AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಪ್ ಫೇಕ್ ವಿಡಿಯೋ ಸಂತ್ರಸ್ತೆ ರಶ್ಮಿಕಾ ಮಂದಣ್ಣ ಈಗ ಸೈಬರ್ ಭದ್ರತೆ ರಾಯಭಾರಿ

ರಶ್ಮಿಕಾ ಮಂದಣ್ಣ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​ನಲ್ಲಿ ದೊಡ್ಡ-ದೊಡ್ಡ ನಟರೊಟ್ಟಿಗೆ ರಶ್ಮಿಕಾ ನಟಿಸುತ್ತಿದ್ದಾರೆ. ಇದರ ನಡುವೆ ಮಹತ್ತರ ಗೌರವೊಂದಕ್ಕೆ ರಶ್ಮಿಕಾ ಪಾತ್ರರಾಗಿದ್ದಾರೆ. ಸೈಬರ್ ಭದ್ರತೆಗೆ ರಾಯಭಾರಿ ಆಗಿದ್ದಾರೆ ರಶ್ಮಿಕಾ.

ಡೀಪ್ ಫೇಕ್ ವಿಡಿಯೋ ಸಂತ್ರಸ್ತೆ ರಶ್ಮಿಕಾ ಮಂದಣ್ಣ ಈಗ ಸೈಬರ್ ಭದ್ರತೆ ರಾಯಭಾರಿ
ಮಂಜುನಾಥ ಸಿ.
|

Updated on: Oct 15, 2024 | 6:12 PM

Share

ಕನ್ನಡತಿ, ನಟಿ ರಶ್ಮಿಕಾ ಮಂದಣ್ಣ ಈಗ ಕನ್ನಡ ಚಿತ್ರರಂಗದಿಂದ ದೂರಾಗಿ ಪರಭಾಷೆ ಸಿನಿಮಾಗಲ್ಲಿ ಮಿಂಚುತ್ತಿದ್ದಾರೆ. ಅಪ್ಪಿ-ತಪ್ಪಿಯೂ ಕನ್ನಡ ಸಿನಿಮಾದಲ್ಲಿ ನಟಿಸುವ ಯೋಚನೆಯಲ್ಲಿ ರಶ್ಮಿಕಾ ಮಂದಣ್ಣ ಇಲ್ಲ. ಬಾಲಿವುಡ್​ನಲ್ಲಿ ದೊಡ್ಡ ದೊಡ್ಡ ನಟರ ಜೊತೆಗೆ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಇದರ ನಡುವೆ ಮತ್ತೊಂದು ಗೌರವವೊಂದು ರಶ್ಮಿಕಾರನ್ನು ಅರಸಿ ಬಂದಿದೆ. ಈ ಹಿಂದೆ ಡೀಪ್ ಫೇಕ್ ವಿಡಿಯೋನಿಂದ ಸಮಸ್ಯೆ ಎದುರಿಸಿದ್ದ ರಶ್ಮಿಕಾ ಮಂದಣ್ಣ ಈಗ ಭಾರತದ ಸೈಬರ್ ಸೆಕ್ಯುರಿಟಿ ರಾಯಭಾರಿ ಆಗಿ ಆಯ್ಕೆ ಆಗಿದ್ದಾರೆ.

ಕೇಂದ್ರ ಗೃಹ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಐ4ಸಿ (ಇಂಡಿಯನ್ ಸೈಬರ್​ಕ್ರೈಂ ಕೋಆರ್ಡಿನೇಷನ್ ಸೆಂಟರ್) ರಶ್ಮಿಕಾ ಮಂದಣ್ಣರನ್ನು ಭಾರತೀಯ ಸೈಬರ್ ಸುರಕ್ಷಾ ಕಾರ್ಯಕ್ರಮದ ರಾಯಭಾರಿಯಾಗಿ ನೇಮಕ ಮಾಡಿದೆ. ರಶ್ಮಿಕಾ ಮಂದಣ್ಣ, ಇನ್ನು ಮುಂದೆ ಅಪಾಯಕಾರಿ ಸೈಬರ್ ಕ್ರೈಂ, ಡೀಪ್ ಫೇಕ್ ವಿಡಿಯೋ, ಆನ್​ಲೈನ್ ಫ್ರಾಡ್ ಇನ್ನಿತರೆ ಸೈಬರ್ ಸಂಬಂಧಿ ಅಪರಾಧಗಳ ಕುರಿತಾಗಿ ಸಾಕ್ಷರತೆ, ಜಾಗೃತೆ ಮೂಡಿಸುವ ಕಾರ್ಯವನ್ನು ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ರಶ್ಮಿಕಾ ಮಂದಣ್ಣ, ‘ಸೈಬರ್ ಅಪರಾಧವು ಅಪಾಯಕಾರಿ ಮತ್ತು ವ್ಯಾಪಕವಾದ ಸಮಸ್ಯೆಯಾಗಿದೆ. ಅದು ಪ್ರಪಂಚದಾದ್ಯಂತ ಇರುವ ವ್ಯಕ್ತಿಗಳು, ವ್ಯವಹಾರಗಳು ಮತ್ತು ಸಮುದಾಯಗಳ ಮೇಲೆ ಪರಿಣಾಮ ಬೀರುತ್ತದೆ. ಸೈಬರ್ ಸಮಸ್ಯೆಯನ್ನು ಅನುಭವಿಸಿರುವ ವ್ಯಕ್ತಿಯಾಗಿ, ಈ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಧನಾತ್ಮಕ ಬದಲಾವಣೆಯನ್ನು ತರಲು ಸೈಬರ್ ಸುರಕ್ಷತೆಯ ಸಂದೇಶವನ್ನು ಪ್ರಚಾರ ಮಾಡಲು ನಾನು ಉತ್ಸುಕಗಳಾಗಿದ್ದೇನೆ. ಈ ಕಾರ್ಯದಲ್ಲಿ ನಾನು ಸಕ್ರಿಯವಾಗಿ ತೊಡಗಿಕೊಳ್ಳಲಿದ್ದೇನೆ. ಈ ಸೈಬರ್ ಬೆದರಿಕೆಗಳನ್ನು ಎದುರಿಸಲು ಮತ್ತು ನಮ್ಮ ಡಿಜಿಟಲ್ ಸ್ಥಳಗಳನ್ನು ರಕ್ಷಿಸಲು ನಾವು ಒಗ್ಗೂಡುವುದು ಬಹಳ ಮುಖ್ಯವಾಗಿದೆ’ ಎಂದಿದ್ದಾರೆ.

ಇದನ್ನೂ ಓದಿ:ಕಿಲ್ಲಿಂಗ್ ಲುಕ್​ನಲ್ಲಿ ಗಮನ ಸೆಳೆದ ರಶ್ಮಿಕಾ ಮಂದಣ್ಣ

ಕಳೆದ ವರ್ಷ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಯಾವುದೋ ಯುವತಿಯ ಅರೆಬೆತ್ತಲೆ ವಿಡಿಯೋಕ್ಕೆ ರಶ್ಮಿಕಾ ಮಂದಣ್ಣರ ಮುಖವನ್ನು ಜೋಡಿಸಲಾಗಿತ್ತು. ವಿಡಿಯೋ ನೋಡಿದವರು ಇದು ರಶ್ಮಿಕಾರದ್ದೇ ವಿಡಿಯೋ ಎನ್ನುವಂತಿತ್ತು ಅದು. ವಿಡಿಯೋ ವೈರಲ್ ಆದ ಬಳಿಕ ಅಮಿತಾಬ್ ಬಚ್ಚನ್, ಸಿದ್ಧಾರ್ಥ್ ಮಲ್ಹೋತ್ರಾ ಸೇರಿದಂತೆ ಹಲವರು ಆ ವಿಡಿಯೋವನ್ನು ವಿರೋಧಿಸುವ ಜೊತೆಗೆ ರಶ್ಮಿಕಾಗೆ ಬೆಂಬಲ ಸೂಚಿಸಿದ್ದರು. ಬಳಿಕ ಆ ವಿಡಿಯೋಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿತ್ತು.

ರಶ್ಮಿಕಾ ಮಂದಣ್ಣ ಪ್ರಸ್ತುತ ಕೆಲ ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್​ನಲ್ಲಿ ವಿಕ್ಕಿ ಕೌಶನ್ ಜೊತೆ ನಟಿಸಿರುವ ‘ಛಾವಾ’ ಬಿಡುಗಡೆ ಆಗಬೇಕಿದೆ. ಇದರ ನಡುವೆ ಸಲ್ಮಾನ್ ಖಾನ್ ಜೊತೆ ‘ಸಿಖಂಧರ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ವರುಣ್ ಧವನ್ ನಟನೆಯ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ಇನ್ನು ತೆಲುಗಿನಲ್ಲಿ ‘ಪುಷ್ಪ 2’, ‘ಗರ್ಲ್​ಫ್ರೆಂಡ್’, ವಿಜಯ್ ದೇವರಕೊಂಡ ಜೊತೆಗೆ ‘ಗೀತ ಗೋವಿಂದಂ 2’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!