AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ನಟನೆಯ ‘ಮಿಷನ್​ ಮಜ್ನು’ ರಿಲೀಸ್​ಗೆ ದಿನಾಂಕ ಫಿಕ್ಸ್​; ಹೊಸ ಪೋಸ್ಟರ್​ ಹಂಚಿಕೊಂಡ ಸಿದ್ದಾರ್ಥ್​

‘ಶೇರ್​ಷಾ’ ಸಿನಿಮಾದಲ್ಲಿ ಸಿದ್ದಾರ್ಥ್​ ಸೈನಿಕನಾಗಿ ಮಿಂಚಿದ್ದರು. ಈಗ ಹೊಸ ಸಿನಿಮಾದಲ್ಲಿ ರಾ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮೇಲೆ ಸಿದ್ದಾರ್ಥ್​ ಹಾಗೂ ರಶ್ಮಿಕಾ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ರಶ್ಮಿಕಾ ನಟನೆಯ ‘ಮಿಷನ್​ ಮಜ್ನು’ ರಿಲೀಸ್​ಗೆ ದಿನಾಂಕ ಫಿಕ್ಸ್​; ಹೊಸ ಪೋಸ್ಟರ್​ ಹಂಚಿಕೊಂಡ ಸಿದ್ದಾರ್ಥ್​
ಸಿದ್ದಾರ್ಥ್​-ರಶ್ಮಿಕಾ
TV9 Web
| Edited By: |

Updated on: Nov 02, 2021 | 3:34 PM

Share

ದಕ್ಷಿಣ ಭಾರತದಲ್ಲಿ ಧೂಳೆಬ್ಬಿಸಿದ ನಂತರ ಬಾಲಿವುಡ್​ಗೆ ಕಾಲಿಡೋಕೆ ರಶ್ಮಿಕಾ ಮಂದಣ್ಣ ರೆಡಿ ಆಗಿದ್ದಾರೆ. ಹಿಂದಿಯಲ್ಲಿ ಬ್ಯಾಕ್​ ಟು ಬ್ಯಾಕ್​ ಎರಡು ಸಿನಿಮಾ ಒಪ್ಪಿಕೊಳ್ಳುವ ಮೂಲಕ ರಶ್ಮಿಕಾ ಬಾಲಿವುಡ್​ನಲ್ಲಿ ನೆಲೆ ಕಂಡುಕೊಳ್ಳೋಕೆ ಪ್ರಯತ್ನ ನಡೆಸುತ್ತಿದ್ದಾರೆ. ಈಗ ರಶ್ಮಿಕಾ ನಟನೆಯ ಮೊದಲ ಬಾಲಿವುಡ್​ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದೆ. ರಶ್ಮಿಕಾ ಜತೆ ನಟಿಸುತ್ತಿರುವ ಸಿದ್ದಾರ್ಥ್​ ಮಲ್ಹೋತ್ರ ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಅಧಿಕೃತ ಮಾಡಿದ್ದಾರೆ. ಹಾಗಾದರೆ, ಈ ಸಿನಿಮಾ ತೆರೆಗೆ ಬರುತ್ತಿರುವುದು ಯಾವಾಗ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಶೇರ್​ಷಾ’ ಸಿನಿಮಾದಲ್ಲಿ ಸಿದ್ದಾರ್ಥ್​ ಸೈನಿಕನಾಗಿ ಮಿಂಚಿದ್ದರು. ಈಗ ಹೊಸ ಸಿನಿಮಾದಲ್ಲಿ ರಾ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮೇಲೆ ಸಿದ್ದಾರ್ಥ್​ ಹಾಗೂ ರಶ್ಮಿಕಾ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ​ಮಂಗಳವಾರ (ನವೆಂಬರ್​ 2) ಸಿದ್ದಾರ್ಥ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಪಾತ್ರದ ಲುಕ್​ ಶೇರ್​ ಮಾಡಿಕೊಂಡಿದ್ದಾರೆ. ಈ ಪೋಸ್ಟರ್​ನಲ್ಲಿ ಅವರು ಕತ್ತಲೆ ರೂಂನಲ್ಲಿ ಕುಳಿತಿದ್ದು, ಫೋನ್​ನಲ್ಲಿ ಮಾತನಾಡುತ್ತಿದ್ದಾರೆ.

;

‘ಪಾಕಿಸ್ತಾನದ ಅಕ್ರಮ ಪರಮಾಣು ಮಹತ್ವಾಕಾಂಕ್ಷೆಗಳನ್ನು ಹಳಿತಪ್ಪಿಸಿದ ಭಾರತದ ಮಹಾನ್ ರಹಸ್ಯ ಕಾರ್ಯಾಚರಣೆಯ ಭಾಗವಾಗಲು ಸಿದ್ಧರಾಗಿ. ಇದು ನೈಜ ಘಟನೆ ಆಧಾರಿತವಾಗಿದೆ. #MissionMajnu ಮೇ 13, 2022ರಂದು ತೆರೆಗೆ ಬರುತ್ತಿದೆ’ ಎಂದು ಸಿದ್ದಾರ್ಥ್​ ಬರೆದುಕೊಂಡಿದ್ದಾರೆ.

‘ಮಿಷನ್​ ಮಜ್ನು’ ನೈಜ ಘಟನೆ ಆಧರಿಸಿ ಸಿದ್ಧಗೊಂಡಿರುವ ಚಿತ್ರವಾದ್ದರಿಂದ ಸಾಕಷ್ಟು ನಿರೀಕ್ಷೆ ಇದೆ. ಸಿದ್ದಾರ್ಥ್​ ಪ್ರತಿ ಸಿನಿಮಾಗೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ರಶ್ಮಿಕಾ ಅವರ ಪಾತ್ರ​ ಇನ್ನೂ ಅನಾವರಣಗೊಂಡಿಲ್ಲ. ಅವರ ಲುಕ್​ ಸಿನಿಮಾದಲ್ಲಿ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳೋಕೆ ಅಭಿಮಾನಿಗಳು ಕಾತುರರಾಗಿದ್ದಾರೆ. ‘ಗುಡ್​ಬೈ’ ಚಿತ್ರದಲ್ಲಿ ಅಮಿತಾಭ್​ ಬಚ್ಚನ್​ ಜೊತೆ ರಶ್ಮಿಕಾ ನಟಿಸುತ್ತಿದ್ದಾರೆ. ಈ ಸಿನಿಮಾದ ಕೆಲಸಗಳು ವೇಗವಾಗಿ ಸಾಗುತ್ತಿದೆ. ತೆಲುಗಿನ ಪುಷ್ಪ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಡಿಸೆಂಬರ್​ ತಿಂಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: Sreeleela: ಸಿನಿಮಾ ಸೋತರೂ ಶ್ರೀಲೀಲಾಗೆ ಭರ್ಜರಿ ಬೇಡಿಕೆ; ಟಾಲಿವುಡ್​ನಲ್ಲಿ ರಶ್ಮಿಕಾ ಮಂದಣ್ಣಗೆ ಚಿಂತೆ ಶುರು?

Saami Saami: ಅಲ್ಲು ಅರ್ಜುನ್​ ಪಂಚೆ ಹಿಡಿದು ರಶ್ಮಿಕಾ ಬಿಂದಾಸ್​ ಡ್ಯಾನ್ಸ್​; ಹೇಗಿದೆ ‘ಸಾಮಿ ಸಾಮಿ..’ ಹಾಡು?

Follow Us
TV9 Web
TV9 Web

TV9 Kannada

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ