‘ಪುಷ್ಪ 2’ ಚಿತ್ರದಲ್ಲಿ ರಣವೀರ್ ಸಿಂಗ್ ಅತಿಥಿ ಪಾತ್ರ? ಪೊಲೀಸ್ ಆಗಿ ಬರ್ತಾರೆ ಬಾಲಿವುಡ್ ಹೀರೋ

ಪುಷ್ಪ’ ತಂಡದವರು ‘ಕೆಜಿಎಫ್’ ತಂತ್ರ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ. ರಣವೀರ್ ಸಿಂಗ್​ಗೆ ಮಣೆ ಹಾಕಲು ನಿರ್ದೇಶಕ ಸುಕುಮಾರ್ ಚಿಂತನೆ ನಡೆಸಿದ್ದಾರೆ.

‘ಪುಷ್ಪ 2’ ಚಿತ್ರದಲ್ಲಿ ರಣವೀರ್ ಸಿಂಗ್ ಅತಿಥಿ ಪಾತ್ರ? ಪೊಲೀಸ್ ಆಗಿ ಬರ್ತಾರೆ ಬಾಲಿವುಡ್ ಹೀರೋ
ರಣವೀರ್​-ಅಲ್ಲು ಅರ್ಜುನ್
Follow us
ರಾಜೇಶ್ ದುಗ್ಗುಮನೆ
|

Updated on: May 25, 2023 | 6:30 AM

‘ಪುಷ್ಪ 2’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರದ ಮೊದಲ ಪಾರ್ಟ್ ಒಳ್ಳೆಯ ಕಲೆಕ್ಷನ್ ಮಾಡಿರುವುದರಿಂದ ಎರಡನೇ ಪಾರ್ಟ್ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಹೀಗಿರುವಾಗಲೇ ‘ಪುಷ್ಪ 2’ (Pushpa 2 Movie)ಬಗ್ಗೆ ಹೊಸ ಅಪ್​ಡೇಟ್ ಒಂದು ಕೇಳಿ ಬಂದಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ (Ranveer Singh) ಅವರು ಅತಿಥಿ ಪಾತ್ರ ಮಾಡುತ್ತಾರೆ ಎಂದು ವರದಿ ಆಗಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ. ಈ ವಿಚಾರ ನಿಜವಾಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

‘ಕೆಜಿಎಫ್: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಎರಡನೇ ಪಾರ್ಟ್​ಗೆ ಬಾಲಿವುಡ್​ ಹೀರೋ ಸಂಜಯ್​ ದತ್​​ನ ಕರೆತರಲಾಯಿತು. ಹಿಂದಿ ಭಾಗದಲ್ಲಿ ‘ಕೆಜಿಎಫ್ 2’ ಬಗ್ಗೆ ಹೈಪ್ ಸೃಷ್ಟಿ ಆಗಲು ಇದು ಕೂಡ ಕಾರಣ ಆಗಿತ್ತು. ಈಗ ಇದೇ ತಂತ್ರವನ್ನು ‘ಪುಷ್ಪ’ ತಂಡದವರು ಅನುಸರಿಸುತ್ತಿದ್ದಾರೆ ಎನ್ನಲಾಗಿದೆ. ರಣವೀರ್ ಸಿಂಗ್​ಗೆ ಮಣೆ ಹಾಕಲು ನಿರ್ದೇಶಕ ಸುಕುಮಾರ್ ಚಿಂತನೆ ನಡೆಸಿದ್ದಾರೆ.

‘ಪುಷ್ಪ’ ಚಿತ್ರದಲ್ಲಿ ರಕ್ತಚಂದನ ಕಳ್ಳಸಾಗಣೆ ವಿಚಾರ ಇದೆ. ಎರಡನೇ ಪಾರ್ಟ್​​ನಲ್ಲೂ ಇದೇ ವಿಚಾರ ಮುಂದುವರಿಯಲಿದೆ. ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ರಣವೀರ್ ಸಿಂಗ್ ನಟಿಸುತ್ತಿದ್ದಾರೆ. ಇದು ಅತಿಥಿ ಪಾತ್ರ ಆಗಿದ್ದು ಮುಖ್ಯ ದೃಶ್ಯವೊಂದರಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎ್ನಲಾಗಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಉತ್ತರ ಭಾರತದ ಖಡಕ್ ಪೊಲೀಸ್ ಅಧಿಕಾರಿಯಾಗಿ ರಣವೀರ್ ತೆರೆಮೇಲೆ ಮಿಂಚಲಿದ್ದಾರೆ. ಈ ಮೊದಲು ಅವರು ‘ಸಿಂಬಾ’ ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡಿದ್ದರು. ಈ ಪಾತ್ರಕ್ಕೂ ‘ಪುಷ್ಪ 2’ ಚಿತ್ರಕ್ಕೂ ಏನಾದರೂ ಕನೆಕ್ಷನ್ ಇಡಲಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

ಇದನ್ನೂ ಓದಿ: Allu Arjun: ‘ಪುಷ್ಪ 2’ ಪೋಸ್ಟರ್​ ರೀತಿ ವೇಷ ಧರಿಸಿ ಬಂದ ಸಂಸದ; ಅಲ್ಲು ಅರ್ಜುನ್​ ಅಭಿಮಾನಿಗಳಲ್ಲಿ ಹೆಚ್ಚಿತು ಕ್ರೇಜ್​

ಈ ಸಿನಿಮಾ ಬಗ್ಗೆ ಅಂತೆ ಕಂತೆಗಳು ಹುಟ್ಟಿಕೊಂಡಿದ್ದು ಹೊಸದೇನು ಅಲ್ಲ. ಈ ಮೊದಲು ಸಾಯಿ ಪಲ್ಲವಿ ಅವರು ಅಲ್ಲು ಅರ್ಜುನ್ ತಂಗಿ ಪಾತ್ರ ಮಾಡುತ್ತಾರೆ ಎಂದು ವರದಿ ಆಗಿತ್ತು. ಆದರೆ ಅದು ಸುಳ್ಳಾಗಿದೆ. ಇನ್ನೂ ಹಲವರ ಹೆಸರು ಕೇಳಿ ಬಂದಿತ್ತು. ಅಲ್ಲು ಅರ್ಜುನ್​ಗೆ ಜೊತೆಯಾಗಿ ರಶ್ಮಿಕಾ ನಟಿಸುತ್ತಿದ್ದಾರೆ. ಫಹಾದ್ ಫಾಸಿಲ್ ಮುಖ್ಯಭೂಮಿಕೆಯಲ್ಲಿದ್ದಾರೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್