AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕಿಯಾದ ರಂಜನಿ ರಾಘವನ್; ಇಳಯರಾಜಗೂ ಇಷ್ಟವಾಗಿದೆ ಹೊಸ ಸಿನಿಮಾದ ಕಥೆ

ರಂಜನಿ ರಾಘವನ್ ಅವರು ಕಿರುತೆರೆ ಮತ್ತು ಹಿರಿತೆರೆ ನಟಿಯಾಗಿ ಖ್ಯಾತಿ ಪಡೆದಿದ್ದಾರೆ. ಈಗ ಅವರು ತಮ್ಮ ಮೊದಲ ಕನ್ನಡ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಈ ಚಿತ್ರದ ಕಥೆ ಇಷ್ಟಪಟ್ಟಿದ್ದಾರೆ. ರಂಜನಿ ಅವರು ಹಲವು ವರ್ಷಗಳ ಕನಸು ನನಸಾಗಿದ್ದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ ಮತ್ತು ಕನ್ನಡಿಗರ ಆಶೀರ್ವಾದ ಕೇಳಿದ್ದಾರೆ.

ನಿರ್ದೇಶಕಿಯಾದ ರಂಜನಿ ರಾಘವನ್; ಇಳಯರಾಜಗೂ ಇಷ್ಟವಾಗಿದೆ ಹೊಸ ಸಿನಿಮಾದ ಕಥೆ
ರಂಜನಿ ರಾಘವನ್
ರಾಜೇಶ್ ದುಗ್ಗುಮನೆ
|

Updated on: Jan 01, 2025 | 12:11 PM

Share

ಕಿರುತೆರೆ ನಟಿಯಾಗಿ ಫೇಮಸ್ ಆದವರು ನಟಿ ರಂಜನಿ ರಾಘವನ್. ಆ ಬಳಿಕ ಹಿರಿತೆರೆಯಲ್ಲೂ ಗುರುತಿಸಿಕೊಂಡರು. ಸಮಯ ಮಾಡಿಕೊಂಡು ಕಥೆಗಳನ್ನು ಕೂಡ ಬರೆದಿದ್ದಾರೆ. ಈಗ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ರಂಜನಿ ಈಗ ನಿರ್ದೇಶಕಿ ಆಗಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಈ ವಿಚಾರವನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಅವರು ಮಾಡಿರುವ ಕಥೆ ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಅವರಿಗೂ ಇಷ್ಟ ಆಗಿದೆ ಅನ್ನೋದು ವಿಶೇಷ.

‘ಹೊಸ ವರ್ಷದ ದಿನ ನನ್ನ ಹೊಸ ಕೆಲಸದ ಬಗ್ಗೆ ಹೇಳಿಕೊಳ್ಳಲು ಭಯ ಉತ್ಸಾಹ ಎರಡೂ ಇದೆ. ಈ ಹಿಂದೆ ಬರವಣಿಗೆ ಮತ್ತು ನಟನೆಯ ಮೂಲಕ ಕಥೆಗಳನ್ನ ತಲುಪಿಸೋ ಪ್ರಯತ್ನ ಮಾಡಿದ್ದೇನೆ. ಈಗ ಮೊದಲ ಬಾರಿಗೆ ಕಥೆಯೊಂದನ್ನ ದೊಡ್ಡ ಪರದೆಯ ಮೇಲೆ ನಿಮಗೆ ತೋರಿಸುವತ್ತ ಕೆಲಸ ನಡೆದಿದೆ. ಹೊಸ ಕೆಲಸ ಅನ್ನುವುದಕ್ಕಿಂತ ಸಿನಿಮಾ ನಿರ್ದೇಶಕಿ ಆಗಬೇಕೆಂಬ ಕನಸು ಹೊತ್ತು ಬಹಳ ವರ್ಷಗಳೇ ಸರಿದಿದೆ. ಈ ಕತೆ ಹುಟ್ಟಿ ಎರಡು ವರ್ಷಗಳಾಗಿವೆ. ಒಂದೂವರೆ ವರ್ಷದಿಂದ ಇದರ ಚಿತ್ರಕತೆಯನ್ನ ಬರೆದು ತಿದ್ದಿದ್ದೇನೆ. ಚಿತ್ರರಂಗದ ಹಲವಾರು ಜನರ ಸಹಾಯ ಪ್ರೋತ್ಸಾಹದಿಂದ, ನಮ್ಮ ನಿರ್ಮಾಪಕರಾದ ಡಾ. ಆನಂದ್ ಮತ್ತು ರಾಮಕೃಷ್ಣ ಸುಬ್ರಮಣ್ಯಂ ಅವರ ಸಹಕಾರದಿಂದ ನಮ್ಮ ಸಿನಿಮಾ ಬಗ್ಗೆ ಮಾತನಾಡುವ ಧೈರ್ಯ ಬಂದಿದೆ’ ಎಂದು ಪೋಸ್ಟ್ ಆರಂಭಿಸಿದ್ದಾರೆ ರಂಜನಿ.

‘ಈ ಪಯಣದಲ್ಲಿ ಮುಖ್ಯವಾಗಿ ನನಗೆ ಶಕ್ತಿಯಾಗಿರುವವರು ಇಳಯರಾಜ ಸರ್. 1000ಕ್ಕೂ ಹೆಚ್ಚು ಚಿತ್ರಕ್ಕೆ ಸಂಗೀತ ನೀಡಿರುವವರು ನನ್ನ ಕತೆಯನ್ನ ಮೆಚ್ಚಿ ಜೊತೆಗೆ ನಿಂತಿದ್ದಾರೆ. 2023ರ ಸೆಪ್ಟೆಂಬರ್​​ನಲ್ಲಿ ಅವರನ್ನು ಭೇಟಿ ಆಗಿ ಕತೆ ಹೇಳುವ ಅದೃಷ್ಟ ಸಿಕ್ಕಾಗ “ಚೆನ್ನೈಗೆ ಹೋಗಿ ಅವರನ್ನ ಭೇಟಿ ಆಗಿ, ಕಾಲಿಗೆ ಬಿದ್ದು ಒಂದು ಫೋಟೋ ತೆಗೆಸಿಕೊಂಡು ಬಂದ್ರೆ ಅದೇ ದೊಡ್ಡದು” ಅಂತಷ್ಟೇ ಅಂದುಕೊಂಡಿದ್ದು! ‘ಕನ್ನಡದಲ್ಲಿ ಕಥೆ ಹೇಳಮ್ಮ, ಕನ್ನಡ ನನಗೆ ಚೆನ್ನಾಗಿ ಬರುತ್ತೆ ಕೊಲ್ಲೂರು ಮೂಕಾಂಬಿಕೆ ನನ್ನವ್ವ’ ಎಂದು ಮಾತು ಶುರು ಮಾಡಿದವರು ಮೂರೇ ದಿನದಲ್ಲಿ ಕಥೆ ನನ್ನ ಮನಸ್ಸಿಗೆ ಬಹಳ ಹತ್ತಿರವಾಗಿದೆ ಎಂದು ತಿಳಿಸಿ ನಮ್ಮ ಸಿನಿಮಾದ ಭಾಗವಾಗಿ, ಇವತ್ತಿಗೆ ಇಳಯರಾಜ ಸರ್ ನಮಗೆ ‘ಒನ್ ಕಾಲ್ ಅವೇ’ ಅನ್ನೋ ಜಂಭ ಹುಟ್ಟಿಸಿದ್ದಾರೆ’ ಎಂದಿದ್ದಾರೆ ರಂಜನಿ.

ಇದನ್ನೂ ಓದಿ: ಸಿಂಪಲ್ ಡ್ರೆಸ್​ನಲ್ಲೂ ಸೂಪರ್ ಆಗಿ ಕಾಣಿಸುವ ಕನ್ನಡತಿ ರಂಜನಿ ರಾಘವನ್

‘ಹೋದ ವರ್ಷ 2024 ಜನವರಿಯಲ್ಲಿ ಒಂದು ನನ್ನ ಹೊಸ ಕನಸಿನ ಬಗ್ಗೆ ಪೋಸ್ಟ್ ಹಾಕಿದ್ದರೂ ಅದೇನೆಂದು ಹೇಳಲು 2025 ಬರಬೇಕಾಯಿತು. ಸಿನಿಮಾ ಮಾಡುವಾಗ ಎಲ್ಲವೂ ಅಂದುಕೊಂಡಂತೆ ನಡೆಯುವುದಿಲ್ಲ ಅನ್ನುವುದು ಇಲ್ಲಿಯ ತನಕ ಕಲಿತ ಪಾಠವಾದರೂ ಒಳ್ಳೆಯ ಸಿನಿಮಾ ಆಗಲು ಅದಕ್ಕೇನು ಬೇಕೋ ಅದೇ ಪಡೆದುಕೊಳ್ಳುತ್ತದೆ ಅನ್ನೋ ನಂಬಿಕೆಯೂ ಅಚಲವಾಗಿದೆ. ಕನ್ನಡಿಗರ ಅಶೀರ್ವಾದ, ಸಹಕಾರವನ್ನ ಬೇಡುತ್ತಾ ಮುನ್ನಡೆಯುತ್ತಿದ್ದೇನೆ. ನಿಮ್ಮೆಲ್ಲರಿಗೂ ರಾಶಿ ಪ್ರೀತಿ’ ಎಂದಿದ್ದಾರೆ ರಂಜನಿ ರಾಘವನ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!