Rashmika Mandanna Birthday: ರಶ್ಮಿಕಾ ಮಂದಣ್ಣ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳಿಗೆ ಸಿಕ್ಕಿದೆ ಹಲವು ಕಾರಣ

ಅಭಿಮಾನಿಗಳಿಗೆ ರಶ್ಮಿಕಾ ಮಂದಣ್ಣ ಬರ್ತ್​ಡೇ ಆಚರಿಸಲು ಹಲವು ಕಾರಣಗಳು ಸಿಕ್ಕಿವೆ. ಈ ವರ್ಷ ಫ್ಯಾನ್ಸ್ ಪಾಲಿಗೆ ರಶ್ಮಿಕಾ ಬರ್ತ್​​ಡೇ ತುಂಬಾನೇ ವಿಶೇಷ ಎನಿಸಿಕೊಂಡಿದೆ.

Rashmika Mandanna Birthday: ರಶ್ಮಿಕಾ ಮಂದಣ್ಣ ಬರ್ತ್​ಡೇನ ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳಿಗೆ ಸಿಕ್ಕಿದೆ ಹಲವು ಕಾರಣ
ರಶ್ಮಿಕಾ ಮಂದಣ್ಣ
Follow us
ರಾಜೇಶ್ ದುಗ್ಗುಮನೆ
|

Updated on:Apr 05, 2023 | 7:44 AM

ರಶ್ಮಿಕಾ ಮಂದಣ್ಣ (Rashmika Mandanna) ಅವರು ಇಂದು (ಏಪ್ರಿಲ್​ 5) ಬರ್ತ್​ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಕೆಲವೇ ವರ್ಷಗಳಲ್ಲಿ ಸ್ಟಾರ್​ಪಟ್ಟ ಗಿಟ್ಟಿಸಿಕೊಂಡು ಮೆರೆಯುತ್ತಿದ್ದಾರೆ. ಯಾರು ಎಷ್ಟೇ ಟ್ರೋಲ್ ಮಾಡಿದರೂ ಅವರ ಯಶಸ್ಸಿನ ಓಟಕ್ಕೆ ಸದ್ಯಕ್ಕಂತೂ ಬ್ರೇಕ್ ಬೀಳುವುದು ಅನುಮಾನವೇ. ಅಭಿಮಾನಿಗಳಿಗೆ ರಶ್ಮಿಕಾ ಮಂದಣ್ಣ ಬರ್ತ್​ಡೇ (Rashmika Mandanna Birthday)  ಆಚರಿಸಲು ಹಲವು ಕಾರಣಗಳು ಸಿಕ್ಕಿವೆ. ಈ ವರ್ಷ ಫ್ಯಾನ್ಸ್ ಪಾಲಿಗೆ ರಶ್ಮಿಕಾ ಬರ್ತ್​​ಡೇ ತುಂಬಾನೇ ವಿಶೇಷ ಎನಿಸಿಕೊಂಡಿದೆ.

2016ರಲ್ಲಿ ತೆರೆಗೆ ಬಂದ ‘ಕಿರಿಕ್​ ಪಾರ್ಟಿ’ ಸಿನಿಮಾ ರಶ್ಮಿಕಾ ನಟನೆಯ ಮೊದಲ ಸಿನಿಮಾ. ನಂತರ ಪುನೀತ್ ರಾಜ್​ಕುಮಾರ್ ಜೊತೆ ‘ಅಂಜನಿ ಪುತ್ರ’ ಸಿನಿಮಾದಲ್ಲಿ ರಶ್ಮಿಕಾ ನಟಿಸಿದರು. ಗಣೇಶ್ ಜೊತೆ ‘ಚಮಕ್’ ಮಾಡಿ ಜನಪ್ರಿಯತೆ ಹೆಚ್ಚಿಸಿಕೊಂಡರು. ತೆಲುಗಿನ ‘ಚಲೋ’ ಸಿನಿಮಾದಲ್ಲಿ ನಟಿಸಿದ ಬಳಿಕ ರಶ್ಮಿಕಾ ಲಕ್ ಬದಲಾಯಿತು. ‘ಗೀತ ಗೋವಿಂದಂ’, ‘ಸರಿಲೇರು ನೀಕೆವ್ವರು’, ‘ಭೀಷ್ಮ’ ‘ಪುಷ್ಪ’ ಮೊದಲಾದ ಸೂಪರ್ ಹಿಟ್ ಚಿತ್ರಗಳನ್ನು ರಶ್ಮಿಕಾ ನೀಡಿದ್ದಾರೆ.

ಬ್ಯಾಕ್ ಟು ಬ್ಯಾಕ್ ಹಿಟ್

ರಶ್ಮಿಕಾ ಮಂದಣ್ಣ ಅವರಿಗೆ 2022 ವಿಶೇಷ ಎನಿಸಿಕೊಂಡಿದೆ. ಜನವರಿ ತಿಂಗಳಲ್ಲಿ ರಿಲೀಸ್ ಆದ ಅವರ ನಟನೆಯ ‘ವಾರಿಸು’ ಸಿನಿಮಾ ಯಶಸ್ಸು ಕಂಡಿತು. ದಳಪತಿ ವಿಜಯ್ ಜೊತೆ ರಶ್ಮಿಕಾ ತೆರೆಹಂಚಿಕೊಂಡಿದ್ದರು. ಈ ಸಿನಿಮಾದಲ್ಲಿ ರಶ್ಮಿಕಾಗೆ ಹೆಚ್ಚು ಸ್ಕ್ರೀನ್​ಸ್ಪೇಸ್ ಸಿಕ್ಕಿಲ್ಲ ಎನ್ನುವ ಟೀಕೆಗಳು ಬಂದವು. ಆದರೆ, ಸಿಕ್ಕ ಅವಕಾಶನ್ನು ಅವರು ಬಳಕೆ ಮಾಡಿಕೊಂಡಿದ್ದರು. ವಿಜಯ್ ಜೊತೆ ಹೆಜ್ಜೆ ಹಾಕಿ ಭೇಷ್ ಎನಿಸಿಕೊಂಡರು. ಇನ್ನು, ‘ಮಿಷನ್​ ಮಜ್ನು’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗಿ ವಿಮರ್ಶಕರಿಂದ ಮೆಚ್ಚುಗೆ ಪಡೆಯಿತು. ಇದು ರಶ್ಮಿಕಾ ಅಭಿಮಾನಿಗಳ ಖುಷಿ ಹೆಚ್ಚಿಸಿದೆ.

ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡ ನಟಿ

ರಶ್ಮಿಕಾ ಮಂದಣ್ಣ ಕೈಯಲ್ಲಿ ‘ಪುಷ್ಪ 2’ ಹಾಗೂ ‘ಅನಿಮಲ್​’ ಸಿನಿಮಾ ಇದೆ. ಎರಡೂ ಸಿನಿಮಾಗಳು ದೊಡ್ಡ ಬಜೆಟ್​ನಲ್ಲಿ ಸಿದ್ಧಗೊಳ್ಳುತ್ತಿವೆ. ಇದರ ಜೊತೆಗೆ ನಿತೀನ್ ಜೊತೆ ರಶ್ಮಿಕಾ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಮಹಿಳಾಪ್ರಧಾನ ಸಿನಿಮಾ ‘ರೇನ್​ಬೋ’ ಚಿತ್ರಕ್ಕೂ ರಶ್ಮಿಕಾ ನಾಯಕಿ. ಈ ಎರಡೂ ಹೊಸ ಚಿತ್ರಗಳು ತೆಲುಗಿನಲ್ಲಿ ಸಿದ್ಧಗೊಳ್ಳುತ್ತಿದ್ದು, ರಶ್ಮಿಕಾ ಬರ್ತ್​ಡೇ ಹೊಸ್ತಿಲಲ್ಲಿ ಮುಹೂರ್ತ ನಡೆದಿವೆ. ಈ ಕಾರಣಕ್ಕೂ ರಶ್ಮಿಕಾ ಫ್ಯಾನ್ಸ್ ಖುಷಿಯಾಗಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಮಹಿಳಾ ಪ್ರಧಾನ ಸಿನಿಮಾ ಸಿಗಲು ಕಾರಣವಾಗಿದ್ದು ಸಮಂತಾ 

ಮೆಚ್ಚುಗೆ ಪಡೆಯುತ್ತಿರೋ ನಟಿ

ರಶ್ಮಿಕಾ ಮಂದಣ್ಣ ಅವರನ್ನು ಯಾರು ಎಷ್ಟೇ ಟ್ರೋಲ್ ಮಾಡಿದರೂ ಅವರು ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ತಮ್ಮ ಕೆಲಸವನ್ನು ಮುಂದುವರಿಸುತ್ತಾರೆ. ಇತ್ತೀಚೆಗೆ ರಶ್ಮಿಕಾ ಹೆಚ್ಚೆಚ್ಚು ಮೆಚ್ಚುಗೆ ಪಡೆಯುತ್ತಿದ್ದಾರೆ. ಐಪಿಎಲ್ ವೇದಿಕೆ ಮೇಲೆ ಹೆಜ್ಜೆ ಹಾಕಿ ರಶ್ಮಿಕಾ ಗಮನಸೆಳೆದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:44 am, Wed, 5 April 23

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು