ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ

Vijay Devarakonda And Rashmika Mandanna Engagement: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಕ್ಟೋಬರ್ 3ರಂದು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ವದಂತಿಗಳು ಹಬ್ಬಿವೆ. ಫೆಬ್ರವರಿಯಲ್ಲಿ ಇಬ್ಬರೂ ಮದುವೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಗೀತ ಗೋವಿಂದಂ ಸಿನಿಮಾದ ನಂತರ ಇವರ ನಡುವೆ ಪ್ರೀತಿ ಚಿಗುರಿತ್ತು. ಇದಕ್ಕೆ ಈಗ ಹೊಸ ಅರ್ಥ ನೀಡಲಾಗಿದೆ.

ಗುಟ್ಟಾಗಿ ನಡೆಯಿತು ರಶ್ಮಿಕಾ-ವಿಜಯ್ ನಿಶ್ಚಿತಾರ್ಥ? ಫೆಬ್ರವರಿಯಲ್ಲಿ ಮದುವೆ
ರಶ್ಮಿಕಾ-ವಿಜಯ್

Updated on: Oct 04, 2025 | 6:40 AM

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ವಿಜಯ್ ದೇವರಕೊಂಡ  ಗುಟ್ಟಾಗಿ ಸುತ್ತಾಡುತ್ತಿದ್ದಾರೆ ಎಂಬುದು ಹೊಸ ವಿಷಯ ಏನು ಅಲ್ಲ. ಇವರು ಅನೇಕ ಬಾರಿ ಒಟ್ಟಾಗಿ ವಿದೇಶಕ್ಕೆ ತೆರಳಿ ಬಂದಿದ್ದಾರೆ. ಈಗ ಇವರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ 3ರಂದು ಈ ಶುಭ ಸಮಾರಂಭ ನಡೆದಿದೆಯಂತೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಆದರೆ, ರಶ್ಮಿಕಾ ಆಗಲಿ ವಿಜಯ್ ಆಗಲಿ ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಮೊದಲ ಬಾರಿಗೆ ಭೇಟಿ ಆಗಿದ್ದು ‘ಗೀತ ಗೋವಿಂದಂ’ ಸಿನಿಮಾ ಸೆಟ್​ನಲ್ಲಿ. 2018ರಲ್ಲಿ ಈ ಸಿನಿಮಾ ರಿಲೀಸ್ ಆಯಿತು. ಇವರ ಕೆಮಿಸ್ಟ್ರಿ ಪ್ರೇಕ್ಷಕರಿಗೆ ಸಖತ್ ಇಷ್ಟ ಆಯಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಅಂದಿನಿಂದ ಇವರ ಬಾಂಡಿಂಗ್ ಸ್ಟ್ರಾಂಗ್ ಆಗುತ್ತಾ ಬರುತ್ತಿದೆ. ಇವರ ಮಧ್ಯೆ ಪ್ರೀತಿ ಮೂಡಿದ್ದು, ಅದಕ್ಕೆ ಈಗ ಹೊಸ ಅರ್ಥ ನೀಡಲಾಗಿದೆ.

ಕೆಲವು ವರದಿಗಳ ಪ್ರಕಾರ ಮನೆಯವರು ಹಾಗೂ ಆಪ್ತರ ಸಮ್ಮುಖದಲ್ಲಿ ರಶ್ಮಿಕಾ ಎಂಗೇಜ್​ಮೆಂಟ್ ಮಾಡಿಕೊಂಡಿದ್ದಾರಂತೆ. ಈ ವಿಷಯವನ್ನು ಗುಟ್ಟಾಗಿ ಇಡುವ ಕಾರಣದಿಂದಲೇ ಎಲ್ಲಿಯೂ ಫೋಟೋ ಲೀಕ್ ಆಗದಂತೆ ನೋಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಇನ್ನು ನಿಶ್ಚಿತಾರ್ಥದ ವೇಳೆ ಮದುವೆ ಡೇಟ್ ಕೂಡ ನಿಗದಿ ಆಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
ರಚಿತಾ ರಾಮ್​ಗೆ ಡಿ ಬಾಸ್ ದರ್ಶನ್ ಮೇಲೆ ಯಾಕೆ ಅಷ್ಟು ವಿಶೇಷ ಗೌರವ ಗೊತ್ತಾ?
ಕಾಕ್ರೋಚ್ ಸುಧಿ ಕಾರಣಕ್ಕೆ ಹೊತ್ತಿ ಉರಿಯಿತು ಬಿಗ್ ಬಾಸ್ ಮನೆ
‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಫೆಬ್ರವರಿಯಲ್ಲಿ ವಿವಾಹ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಸೆಲೆಬ್ರಿಟಿ ಮದುವೆ ಆದ್ದರಿಂದ ಅದ್ದೂರಿಯಾಗಿ ಇದನ್ನು ನೆರವೇರಿಸಲು ನಿರ್ಧರಿಸಲಾಗಿದೆ. ಸಾಕಷ್ಟು ಸೆಲೆಬ್ರಿಟಿಗಳು ಈ ವಿವಾಹಕ್ಕೆ ಹಾಜರಿ ಹಾಕುವ ನಿರೀಕ್ಷೆ ಇದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ನಟನೆಯ ಹೊಸ ಹಿಂದಿ ಸಿನಿಮಾ ಟ್ರೈಲರ್ ಬಿಡುಗಡೆ

ರಶ್ಮಿಕಾ ಮಂದಣ್ಣ ಅವರು ಸದ್ಯ ಹಲವು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ‘ಥಮ’ ಸಿನಿಮಾ ದೀಪಾವಳಿಗೆ ಬಿಡುಗಡೆ ಆಗಲಿದೆ. ಇದು ಹಾರರ್ ಶೈಲಿಯ ಸಿನಿಮಾ. ವಿಜಯ್ ದೇವರಕೊಂಡ ಅವರ ಅಭಿನಯದ ‘ಕಿಂಗ್​ಡಮ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.