ಹಾರರ್ ಶೈಲಿಯಲ್ಲಿ ಮೂಡಿ ಬರಲಿದೆ ರಶ್ಮಿಕಾ ಮಂದಣ್ಣ ಹೊಸ ಸಿನಿಮಾ

|

Updated on: Jun 26, 2024 | 12:01 PM

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಈಗ ರಿಲೀಸ್ ದಿನಾಂಕ ಡಿಸೆಂಬರ್​​ ತಿಂಗಳಿಗೆ ಹೋಗಿದೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಅವರು ಹೊಸ ಬಾಲಿವುಡ್ ಸಿನಿಮಾ ಘೋಷಣೆ ಮಾಡಿದ್ದಾರೆ.

ಹಾರರ್ ಶೈಲಿಯಲ್ಲಿ ಮೂಡಿ ಬರಲಿದೆ ರಶ್ಮಿಕಾ ಮಂದಣ್ಣ ಹೊಸ ಸಿನಿಮಾ
ರಶ್ಮಿಕಾ
Follow us on

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸ್ಯಾಂಡಲ್​ವುಡ್ ನಟಿಯಾಗಿ ಉಳಿದುಕೊಂಡಿಲ್ಲ. ಅವರಿಗೆ ಪರಭಾಷೆಯಲ್ಲಿ ಭರ್ಜರಿ ಬೇಡಿಕೆ ಸೃಷ್ಟಿ ಆಗಿದೆ. ಅಲ್ಲಿ ಅವರು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಈಗ ಅವರಿಗೆ ಹೊಸ ಸಿನಿಮಾ ಆಫರ್ ಸಿಕ್ಕಿದೆ. ಹಿಂದಿಯಲ್ಲಿ ರಶ್ಮಿಕಾ ಹಾರರ್ ಕಾಮಿಡಿ ಶೈಲಿಯ ಸಿನಿಮಾ ಮಾಡೋಕೆ ಮುಂದಾಗಿದ್ದಾರೆ. ಈ ಬಗ್ಗೆ ಬಾಲಿವುಡ್​ ಅಂಗಳದಲ್ಲಿ ಸುದ್ದಿ ಒಂದು ಹರಿದಾಡಿದೆ.

‘ಮುಂಜ್ಯ’ ಚಿತ್ರ ಇತ್ತೀಚೆಗೆ ರಿಲೀಸ್ ಆಗಿ ಗೆಲುವು ಕಂಡಿದೆ. ಈ ಚಿತ್ರವನ್ನು ಆದಿತ್ಯ ಸರ್ಪೋತ್​ದಾರ್ ನಿರ್ದೇಶನ ಮಾಡಿದ್ದಾರೆ. ದಿನೇಶ್ ವಿಜನ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿತ್ತು. ಈಗ ಇಬ್ಬರೂ ಸೇರಿ ಮತ್ತೊಂದು ಚಿತ್ರಕ್ಕೆ ಒಂದಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಆಯುಷ್ಮಾನ್ ಖುರಾನಾ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಾಗಿ ನಟಿಸಲಿದ್ದಾರೆ.  ಹಾರರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರಲಿದೆ.

ದಿನೇಶ್ ವಿಜನ್ ಹಾಗೂ ಆದಿತ್ಯ ಅವರು ಹೊಸ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಮೊದಲು ಆಯುಷ್ಮಾನ್ ಹಾಗೂ ದಿನೇಶ್ ಅವರು ‘ಬಾಲಾ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಹೀಗಾಗಿ, ಇವರು ಮತ್ತೊಮ್ಮೆ ಕುಳಿತು ಮಾತುಕತೆ ನಡೆಸಿದ್ದಾರೆ. ಈ ವರ್ಷಾಂತ್ಯಕ್ಕೆ ಸಿನಿಮಾ ಸೆಟ್ಟೇರೋ ಸಾಧ್ಯತೆ ಇದೆ.

ಆಯುಷ್ಮಾನ್ ಖುರಾನಾ ಹಾಗೂ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ಒಂದಾಗುತ್ತಿದ್ದಾರೆ. ಇವರಿಗೆ ಭಿನ್ನ ಪಾತ್ರಗಳನ್ನು ನೀಡಲಾಗಿದೆ ಎಂದು ವರದಿ ಆಗಿದೆ. ಈ ಸಿನಿಮಾದ ಸ್ಕ್ರಿಪ್ಟ್ ಸಖತ್ ಗಟ್ಟಿಯಾಗಿದೆಯಂತೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ:ಸ್ನೇಹಿತೆಯ ಮದುವೆಯಲ್ಲಿ ಕೊಡವ ಶೈಲಿಯ ಸೀರೆ ಧರಿಸಿದ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಅವರು ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಆಗಸ್ಟ್ 15ರಂದು ರಿಲೀಸ್ ಆಗಬೇಕಿತ್ತು. ಆದರೆ, ಸಿನಿಮಾ ಕೆಲಸ ಪೂರ್ಣಗೊಳ್ಳದ ಕಾರಣ ಚಿತ್ರದ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಇನ್ನೂ ಕೆಲವು ಸಿನಿಮಾಗಳಲ್ಲಿ ರಶ್ಮಿಕಾ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.