ರಂಗಾಯಣ ರಘು ಮಾತನಾಡಿದ ಕನ್ನಡ ನೋಡಿ ದಂಗಾದ ಫ್ಯಾನ್ಸ್

‘ಮೂರನೇ ಕೃಷ್ಣಪ್ಪ’ ಸಿನಿಮಾ ಆನೇಕಲ್ ಕನ್ನಡ ಶೈಲಿಯಲ್ಲಿ ಮೂಡಿ ಬಂದಿದೆ. ಆಡು ಭಾಷೆಯ ಕನ್ನಡಕ್ಕಿಂತ ಆನೇಕಲ್ ಕನ್ನಡ ಸಖತ್ ಭಿನ್ನವಾಗಿದೆ. ಒಂದು ಸರಳ ವಾಕ್ಯವನ್ನು ಹೇಳಿ ಅದನ್ನು ಆನೇಕಲ್ ಕನ್ನಡದಲ್ಲಿ ಹೇಳಿದ್ದಾರೆ ಅವರು.

ರಂಗಾಯಣ ರಘು ಮಾತನಾಡಿದ ಕನ್ನಡ ನೋಡಿ ದಂಗಾದ ಫ್ಯಾನ್ಸ್
ರಂಗಾಯಣ ರಘು
Follow us
ರಾಜೇಶ್ ದುಗ್ಗುಮನೆ
|

Updated on: May 24, 2024 | 12:52 PM

ರಂಗಾಯಣ ರಘು (Rangayana Raghu) ಅವರು ಓರ್ವ ಶ್ರೇಷ್ಠ ನಟ. ಅವರ ನಟನೆಯನ್ನು ಎಲ್ಲರೂ ಹೊಗಳುತ್ತಾರೆ. ಯಾವುದೇ ಪಾತ್ರ ಕೊಟ್ಟರೂ ಅವರು ನಟಿಸಿ ತೋರಿಸುತ್ತಾರೆ. ಪ್ರತಿ ಪಾತ್ರಕ್ಕೆ ನ್ಯಾಯ ಒದಗಿಸುತ್ತಾರೆ. ಈಗ ಅವರ ನಟನೆಯ ‘ಮೂರನೇ ಕೃಷ್ಣಪ್ಪ’ ಸಿನಿಮಾ ರಿಲೀಸ್ ಆಗಿದೆ. ಹಾಸ್ಯ ಶೈಲಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಈ ಸಿನಿಮಾದ ಪ್ರಮೋಷನ್ ಕೂಡ ಫನ್ ರೀತಿಯಲ್ಲೇ ಮೂಡಿ ಬಂದಿದೆ ಅನ್ನೋದು ವಿಶೇಷ.

‘ಮೂರನೇ ಕೃಷ್ಣಪ್ಪ’ ಸಿನಿಮಾದಲ್ಲಿ ಸಂಪತ್ ಮೈತ್ರಿ, ರಂಗಾಯಣ ರಘು, ಶ್ರೀಪ್ರಿಯಾ, ತುಕಾಲಿ ಸಂತೋಷ್, ಉಗ್ರಂ ಮಂಜು ಮೊದಲಾದವರು ನಟಿಸಿದ್ದಾರೆ. ಈ ಚಿತ್ರವನ್ನು ನವೀನ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಮೋಹನ್ ರೆಡ್ಡಿ ಹಾಗೂ ವೈ. ರವಿ ಶಂಕರ್ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಪ್ರಚಾರವನ್ನು ರಂಗಾಯಣ ರಘು ಮಾಡಿದ್ದಾರೆ.

‘ಮೂರನೇ ಕೃಷ್ಣಪ್ಪ’ ಸಿನಿಮಾ ಆನೇಕಲ್ ಕನ್ನಡ ಶೈಲಿಯಲ್ಲಿ ಮೂಡಿ ಬಂದಿದೆ. ಆಡು ಭಾಷೆಯ ಕನ್ನಡಕ್ಕಿಂತ ಆನೇಕಲ್ ಕನ್ನಡ ಸಖತ್ ಭಿನ್ನವಾಗಿದೆ. ಒಂದು ಸರಳ ವಾಕ್ಯವನ್ನು ಹೇಳಿ ಅದನ್ನು ಆನೇಕಲ್ ಕನ್ನಡದಲ್ಲಿ ಹೇಳಿದ್ದಾರೆ ಅವರು. ‘ಮೂರನೇ ಕೃಷ್ಣಪ್ಪ’ ಸಿನಿಮಾ ಹಳ್ಳಿಯ ಸೊಗಡಿನಲ್ಲಿ ಮೂಡಿ ಬಂದಿದೆ. ಹಳ್ಳಿಯಲ್ಲಿ ನಡೆಯೋ ರಾಜಕೀಯದ ಬಗ್ಗೆ ಇದೆ. ಈ ಸಿನಿಮಾದಲ್ಲಿ ರಂಗಾಯಣ ರಘು ಅವರ ಕನ್ನಡ ನೋಡಿ ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಸಿನಿಮಾ ಯಾವ ರೀತಿಯಲ್ಲಿ ಮೂಡಿ ಬಂದಿದೆ ಅನ್ನೋ ಕುತೂಹಲ ಅಭಿಮಾನಿಗಳಿಗೆ ಇದೆ.

ಇದನ್ನೂ ಓದಿ: ‘ಮೂರನೇ ಕೃಷ್ಣಪ್ಪ’ ಟ್ರೇಲರ್​ನಲ್ಲಿ ರಂಗಾಯಣ ರಘು, ಸಂಪತ್​, ಯೋಗಿ ಕಮಾಲ್​

ರಂಗಾಯಣ ರಘು ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಾರೆ. ಈ ಸಿನಿಮಾದಲ್ಲಿ ಅವರೇ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರ ಪಾತ್ರಕ್ಕೆ ಸಾಕಷ್ಟು ಪ್ರಾಮುಖ್ಯತೆ ಇದೆ. ಬೆಂಗಳೂರಲ್ಲಿ ಈ ಚಿತ್ರಕ್ಕೆ 50ಕ್ಕೂ ಅಧಿಕ ಶೋಗಳು ಸಿಕ್ಕಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ