆ ಸೇರಿದಂತೆ, ವಿನಯ್ ಯುಜೆ, ನಿಧಿ ಹೆಗಡೆ, ಹರಿಣಿ ಶ್ರೀಕಾಂತ್, ಸುಜಯ್ ಶಾಸ್ತ್ರಿ, ಪ್ರಶಾಂತ್ ನಟನ, ಶ್ರೀಹರ್ಷ ಗೋಭಟ್, ಪ್ರತಿಮಾ ನಾಯಕ್, ಮೋಹನ್ ಶೇಣಿ, ಶಿಲ್ಪಾ ಶೈಲೇಶ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಮಲೆನಾಡಿನ ತಪ್ಪಲಿನಲ್ಲೇ ಚಿತ್ರೀಕರಣಗೊಂಡ ಈ ಸಿನೆಮಾದಲ್ಲಿ ಮಲೆನಾಡಿನ ಅನೇಕ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ:ಇದು ‘ಜಸ್ಟ್ ಪಾಸ್’ ಆದವರ ಕಾಲೇಜು; ಇದಕ್ಕೆ ರಂಗಾಯಣ ರಘು ಪ್ರಿನ್ಸಿಪಾಲ್​

ಶಾಖಾಹಾರಿ ಸಿನೆಮಾದ ಕಥೆ, ಸಂಭಾಷಣೆ ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಸಂದೀಪ್ ಸುಂಕದ್ ಅವರ ಸೂಕ್ಷ್ಮತೆ, ವಿಶ್ವಜಿತ್ ರಾವ್ ಅವರ ಕ್ಯಾಮೆರ ಕೈಚಳಕ ಸಿನೆಮಾಗೆ ಶಕ್ತಿಯಾಗಿರುವುದಲ್ಲದೇ, ಶಶಾಂಕ್ ನಾರಾಯಣ್ ಅವರ ಸಂಕಲನ, ಮಯೂರ್ ಅಂಬೇಕಲ್ಲು ಅವರ ಸಂಗೀತ ಸಿನೆಮಾಗೆ ಪುಷ್ಟಿ ನೀಡಿದೆ. ರಾಜೇಶ್ ಕೀಳಂಬಿ ಮತ್ತು ರಂಜಿನಿ ಪ್ರಸನ್ನರವರು ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈ.ಲಿ. ನ ಅಡಿಯಲ್ಲಿ ಶಾಖಾಹಾರಿ ಚಿತ್ರವನ್ನು ನಿರ್ಮಿಸಿದ್ದಾರೆ.

ನಮ್ಮ ಶಾಖಾಹಾರಿ ಸಿನಿಮಾದ ಟ್ರೈಲರ್ ಅನ್ನು ಇಂದು ಬೆಳಿಗ್ಗೆ 10:10ಕ್ಕೆ ನಟರಾಕ್ಷಸ ಡಾಲಿ‌ ಧನಂಜಯ್ ರವರು ಬಿಡುಗಡೆ ಮಾಡಿದ್ದಾರೆ..ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೇ ಫೆಬ್ರವರಿ 16ಕ್ಕೆ ಕರ್ನಾಟಕದಾದ್ಯಂತ ಚಿತ್ರ ತೆರೆಕಾಣಲಿದ್ದು. ಕೆ ಆರ್ ಜಿ ಸಂಸ್ಥೆ ಚಿತ್ರ ವಿತರಣೆಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ರಂಗಾಯಣ ರಘು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು. ಹೊಸತನದ ಈ ಹೊಸಬರ ಚಿತ್ರಕ್ಕೆ ಚಿತ್ರಕಥೆಯೇ ಜೀವಾಳವಾಗಿದೆ, ಮರ್ಡರ್ ಮಿಸ್ಟರಿ ಸಿನೆಮಾ ಇದಾಗಿದ್ದು ಪ್ರೇಕ್ಷಕರ ಮನಸ್ಸು ಗೆಲ್ಲುತ್ತದೆ ಎಂಬ ಆತ್ಮವಿಶ್ವಾಸ ಚಿತ್ರತಂಡದ್ದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ