AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡಗೆ ಬರ್ತ್​ಡೆ ವಿಶ್ ಮಾಡಲೇ ಇಲ್ಲ ರಶ್ಮಿಕಾ; ಮೂಡಿದೆ ಅನುಮಾನ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ಕಾಂಬಿನೇಷನ್​ನ ಪ್ರೇಕ್ಷಕರು ಸಖತ್ ಇಷ್ಟಪಟ್ಟರು. ಆ ಬಳಿಕ ಇಬ್ಬರ ಮಧ್ಯೆ ಆಪ್ತತೆ ಬೆಳೆಯಿತು. ಕೆಲವು ವರದಿಗಳ ಪ್ರಕಾರ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಒಟ್ಟಾಗಿದ್ದಾರೆ ಎನ್ನಲಾಗಿದೆ.

ವಿಜಯ್ ದೇವರಕೊಂಡಗೆ ಬರ್ತ್​ಡೆ ವಿಶ್ ಮಾಡಲೇ ಇಲ್ಲ ರಶ್ಮಿಕಾ; ಮೂಡಿದೆ ಅನುಮಾನ
ವಿಜಯ್-ರಶ್ಮಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:May 11, 2024 | 4:22 PM

Share

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಇಬ್ಬರೂ ಆಪ್ತವಾಗಿದ್ದಾರೆ ಅನ್ನೋದು ಗೊತ್ತಿರುವ ವಿವಾರವೇ. ರಶ್ಮಿಕಾ ಮಂದಣ್ಣ ಅವರು ಆಗಾಗ ವಿಜಯ್ ಜೊತೆ ಸುತ್ತಾಟ ನಡೆಸುತ್ತಾ ಇರುತ್ತಾರೆ. ಗುರುವಾರ (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್​ಡೇ ಇತ್ತು. ಆದರೆ, ರಶ್ಮಿಕಾ ಮಂದಣ್ಣ ಅವರು ವಿಜಯ್​ಗೆ ಸೋಶಿಯಲ್ ಮೀಡಿಯಾದಲ್ಲಿ ಜನ್ಮದಿನದ ಶುಭಾಶಯ ಕೋರಿಲ್ಲ. ಇದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ಕಾಂಬಿನೇಷನ್​ನ ಪ್ರೇಕ್ಷಕರು ಸಖತ್ ಇಷ್ಟಪಟ್ಟರು. ಆ ಬಳಿಕ ಇಬ್ಬರ ಮಧ್ಯೆ ಆಪ್ತತೆ ಬೆಳೆಯಿತು. ಕೆಲವು ವರದಿಗಳ ಪ್ರಕಾರ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಒಟ್ಟಾಗಿದ್ದಾರೆ. ಹಲವು ಕಡೆಗಳಲ್ಲಿ ಇವರು ಪ್ರವಾಸ ತೆರಳಿದ್ದಾರೆ. ಆದರೆ, ಈ ವಿಚಾರದಲ್ಲಿ ಇವರು ಬಾಯಿ ಬಿಟ್ಟಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ವಿಜಯ್​ ಬರ್ತ್​ಡೇಗೆ ವಿಶ್ ಮಾಡದೆ ಇರುವುದು ಸಾಕಷ್ಟು ಅನುಮಾನ ಮೂಡಿಸಿದೆ.

ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡಗೆ ಇನ್​ಸ್ಟಾಗ್ರಾಮ್ ಸ್ಟೇಟಸ್ ಮೂಲಕ ವಿಶ್ ಮಾಡಿದ್ದರು. ಈ ಬಾರಿ ಅವರು ಮುಂದಿನ ಸಿನಿಮಾದ ಬಗ್ಗೆ ಘೋಷಣೆ ಮಾಡಿಕೊಂಡಿದ್ದಾರೆ ಅಷ್ಟೇ. ಅದನ್ನು ಹೊರತುಪಡಿಸಿ ಅವರು ಯಾವುದೇ ಸ್ಟೇಟಸ್ ಹಾಕಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಮೂಡಿದೆ.

ರಶ್ಮಿಕಾ-ವಿಜಯ್ ವಿಚಾರ ಇತ್ತೀಚೆಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಇವರು ಎಂಗೇಜ್​ಮೆಂಟ್ ಮಾಡಿಕೊಳ್ಳುತ್ತಾರೆ ಎಂದು ಕೂಡ ಹೇಳಲಾಗಿತ್ತು. ಇದೆಲ್ಲವನ್ನೂ ಅವಾಯ್ಡ್ ಮಾಡಲು ರಶ್ಮಿಕಾ ಅವರು ವಿಜಯ್​ಗೆ ವಿಶ್ ಮಾಡಿಲ್ಲ ಎನ್ನಲಾಗುತ್ತಿದೆ. ರಶ್ಮಿಕಾ ಬರ್ತ್​ಡೇ ದಿನ ಇಬ್ಬರೂ ವಿದೇಶಕ್ಕೆ ತೆರಳಿದ್ದರು. ಅಲ್ಲಿಯೇ ಬರ್ತ್​ಡೇ ಸೆಲೆಬ್ರೇಷನ್ ನಡೆದಿತ್ತು.

ರಶ್ಮಿಕಾ ಮಂದಣ್ಣಗೆ ಬಂಪರ್ ಆಫರ್ ಸಿಕ್ಕಿದೆ. ‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಜೊತೆ ಇವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ವಿಜಯ್ ದೇವರಕೊಂಡ ಮುಂದಿನ ಚಿತ್ರಕ್ಕೆ ರಶ್ಮಿಕಾ ನಾಯಕಿ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರು ಈ ರೀತಿಯ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.

ಇದನ್ನೂ ಓದಿ: ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ಬೇಕು ಅಂತ ಹಠ ಹಿಡಿದಿದ್ದಾರಾ ವಿಜಯ್​ ದೇವರಕೊಂಡ?

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಈ ಮೊದಲು ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇದರಲ್ಲಿ ‘ಗೀತ ಗೋವಿಂದ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ‘ಡಿಯರ್ ಕಾಮ್ರೇಡ್’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:06 am, Fri, 10 May 24

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ