ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಇಬ್ಬರೂ ಆಪ್ತವಾಗಿದ್ದಾರೆ ಅನ್ನೋದು ಗೊತ್ತಿರುವ ವಿವಾರವೇ. ರಶ್ಮಿಕಾ ಮಂದಣ್ಣ ಅವರು ಆಗಾಗ ವಿಜಯ್ ಜೊತೆ ಸುತ್ತಾಟ ನಡೆಸುತ್ತಾ ಇರುತ್ತಾರೆ. ಗುರುವಾರ (ಮೇ 9) ವಿಜಯ್ ದೇವರಕೊಂಡ ಅವರ ಬರ್ತ್ಡೇ ಇತ್ತು. ಆದರೆ, ರಶ್ಮಿಕಾ ಮಂದಣ್ಣ ಅವರು ವಿಜಯ್ಗೆ ಸೋಶಿಯಲ್ ಮೀಡಿಯಾದಲ್ಲಿ ಜನ್ಮದಿನದ ಶುಭಾಶಯ ಕೋರಿಲ್ಲ. ಇದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಈ ಕಾಂಬಿನೇಷನ್ನ ಪ್ರೇಕ್ಷಕರು ಸಖತ್ ಇಷ್ಟಪಟ್ಟರು. ಆ ಬಳಿಕ ಇಬ್ಬರ ಮಧ್ಯೆ ಆಪ್ತತೆ ಬೆಳೆಯಿತು. ಕೆಲವು ವರದಿಗಳ ಪ್ರಕಾರ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ಒಟ್ಟಾಗಿದ್ದಾರೆ. ಹಲವು ಕಡೆಗಳಲ್ಲಿ ಇವರು ಪ್ರವಾಸ ತೆರಳಿದ್ದಾರೆ. ಆದರೆ, ಈ ವಿಚಾರದಲ್ಲಿ ಇವರು ಬಾಯಿ ಬಿಟ್ಟಿಲ್ಲ. ಈಗ ರಶ್ಮಿಕಾ ಮಂದಣ್ಣ ಅವರು ವಿಜಯ್ ಬರ್ತ್ಡೇಗೆ ವಿಶ್ ಮಾಡದೆ ಇರುವುದು ಸಾಕಷ್ಟು ಅನುಮಾನ ಮೂಡಿಸಿದೆ.
ಕಳೆದ ವರ್ಷ ರಶ್ಮಿಕಾ ಅವರು ವಿಜಯ್ ದೇವರಕೊಂಡಗೆ ಇನ್ಸ್ಟಾಗ್ರಾಮ್ ಸ್ಟೇಟಸ್ ಮೂಲಕ ವಿಶ್ ಮಾಡಿದ್ದರು. ಈ ಬಾರಿ ಅವರು ಮುಂದಿನ ಸಿನಿಮಾದ ಬಗ್ಗೆ ಘೋಷಣೆ ಮಾಡಿಕೊಂಡಿದ್ದಾರೆ ಅಷ್ಟೇ. ಅದನ್ನು ಹೊರತುಪಡಿಸಿ ಅವರು ಯಾವುದೇ ಸ್ಟೇಟಸ್ ಹಾಕಿಲ್ಲ. ಹೀಗೇಕೆ ಎನ್ನುವ ಪ್ರಶ್ನೆ ಮೂಡಿದೆ.
ರಶ್ಮಿಕಾ-ವಿಜಯ್ ವಿಚಾರ ಇತ್ತೀಚೆಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಇವರು ಎಂಗೇಜ್ಮೆಂಟ್ ಮಾಡಿಕೊಳ್ಳುತ್ತಾರೆ ಎಂದು ಕೂಡ ಹೇಳಲಾಗಿತ್ತು. ಇದೆಲ್ಲವನ್ನೂ ಅವಾಯ್ಡ್ ಮಾಡಲು ರಶ್ಮಿಕಾ ಅವರು ವಿಜಯ್ಗೆ ವಿಶ್ ಮಾಡಿಲ್ಲ ಎನ್ನಲಾಗುತ್ತಿದೆ. ರಶ್ಮಿಕಾ ಬರ್ತ್ಡೇ ದಿನ ಇಬ್ಬರೂ ವಿದೇಶಕ್ಕೆ ತೆರಳಿದ್ದರು. ಅಲ್ಲಿಯೇ ಬರ್ತ್ಡೇ ಸೆಲೆಬ್ರೇಷನ್ ನಡೆದಿತ್ತು.
ರಶ್ಮಿಕಾ ಮಂದಣ್ಣಗೆ ಬಂಪರ್ ಆಫರ್ ಸಿಕ್ಕಿದೆ. ‘ಸಿಕಂದರ್’ ಸಿನಿಮಾದಲ್ಲಿ ಸಲ್ಮಾನ್ ಖಾನ್ ಜೊತೆ ಇವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ವಿಜಯ್ ದೇವರಕೊಂಡ ಮುಂದಿನ ಚಿತ್ರಕ್ಕೆ ರಶ್ಮಿಕಾ ನಾಯಕಿ ಆಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರು ಈ ರೀತಿಯ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ.
ಇದನ್ನೂ ಓದಿ: ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ಬೇಕು ಅಂತ ಹಠ ಹಿಡಿದಿದ್ದಾರಾ ವಿಜಯ್ ದೇವರಕೊಂಡ?
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಈ ಮೊದಲು ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇದರಲ್ಲಿ ‘ಗೀತ ಗೋವಿಂದ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ‘ಡಿಯರ್ ಕಾಮ್ರೇಡ್’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 9:06 am, Fri, 10 May 24